Homeಮುಖಪುಟಮಣಿಪುರದಲ್ಲಿ ಹೆಚ್ಚಾದ ಹಿಂಸಾಚಾರ: ಕೇಂದ್ರ ಸಚಿವರ ಮನೆಗೆ ಬೆಂಕಿ!

ಮಣಿಪುರದಲ್ಲಿ ಹೆಚ್ಚಾದ ಹಿಂಸಾಚಾರ: ಕೇಂದ್ರ ಸಚಿವರ ಮನೆಗೆ ಬೆಂಕಿ!

- Advertisement -
- Advertisement -

ಮಣಿಪುರದಲ್ಲಿ ಕೆಲ ತಿಂಗಳಿನಿಂದ ನಡೆಯುತ್ತಿರುವ ಹಿಂಸಾಚಾರ ಮುಂದುವರೆದಿದ್ದು, ಗುರುವಾರ ರಾತ್ರಿ 11ರ ಸುಮಾರಿಗೆ ಗಲಭೆ ಪೀಡಿತ ಮಣಿಪುರ ಕೊಂಗಾದಲ್ಲಿರುವ ಕೇಂದ್ರ ಸಚಿವ ಆರ್.ಕೆ. ರಂಜನ್ ಸಿಂಗ್ ಅವರ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ರಾತ್ರಿ 11ರ ಸುಮಾರಿಗೆ ಸಾವಿರಕ್ಕೂ ಹೆಚ್ಚು ಜನರ ಗುಂಪು ವಿದೇಶಾಂಗ ಇಲಾಖೆ ರಾಜ್ಯ ಖಾತೆ ಸಚಿವ ರಂಜನ್ ಸಿಂಗ್‌ ನಿವಾಸದ ಮೇಲೆ ದಾಳಿ ಮಾಡಿ, ಬೆಂಕಿ ಹಚ್ಚಿದ್ದು, ಅವರ ನಿವಾಸಕ್ಕೆ ಭಾರಿ ಹಾನಿಯಾಗಿದೆ. ಘಟನೆ ಸಂದರ್ಭದಲ್ಲಿ ಸಿಂಗ್‌ ಹಾಗೂ ಅವರ ಕುಟುಂಬ ಮಣಿಪುರದಲ್ಲಿ ಇರಲಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಈ ಘಟನೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರಂಜನ್ ಸಿಂಗ್‌, ”ಸರ್ಕಾರಿ ಕೆಲಸದ ವಿಚಾರವಾಗಿ ನಾನೀಗ ಕೇರಳದಲ್ಲಿದ್ದೇನೆ. ಅದೃಷ್ಟವಶಾತ್ ನನ್ನ ಮನೆಯಲ್ಲಿ ಕಳೆದ ರಾತ್ರಿ ಯಾರೊಬ್ಬರೂ ಗಾಯಗೊಂಡಿಲ್ಲ. ಕಿಡಿಗೇಡಿಗಳು ಪೆಟ್ರೋಲ್ ಬಾಂಬ್‌ಗಳೊಂದಿಗೆ ಬಂದಿದ್ದರು. ನನ್ನ ಮನೆಯ ನೆಲಮಹಡಿ ಮತ್ತು ಮೊದಲ ಮಹಡಿಗೆ ಹಾನಿಯಾಗಿದೆ. ಇದು ನೋವಿನ ಸಂಗತಿ. ಈಗಲೂ ಶಾಂತಿ ಕಾಪಾಡುವಂತೆ ಜನರಲ್ಲಿ ಮನವಿ ಮಾಡುತ್ತೇನೆ. ಈ ರೀತಿಯ ಕೃತ್ಯದಲ್ಲಿ ಭಾಗಿಯಾಗುವುದು ಸಂಪೂರ್ಣ ಅಮಾನವೀಯವಾದದ್ದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಂದುವರೆದ ಮಣಿಪುರ ಹಿಂಸಾಚಾರ: ಸಚಿವೆ ಮನೆಗೆ ಬೆಂಕಿ; ಭುಗಿಲೆದ್ದ ಆಕ್ರೋಶ

ಬುಧವಾರ ಶಂಕಿತ ಉಗ್ರರು ಪೂರ್ವ ಇಂಫಾಲದ ಖಾಮೆಲಾಕ್‌ ಗ್ರಾಮದಲ್ಲಿ ನಡೆಸಿದ ದಾಳಿ ವೇಳೆ 9 ಮಂದಿ ಮೃತಪಟ್ಟು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಘಟನೆ ಬೆನ್ನಲ್ಲೇ ಕೈಗಾರಿಕಾ ಸಚಿವೆ ನೆಮ್ಚಾ ಕಿಪ್‌ಗೆನ್‌ ನಿವಾಸಕ್ಕೆ ಬೆಂಕಿ ಹಚ್ಚಲಾಗಿತ್ತು. ಕಳೆದ ತಿಂಗಳು ಲೋಕೋಪಯೋಗಿ ಸಚಿವರ ಮನೆಯ ಮೇಲೆ ಇದೇ ರೀತಿ ದಾಳಿ ಮಾಡಲಾಗಿತ್ತು.

ಕೈಗಾರಿಕಾ ಸಚಿವೆ ನೆಮ್ಚಾ ಕಿಪ್‌ಗೆನ್‌ ಅವರಿಗೆ ಸೇರಿದ ಲಾಂಫೀಲ್‌ ಪ್ರದೇಶದಲ್ಲಿರುವ ಸರ್ಕಾರಿ ನಿವಾಸಕ್ಕೆ ಬುಧವಾರ ರಾತ್ರಿ ಬೆಂಕಿ ಹಚ್ಚಲಾಗಿತ್ತು. ಈ ಕೃತ್ಯ ನಡೆದ ವೇಳೆ ಸಚಿವೆ ಮನೆಯಲ್ಲಿ ಇರಲಿಲ್ಲ. ಅಧಿಕೃತ ಪ್ರವಾಸದ ಕಾರಣದಿಂದ ಹೊರಗಿದ್ದರು. ಈ ವೇಳೆ ಈ ದುಷ್ಕೃತ್ಯ ನಡೆಸಲಾಗಿದೆ. ಮನೆಯಲ್ಲಿದ್ದ ವಸ್ತುಗಳು ಬೆಂಕಿಗಾಹುತಿಯಾಗಿದ್ದು ಅಪಾರ ಪ್ರಮಾಣದ ನಷ್ಟವಾಗಿದೆ.

ಮಣಿಪುರದಲ್ಲಿ ಪರಿಶಿಷ್ಟ ಪಂಗಡ ಮೀಸಲಾತಿ ವಿಚಾರವಾಗಿ ಮೈತೆಯಿ ಮತ್ತು ಕುಕಿ ಸಮುದಾಯದ ನಡುವೆ ಒಂದು ತಿಂಗಳಿಂದ ಹಿಂಸಾಚಾರ ನಡೆಯುತ್ತಿದೆ. ಇದುವರೆಗೆ 100ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ರಾಜ್ಯದಲ್ಲಿ ಶಾಂತಿ ಸ್ಥಾಪಿಸಲು ಸೇನೆ ಮತ್ತು ಅರೆ ಪಡೆಗಳನ್ನು ನಿಯೋಜಿಸಲಾಗಿದೆ. ಶಂಕಿತ ಉಗ್ರರು ಮಂಗಳವಾರ (ಜೂನ್ 13) ರಾತ್ರಿ ದಾಳಿ ನಡೆಸಿದ್ದರು. ಘಟನೆಯಲ್ಲಿ 9 ಮಂದಿ ಮೃತಪಟ್ಟು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಇದರ ಬೆನ್ನಲ್ಲೇ, ಕುಕಿ ಸಮುದಾಯದ ನಾಯಕಿಯಾಗಿರುವ ನೆಮ್ಮಾ ಕಿಪ್‌ಗೆನ್ ಅವರ ಅಧಿಕೃತ ನಿವಾಸಕ್ಕೆ ಬುಧವಾರ (ಜೂನ್ 14) ರಾತ್ರಿ ಅಪರಿಚಿತರು ಬೆಂಕಿ ಹಚ್ಚಿದ್ದರು. ಗುರುವಾರವೂ ಹಲವು ಮನೆಗಳಿಗೆ ಬೆಂಕಿ ಹಚ್ಚಲಾಗಿತ್ತು. ಗುರುವಾರ ರಾತ್ರಿ 11ರ ಸುಮಾರಿಗೆ ಗಲಭೆ ಪೀಡಿತ ಮಣಿಪುರ ಕೊಂಗಾದಲ್ಲಿರುವ ಕೇಂದ್ರ ಸಚಿವ ಆರ್.ಕೆ. ರಂಜನ್ ಸಿಂಗ್ ಅವರ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...