Homeಮುಖಪುಟಕೇರಳ: ಸಾಲು ಸಾಲಾಗಿ ಬಿಜೆಪಿ ತೊರೆಯುತ್ತಿರುವ ಚಿತ್ರರಂಗದ ಪ್ರಮುಖರು

ಕೇರಳ: ಸಾಲು ಸಾಲಾಗಿ ಬಿಜೆಪಿ ತೊರೆಯುತ್ತಿರುವ ಚಿತ್ರರಂಗದ ಪ್ರಮುಖರು

- Advertisement -
- Advertisement -

ಮಲಯಾಳಂ ಚಿತ್ರ ನಿರ್ದೇಶಕ ಹಾಗೂ ಸಂಘ ಪರಿವಾರ ನಿಷ್ಟರಾದ ರಾಮಸಿಂಹನ್ ಅಬೂಬಕ್ಕರ್ ಇಂದು ಬಿಜೆಪಿ ತೊರೆದಿರುವುದಾಗಿ ಘೋಷಿಸಿದ್ದಾರೆ. ಆ ಮೂಲಕ ಇತ್ತೀಚಿಗೆ ಸಾಲು ಸಾಲಾಗಿ ಬಿಜೆಪಿ ತೊರೆಯುತ್ತಿರುವ ಚಿತ್ರರಂಗದ ಪ್ರಮುಖರ ಪಾಲಿಗೆ ಸೇರ್ಪಡೆಯಾಗಿದ್ದಾರೆ.

ಕೇರಳದಲ್ಲಿ ಕಳೆದ ಎರಡು ವಾರಗಳಲ್ಲಿ ಬಿಜೆಪಿ ತೊರೆದ ಮೂರನೇ ಚಿತ್ರರಂಗದ ವ್ಯಕ್ತಿ ಅವರಾಗಿದ್ದಾರೆ. ಈ ಹಿಂದೆ ಮಲಯಾಳಂ ನಿರ್ದೇಶಕ ರಾಜಸೇನನ್ ಮತ್ತು ನಟ ಭೀಮನ್ ರಘು ಅವರು ಬಿಜೆಪಿ ತೊರೆದು ಆಡಳಿತಾರೂಢ ಸಿಪಿಐ(ಎಂ) ಜೊತೆ ಕೆಲಸ ಮಾಡುವುದಾಗಿ ಘೋಷಿಸಿದ್ದರು. ಇವರಿಬ್ಬರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಡಿ ಸ್ಪರ್ಧಿಸಿ ಸೋಲು ಕಂಡಿದ್ದರು.

ಅಲಿ ಅಕ್ಬರ್‌ ಹೆಸರಿನ ಅವರು ಡಿಸೆಂಬರ್ 2021 ರಲ್ಲಿ ಇಸ್ಲಾಂ ಧರ್ಮವನ್ನು ತ್ಯಜಿಸಿದ ನಂತರ ರಾಮಸಿಂಹನ್ ಅಬೂಬಕ್ಕರ್ ಎಂದು ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ. ನಂತರ ಬಿಜೆಪಿ ಸೇರಿದ್ದಲ್ಲದೇ ರಾಜ್ಯ ಸಮಿತಿಯ ಸದಸ್ಯರಾಗಿದ್ದರು.

”ನಾನು ಯಾವುದೇ ರಾಜಕೀಯದ ಗುಲಾಮನಲ್ಲ. ಈಗ ನಾನು ಎಲ್ಲರಿಂದ ಮುಕ್ತನಾಗಿದ್ದೇನೆ ಮತ್ತು ಧರ್ಮದೊಂದಿಗೆ ಮಾತ್ರ ನಿಂತಿದ್ದೇನೆ” ಎಂದು ಗುರುವಾರ ಅಬೂಬಕ್ಕರ್ ಫೇಸ್‌ಬುಕ್‌ ಪೋಸ್ಟ್ ಮಾಡಿದ್ದರು.

ತಮ್ಮ ರಾಜೀನಾಮೆ ನಿರ್ಧಾರದ ಬಗ್ಗೆ ಮಾತನಾಡಿರುವ ಅವರು, “ಈ ಕುರಿತು ಯಾವುದೇ ಗದ್ದಲ ಸೃಷ್ಟಿಸುವ ಅಗತ್ಯವಿಲ್ಲ. ನಾನು ಎಲ್ಲಿಯೂ ಹೋಗುವುದಿಲ್ಲ, ಸನಾತನ ಧರ್ಮದೊಂದಿಗೆ ಉಳಿಯುತ್ತೇನೆ” ಎಂದು ಅವರು ಹೇಳಿಕೊಂಡಿದ್ದಾರೆ.

ಬಿಜೆಪಿ ರಾಜ್ಯ ವಕ್ತಾರ ನಾರಾಯಣನ್ ನಂಬೂತಿರಿ ಮಾತನಾಡಿ, “ಅಲಿ ಅಕ್ಬರ್ ಕಳೆದ ಕೆಲವು ದಿನಗಳಿಂದ ಪಕ್ಷದಲ್ಲಿ ಸಕ್ರಿಯವಾಗಿಲ್ಲ. ಅವರ ನಿರ್ಧಾರ ವೈಯಕ್ತಿಕವಾಗಿದೆ. ಕಲಾವಿದರಾದ ಅವರು ಯಾವುದೇ ನಿರ್ಧಾರ ತೆಗೆದುಕೊಳ್ಳಬಹುದು” ಎಂದಿದ್ದಾರೆ.

ಇದನ್ನೂ ಓದಿ: ಸಿನಿಮಾ ವಿಮರ್ಶೆ: ಮತ್ತೊಂದು ಇಸ್ಲಮಾಫೋಬಿಕ್ ಸಿನಿಮಾ ’ದ ಕೇರಳ ಸ್ಟೋರಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...