Homeಕರ್ನಾಟಕಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಎಸಗುವುದೇ RSS ಶಾಖೆಯ ನಿತ್ಯ ಪಾಠವೇ?: ಬಿಜೆಪಿಗೆ ಕಾಂಗ್ರೆಸ್ ಪ್ರಶ್ನೆ

ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಎಸಗುವುದೇ RSS ಶಾಖೆಯ ನಿತ್ಯ ಪಾಠವೇ?: ಬಿಜೆಪಿಗೆ ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಬಿಜೆಪಿಗರೇ, ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಎಸಗುವುದೇ ಆರ್‌ಎಸ್‌ಎಸ್ ಶಾಖೆಯ ನಿತ್ಯ ಪಾಠವಾಗಿದೆಯೇ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಚಿತ್ತಾಪುರದಲ್ಲಿ ಮಹಿಳೆಯೊಬ್ಬರ ಮೇಲೆ ಆರ್‌ಎಸ್‌ಎಸ್‌ನ ವ್ಯಕ್ತಿಯೊಬ್ಬರು ದೌರ್ಜನ್ಯ ನಡೆಸಿದ್ದಾರೆ ಎಂದು ದೂರು ನೀಡಿದ್ದಾರೆ. ಮಹಿಳೆಯು ದೂರಿನಲ್ಲಿ, ”ಆರ್‌ಎಸ್‌ಎಸ್‌ನ ವ್ಯಕ್ತಿ, ನನ್ನ ಮತ್ತು ನನ್ನ ಎರಡು ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಮಾಡಿದ್ದಾನೆ. ನನಗೆ ಬ್ಲ್ಯಾಕ್‌ಮೇಲ್ ಮಾಡಿ ನನ್ನ ಪರಿದಾರದ ಸದಸ್ಯರಿಗೆ ಚಾರ್ಚ‌ರ್ ಮಾಡುತ್ತಿದ್ದಾನೆ. ಆತ ನನ್ನ ಜೊತೆ 07 ವರ್ಷದ ಸಂಭಂಧವಿದೆ, ನನಗೆ ಮೋಸ ಮಾಡಿದ್ದಾನೆ. ನನಗೆ ನಂಬಿಕೆಯ ಮಾತುಗಳನ್ನು ಹೇಳಿ ನನ್ನ ಎಲ್ಲಾ ಆಸ್ತಿಯನ್ನು ಪಡೆದುಕೊಂಡಿದ್ದಾರೆ. ಈಗ ನಾನು ಎಲ್ಲವನ್ನು ಕಳೆದುಕೊಂಡಿದ್ದೇನೆ. ಅವನ ಮನೆಯವರಿಂದಲೂ ನನಗೆ ಅನೇಕ ತೊಂದರೆಗಳು ಆಆಗಿವೆ ಎಂದು ಆರೋಪ ಮಾಡಿದ್ದಾರೆ.

ಈ ವಿಚಾರವಾಗಿ ಟ್ವಿಟ್ ಮಾಡಿರುವ ಕಾಂಗ್ರೆಸ್, ”ಚಿತ್ತಾಪುರದಲ್ಲಿ RSSನ ವ್ಯಕ್ತಿಯೊಬ್ಬ ಮಹಿಳೆಯೊಬ್ಬರಿಗೆ ವಂಚಿಸಿ, ದೌರ್ಜನ್ಯ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಎಸಗುವುದೇ RSS ಶಾಖೆಯ ನಿತ್ಯ ಪಾಠವೇ?” ಎಂದು ರಾಜ್ಯ ಬಿಜೆಪಿಗೆ ಪ್ರಶ್ನೆ ಮಾಡಿದೆ.

”ಅತ್ಯಾಚಾರ, ಅನಾಚಾರ, ಶಾಂತಿಭಂಗ ಮುಂತಾದ ಸಮಾಜಘಾತುಕ ಕೃತ್ಯಗಳನ್ನು ನಡೆಸುತ್ತಿರುವ ಸಂಘಟನೆಯ ಚಟುವಟಿಕೆಗಳನ್ನು ನಿಯಂತ್ರಿಸುವ ಬಗ್ಗೆ ನಮ್ಮ ಸರ್ಕಾರ ಚಿಂತಿಸಲಿದೆ” ಎಂದು ಕಾಂಗ್ರೆಸ್ ಹೇಳಿದೆ.

ಶನಿವಾರ ಇನ್ನೊಂದು ಪ್ರಕರಣದಲ್ಲಿ ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ತೀರ್ಥಹಳ್ಳಿ ತಾಲೂಕು ಅಧ್ಯಕ್ಷ, ಕಾಲೇಜು ವಿದ್ಯಾರ್ಥಿನಿಯೊಬ್ಬರ ಬೆತ್ತಲೆ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಎನ್ನುವ ಆರೋಪ ಕೇಳಿಬಂದಿತ್ತು.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು ಎಬಿವಿಪಿ ಅಧ್ಯಕ್ಷ ಪ್ರತಿಗೌಡ ಎಂಬಾತ ಯುವತಿಯೊಬ್ಬಳಿಗೆ ವಿಡಿಯೋ ಕಾಲ್‌ ಮಾಡಿ ನಗ್ನಳಾಗುವಂತೆ ಒತ್ತಾಯಿಸಿದ್ದಾರೆ. ಅದನ್ನು ವಿಡಿಯೋ ಮಾಡಿ ಹಣ ನೀಡುವಂತೆ ಬ್ಲಾಕ್‌ಮೇಲ್ ಮಾಡಿದ್ದಾನೆ. ಹಣ ಕೊಡದಿದ್ದಾಗ ವಾಟ್ಸಾಪ್ ಗುಂಪುಗಳಲ್ಲಿ ವಿಡಿಯೋ ಷೇರ್ ಮಾಡಿ ವಿಕೃತಿ ಮೆರೆದಿದ್ದಾನೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ಮಾಡಿ ಬ್ಲಾಕ್‌ಮೇಲ್: ತೀರ್ಥಹಳ್ಳಿ ABVP ಅಧ್ಯಕ್ಷನ ಬಂಧನಕ್ಕೆ ಆಗ್ರಹ

ಈ ಹಿಂದೆಯೂ ಸಹ ಎಬಿವಿಪಿ ವಿದ್ಯಾರ್ಥಿನಿಯರನ್ನೇ ಮರಳು ಮಾಡಿ ಈ ರೀತಿ ತನ್ನ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ವಿಡಿಯೋ ಚಿತ್ರೀಕರಿಸಿ ಬ್ಲಾಕ್‌ಮೇಲ್ ಮಾಡಿ ಹಲವರಿಂದ ಹಣ ಸಹ ವಸೂಲಿ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಸದ್ಯ ಜೂನ್ 16ರಂದು ಎರಡು ಅಶ್ಲೀಲ ವಿಡಿಯೋಗಳು ವೈರಲ್ ಆಗುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕವಾದ ಎನ್‌ಎಸ್‌ಯುಐ ಡಿವೈಎಸ್‌ಪಿಯವರಿಗೆ ದೂರು ನೀಡಿದ್ದು, ತಲೆಮರೆಸಿಕೊಂಡಿರುವ ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ”ಹೆಣ್ಣುಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದ ಎಬಿವಿಪಿ ಅಧ್ಯಕ್ಷ ಹಾಗೂ ಬಿಜೆಪಿ ಕಾರ್ಯಕರ್ತನೊಬ್ಬನ ಕರ್ಮಕಾಂಡ ಬಯಲಾಗಿದೆ. ಸಂಘದ ಶಾಖೆಯಲ್ಲಿ ಹೇಳುವ ಧರ್ಮ ರಕ್ಷಣೆಯ ಪಾಠ ಇದೇನಾ? ಎಂದು ಬಿಜೆಪಿಯವರಿಗೆ ಪ್ರಶ್ನೆ ಮಾಡಿದ್ದಾರೆ.

”ಸಂಸದ ತೇಜಸ್ವಿ ಸೂರ್ಯ ಅವರೇ, ಬಿಜೆಪಿ ಕಾಮಣ್ಣರಿಂದ ಕಿರುಕುಳ ಅನುಭವಿಸುವ ಹೆಣ್ಣುಮಕ್ಕಳಿಗೆ “ಹೆಲ್ಪ್ ಲೈನ್” ಯಾವಾಗ ಆರಂಭಿಸುವಿರಿ?” ಎಂದು ಕಾಂಗ್ರೆಸ್ ವ್ಯಂಗ್ಯ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...