Homeಕರ್ನಾಟಕವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ಮಾಡಿ ಬ್ಲಾಕ್‌ಮೇಲ್: ತೀರ್ಥಹಳ್ಳಿ ABVP ಅಧ್ಯಕ್ಷನ ಬಂಧನಕ್ಕೆ ಆಗ್ರಹ

ವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ಮಾಡಿ ಬ್ಲಾಕ್‌ಮೇಲ್: ತೀರ್ಥಹಳ್ಳಿ ABVP ಅಧ್ಯಕ್ಷನ ಬಂಧನಕ್ಕೆ ಆಗ್ರಹ

- Advertisement -
- Advertisement -

ಕಾಲೇಜು ವಿದ್ಯಾರ್ಥಿನಿಯೊಬ್ಬರ ಬೆತ್ತಲೆ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ತೀರ್ಥಹಳ್ಳಿ ತಾಲೂಕು ಅಧ್ಯಕ್ಷನನ್ನು ಬಂಧಿಸಬೇಕೆಂದು ಎನ್‌ಎಸ್‌ಯುಐ ಒತ್ತಾಯಿಸಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು ಎಬಿವಿಪಿ ಅಧ್ಯಕ್ಷ ಪ್ರತಿಗೌಡ ಎಂಬಾತ ಯುವತಿಯೊಬ್ಬಳಿಗೆ ವಿಡಿಯೋ ಕಾಲ್‌ ಮಾಡಿ ನಗ್ನಳಾಗುವಂತೆ ಒತ್ತಾಯಿಸಿದ್ದಾರೆ. ಅದನ್ನು ವಿಡಿಯೋ ಮಾಡಿ ಹಣ ನೀಡುವಂತೆ ಬ್ಲಾಕ್‌ ಮಾಡಿದ್ದಾನೆ. ಹಣ ಕೊಡದಿದ್ದಾಗ ವಾಟ್ಸಾಪ್ ಗುಂಪುಗಳಲ್ಲಿ ವಿಡಿಯೋ ಷೇರ್ ಮಾಡಿ ವಿಕೃತಿ ಮೆರೆದಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಹಿಂದೆಯೂ ಸಹ ಎಬಿವಿಪಿ ವಿದ್ಯಾರ್ಥಿನಿಯರನ್ನೇ ಮರಳು ಮಾಡಿ ಈ ರೀತಿ ತನ್ನ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ವಿಡಿಯೋ ಚಿತ್ರೀಕರಿಸಿ ಬ್ಲಾಕ್‌ಮೇಲ್ ಮಾಡಿ ಹಲವರಿಂದ ಹಣ ಸಹ ವಸೂಲಿ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಸದ್ಯ ಜೂನ್ 16ರಂದು ಎರಡು ಅಶ್ಲೀಲ ವಿಡಿಯೋಗಳು ವೈರಲ್ ಆಗುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕವಾದ ಎನ್‌ಎಸ್‌ಯುಐ ಡಿವೈಎಸ್‌ಪಿಯವರಿಗೆ ದೂರು ನೀಡಿದ್ದು, ತಲೆಮರೆಸಿಕೊಂಡಿರುವ ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿದೆ.

“ಎಬಿವಿಪಿ ತಾಲೂಕು ಅಧ್ಯಕ್ಷ ಎಸಗಿರುವ ಕೃತ್ಯವು ಸಮಾಜ ತಲೆತಗ್ಗಿಸುವ ಪ್ರಕರಣವಾಗಿದೆ. ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕು. ಆರೋಪಿಯನ್ನು ಬಂಧಿಸಬೇಕು. ಪ್ರಭಾವಿಗಳ ಒತ್ತಡಕ್ಕೆ ಪೊಲೀಸರು ಮಣಿಯಬಾರದು” ಎಂದು ಎನ್‌ಎಸ್‌ಯುಐ ಮನವಿ ಮಾಡಿದೆ.

ಈ ಪ್ರತಿಗೌಡ ತನ್ನ ಫೇಸ್‌ಬುಕ್‌ ಪ್ರೊಫೈಲ್‌ನಲ್ಲಿ ಕಠೋರ ಹಿಂದು, ಗಾಂಚಾಲಿ, ಧರ್ಮೋ ರಕ್ಷತಿ ರಕ್ಷಿತಃ, ಒಕ್ಕಲಿಗ, ಎಬಿವಿಪಿಯನ್ ಎಂದು ಬರೆದುಕೊಂಡಿರುವುದು ಕಂಡುಬಂದಿದೆ. ಎಬಿವಿಪಿಯ ತಾಲ್ಲೂಕು ಅಧ್ಯಕ್ಷನಾಗಿದ್ದು ಕೊಂಡು ಉಳಿದವರಿಗೆಲ್ಲ ನಮ್ಮ ಸಂಸ್ಕೃತಿ, ಪರಂಪರೆ ಎಂದು ಭಾಷಣ ಬಿಗಿಯುವ ಈತ ತಾನು ಮಾತ್ರ ಹೆಣ್ಮಕ್ಕಳ ಮಾನ ತೆಗೆಯುವ ವಿಕೃತ ಕೆಲಸ ಮಾಡಿ ಸಿಕ್ಕಿಬಿದ್ದಿದ್ದಾನೆ. ಅದಕ್ಕಾಗಿ ಸಂಘಟನೆಯಲ್ಲಿ ತನಗೆ ಸಿಕ್ಕ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಪೊಲಿಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಆರೋಪಿಗೆ ಬುದ್ದಿ ಕಲಿಸಬೇಕಿದೆ.

ಇದನ್ನೂ ಓದಿ: ಪೊಲೀಸರಿಂದ ಹಲ್ಲೆ ಆರೋಪ: ಶಿವಮೊಗ್ಗದ ಯುವಕನ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...