Homeಕರ್ನಾಟಕಬಿಜೆಪಿಯವರು ಅದೆಷ್ಟೇ ಷಡ್ಯಂತ್ರ ನಡೆಸಿದರೂ ಅನ್ನಭಾಗ್ಯದ ಅಕ್ಕಿ 10 ಕೆಜಿಗೆ ಏರಿಸುವುದು ನಿಶ್ಚಿತ: ಕಾಂಗ್ರೆಸ್ ವಾಗ್ದಾನ

ಬಿಜೆಪಿಯವರು ಅದೆಷ್ಟೇ ಷಡ್ಯಂತ್ರ ನಡೆಸಿದರೂ ಅನ್ನಭಾಗ್ಯದ ಅಕ್ಕಿ 10 ಕೆಜಿಗೆ ಏರಿಸುವುದು ನಿಶ್ಚಿತ: ಕಾಂಗ್ರೆಸ್ ವಾಗ್ದಾನ

- Advertisement -
- Advertisement -

ಸಿದ್ದರಾಮಯ್ಯ ಅವರ ಕನಸಿನ ಯೋಜನೆ ಎಂದೇ ಕರೆಸಿಕೊಳ್ಳುವ ”ಅನ್ನಭಾಗ್ಯ” ಯೋಜನೆಗೆ ಇದೀಗ ಕತ್ತರಿ ಹಾಕಲಾಗುತ್ತದೆ ಎಂದು ಎನ್ನುವ ವಿಚಾರ ಚರ್ಚೆಯಾಗುತ್ತಿದೆ. ಈ ಕುರಿತು ಕಾಂಗ್ರೆಸ್ ಕಿಡಿಕಾರಿದ್ದು, ”ಕೇಂದ್ರ ಸರ್ಕಾರ ಹಾಗೂ ರಾಜ್ಯ ಬಿಜೆಪಿ ನಾಯಕರು ಅದೆಷ್ಟೇ ಷಡ್ಯಂತ್ರ ನಡೆಸಿದರೂ ನಾವು ಅನ್ನಭಾಗ್ಯದ ಅಕ್ಕಿಯನ್ನು 10 ಕೆಜಿಗೆ ಏರಿಸುವುದು ನಿಶ್ಚಿತ” ಎಂದು ಹೇಳಿದೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ”ಕೇಂದ್ರ ಸರ್ಕಾರ ಹಾಗೂ ರಾಜ್ಯ ಬಿಜೆಪಿ ನಾಯಕರು ಅದೆಷ್ಟೇ ಷಡ್ಯಂತ್ರ ನಡೆಸಿದರೂ ನಾವು ಅನ್ನಭಾಗ್ಯದ ಅಕ್ಕಿಯನ್ನು 10 ಕೆಜಿಗೆ ಏರಿಸುವುದು ನಿಶ್ಚಿತ. ಬಸವಣ್ಣನ ಅನುಭವ ಮಂಟಪದ ದಾಸೋಹಕ್ಕೂ ವಿರೋಧಿಗಳು ಇಂತಹದ್ದೇ ಅಡೆತಡೆಗಳನ್ನು ಸೃಷ್ಟಿಸಿದ್ದರು. ನಮ್ಮ ಅನ್ನಭಾಗ್ಯದ ದಾಸೋಹವನ್ನು ಬಿಜೆಪಿಗರ ಯಾವ ಕುತಂತ್ರವೂ ತಡೆಯಲು ಸಾಧ್ಯವಿಲ್ಲ” ಎಂದು ಖಡಕ್ ಸಂದೇಶ ನೀಡಿದ್ದಾರೆ.

”ಕೇಂದ್ರ ಸರ್ಕಾರ ಸ್ಪಷ್ಟವಾಗಿ ಆಹಾರ ಹಕ್ಕು ಕಾಯ್ದೆಯನ್ನು ಉಲ್ಲಂಘಿಸುತ್ತಿದೆ. 7 ಲಕ್ಷ ಟನ್ ಅಕ್ಕಿ ಸಂಗ್ರಹವಿದ್ದರೂ ರಾಜ್ಯಗಳಿಗೆ FCI ಅಕ್ಕಿ ಮಾರಾಟ ಮಾಡುವುದನ್ನು ನಿರಾಕರಿಸುವ ಮೂಲಕ ಕನ್ನಡಿಗರ ಮೇಲೆ ದ್ವೇಷ ಸಾಧಿಸುತ್ತಿದ್ದಾರೆ ಮೋದಿ. ಖಾಸಗಿಯವರಿಗೆ ಮಾರಾಟ ಮಾಡುವ ಅವಕಾಶವಿರುವಾಗ ರಾಜ್ಯ ಸರ್ಕಾರಕ್ಕೆ ಏಕೆ ಈ ನಿರಾಕರಣೆ. ಇದು ದುರುದ್ದೇಶವಲ್ಲದೆ ಇನ್ನೇನು?” ಎಂದು ಪ್ರಶ್ನೆ ಮಾಡಿದೆ.

”ಕಳೆದ ವರ್ಷ ಸರ್ಕಾರಿ ದಾಸ್ತಾನಿನಲ್ಲಿದ್ದ ಅಪಾರ ಪ್ರಮಾಣದ ದವಸ ಧಾನ್ಯದ ಹಾಳಾಗಿ ಹೋಗಿದ್ದ ವರದಿಯಾಗಿತ್ತು. ಈಗಲೂ 7 ಲಕ್ಷ ಟನ್ ಅಕ್ಕಿಯನ್ನು ಗೋದಾಮಿನಲ್ಲಿಟ್ಟು ಕೊಳೆಸುತ್ತಿದೆ ಕೇಂದ್ರ ಸರ್ಕಾರ. ರಾಜ್ಯ ಸರ್ಕಾರ ಹಣ ಕೊಟ್ಟರೂ ಅಕ್ಕಿ ಕೊಡಲೊಪ್ಪದ್ದು ಜನವಿರೋಧಿ ನಡೆಯಲ್ಲವೇ? ಬಡವರ ಅನ್ನ ಕಿತ್ತೂಕೊಳ್ಳಲು ಬಿಜೆಪಿ ನಾನಾ ಮಾರ್ಗ ಹುಡುಕುತ್ತಿದೆ!” ಎಂದು ಟೀಕೆ ಮಾಡಿದೆ.

”ಕಳೆದ 6 ವರ್ಷದಲ್ಲಿ 25,000 ಮೆಟ್ರಿಕ್ ಟನ್ ದವಸ ಧಾನ್ಯಗಳು ಕೇಂದ್ರದ ಗೋದಾಮಿನಲ್ಲಿ ನಷ್ಟವಾಗಿದೆ. ಮೈತುಂಬ ದ್ವೇಷ ರಾಜಕಾರಣವನ್ನೇ ತುಂಬಿಕೊಂಡಿರುವ ಮೋದಿಯವರಿಗೆ ದವಸಧಾನ್ಯಗಳನ್ನು ಜನರ ಹಸಿವು ನೀಗಿಸಲು ನೀಡುವುದಕ್ಕಿಂತ ಇಲಿ ಹೆಗ್ಗಣಗಳ ಹೊಟ್ಟೆ ತುಂಬಿಸುವಲ್ಲಿಯೇ ಹೆಚ್ಚಿನ ಆಸಕ್ತಿ ಇದ್ದಂತಿದೆ. ಆಹಾರ ಹಕ್ಕನ್ನು ನಿರಾಕರಿಸುವುದು ಸಂವಿಧಾನ ವಿರೋಧಿ ನಡೆ” ಎಂದು ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.

ಬಿಜೆಪಿ ನಾಯಕರ ವಿರುದ್ದ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

ಈ ಬಗ್ಗೆ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ”ಹೆಚ್ಚುವರಿ ತಲಾ 5 ಕೆ.ಜಿ ಅಕ್ಕಿ ವಿತರಣೆಗಾಗಿ ತಿಂಗಳಿಗೆ 2.28 ಲಕ್ಷ ಟನ್ ಅಕ್ಕಿ ನೀಡಲು ಒಪ್ಪಿದ್ದ ಭಾರತೀಯ ಆಹಾರ ನಿಗಮ ಈಗ ಹಿಂದೇಟು ಹಾಕಿದೆ. ಇದಕ್ಕೆ ಬಿಜೆಪಿಯ ಬಡವರ ವಿರೋಧಿ ಧೋರಣೆಯೇ ಕಾರಣ. ಈ ಸಂಬಂಧ ಕೇಂದ್ರಕ್ಕೆ ಪ್ರತಿಭಟನಾ ಪತ್ರ ಬರೆಯಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

”ಭಾರತೀಯ ಆಹಾರ ನಿಗಮವು 7 ಲಕ್ಷ ಟನ್ ಅಕ್ಕಿ ಇಟ್ಟುಕೊಂಡು ಕೊಡುವುದಿಲ್ಲ ಎನ್ನುತ್ತಿದೆ. ಅನ್ನಭಾಗ್ಯ ಯೋಜನೆಯಿಂದ ಕಾಂಗ್ರೆಸ್‌ಗೆ ಒಳ್ಳೆಯ ಹೆಸರು ಬರುತ್ತದೆ. ಬಡವರ ಕಲ್ಯಾಣ ಆಗುತ್ತದೆ. ಅದನ್ನು ತಪ್ಪಿಸಬೇಕು ಎಂದೇ ಕೇಂದ್ರ ಸರ್ಕಾರ ರಾಜಕಾರಣ ಮಾಡುತ್ತಿದೆ” ಎಂದು ಹೇಳಿದರು.

”ನಿಗಮವು ನಮಗೆ ಅಕ್ಕಿ ಕೊಡುವುದಾಗಿ ತಿಳಿಸಿದ್ದರಿಂದಲೇ ನಾವು ಜುಲೈ 1 ರಿಂದ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್‌ದಾರರಿಗೆ ತಲಾ 10 ಕೆ.ಜಿ ಅಕ್ಕಿ ಕೊಡುವುದಾಗಿ ಹೇಳಿದ್ದೆವು. ಈಗ ಕೊಡುವುದಿಲ್ಲ ಎನ್ನುತ್ತಿದೆ. ಬೇರೆ ರಾಜ್ಯಗಳಿಂದ ಖರೀದಿಸಬೇಕಾಗಿದೆ. ತಮ್ಮ ಬಳಿ ಅಕ್ಕಿ ಇಲ್ಲ ಎಂದು ಪಂಜಾಬ್ ಹೇಳಿದೆ. ಛತ್ತೀಸ್‌ಗಢ ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ನೋಡೋಣ ಎಂದಿದ್ದಾರೆ. ಆ ರಾಜ್ಯಗಳ ಜತೆ ಮಾತುಕತೆಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ಅಲ್ಲಿಗೆ ತೆರಳಲಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅನ್ನಭಾಗ್ಯಕ್ಕೆ ಕತ್ತರಿ ಹಾಕಲು ಮುಂದಾದ ಕೇಂದ್ರ: ಪ್ರತಿಭಟನಾ ಪತ್ರ ಬರೆಯುವ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...