Homeಮುಖಪುಟಬ್ರಿಟನ್: ನಶೆಯಲ್ಲಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗೆ ಆರು ವರ್ಷಗಳ...

ಬ್ರಿಟನ್: ನಶೆಯಲ್ಲಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗೆ ಆರು ವರ್ಷಗಳ ಜೈಲು ಶಿಕ್ಷೆ

- Advertisement -
- Advertisement -

ಅರೆಪ್ರಜ್ಞಾವಸ್ಥೆಯಲ್ಲಿದ್ದ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬನನ್ನು ಬ್ರಿಟನ್‌ನಲ್ಲಿ ಬಂಧಿಸಲಾಗಿದೆ ಎಂದು ಬಿಬಿಸಿ ಶನಿವಾರ ವರದಿ ಮಾಡಿದೆ.

20 ವರ್ಷದ ಪ್ರೀತ್ ವಿಕಲ್ ಆರೋಪಿ ಎಂದು ಗುರುತಿಸಲಾಗಿದ್ದು, ಯುವ ಅಪರಾಧಿಗಳ ಸಂಸ್ಥೆಯಲ್ಲಿ ಆರು ವರ್ಷ ಒಂಬತ್ತು ತಿಂಗಳು ಶಿಕ್ಷೆ ವಿಧಿಸಲಾಗಿದೆ.

ಕಳೆದ ವರ್ಷ ಜೂನ್‌ನಲ್ಲಿ ಪ್ರೀತ್ ಮತ್ತು ಮಹಿಳೆ ಪ್ರತ್ಯೇಕ ಸ್ನೇಹಿತರ ಗುಂಪುಗಳೊಂದಿಗೆ ಕಾರ್ಡಿಫ್‌ನಲ್ಲಿ ರಾತ್ರಿಯ ವಿಹಾರಕ್ಕೆ ಹೋಗಿದ್ದರು, ಅಲ್ಲಿ ಅವರು ಪರಸ್ಪರ ಭೇಟಿಯಾದರು.

”ಸಂತ್ರಸ್ತ ಮಹಿಳೆ ಮಿತಿಮೀರಿ ಕುಡಿದಿದ್ದರು ಮತ್ತು ರಾತ್ರಿಯ ಅಂತ್ಯದ ವೇಳೆಗೆ ಅರೆಪ್ರಜ್ಞಾವಸ್ಥೆಯಲ್ಲಿದ್ದರು. ಮಹಿಳೆಯು ಕ್ಲಬ್‌ನ ಹೊರಗೆ ಹೊರಟಿದ್ದಳು ಆಗ ಪ್ರೀತ್ ವಿಕಲ್‌ನನ್ನು ೆದುರಾದರು. ಇಬ್ಬರು ಸಂಭಾಷಣೆಯಲ್ಲಿ ತೊಡಗಿದ್ದರು ಮತ್ತು ಅವರ ಗುಂಪುಗಳಿಂದ ದೂರ ಇದ್ದರು” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

”ಸಂತ್ರಸ್ತ ಮಹಿಳೆ ಅತಿಯಾಗಿ ಕುಡಿದಿದ್ದರು ಮತ್ತು ರಾತ್ರಿಯ ವೇಳೆಗೆ ಸಂಪೂರ್ಣವಾಗಿ ನಶೆಯಲ್ಲಿದ್ದರು” ಎಂದು ಅಪರಿಚಿತ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಸಿಸಿ ಟಿವಿ ದೃಶ್ಯಾವಳಿ ಪ್ರಕಾರ, ”ಮಹಿಳೆಯು ಕ್ಲಬ್‌ನ ಹೊರಗೆ ಹೊರಟಿದ್ದಳು ಆಗ ಪ್ರೀತ್ ವಿಕಲ್‌ ಎದುರಾರದರು. ಇಬ್ಬರೂ ಸಂಭಾಷಣೆಯಲ್ಲಿ ತೊಡಗಿದರು ಮತ್ತು ಅವರ ಗುಂಪುಗಳಿಂದ ದೂರ ಹೋದರು. ಆ ಬಳಿಕ ವಿಕಲ್ ಮಹಿಳೆಯನ್ನು ತನ್ನ ಭುಜದ ಮೇಲೆ ಹೊತ್ತುಕೊಂಡು ತನ್ನ ನಿವಾಸಕ್ಕೆ ಹೋಗಿರುವ ದೃಶ್ಯ ಸೆರೆಯಾಗಿದೆ. ಅಲ್ಲಿ ಅವನು ಅವಳ ಮೇಲೆ ಅತ್ಯಾಚಾರ ಮಾಡಿದ್ದಾನೆ. ಅಲ್ಲದೇ ಮಹಿಳೆಯ ಭಾವಚಿತ್ರ ತೆಗೆದು ತನ್ನ ಸ್ನೇಹಿತರಿಗೆ ಕಳುಹಿಸಿದ್ದಾನೆ’.

ಈ ಬಗ್ಗೆ ಟ್ವೀಟ್ ಮಾಡಿರುವ ಸೌತ್ ವೇಲ್ಸ್ ಪೊಲೀಸ್ ಕಾರ್ಡಿಫ್, ”ಕಾರ್ಡಿಫ್‌ನಲ್ಲಿರುವ ನಿವಾಸದ ಸಭಾಂಗಣದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಕ್ಕಾಗಿ ಒಬ್ಬ ವ್ಯಕ್ತಿಯನ್ನು ಜೈಲಿಗೆ ಹಾಕಲಾಗಿದೆ. ಪ್ರೀತ್ ವಿಕಲ್ ಮಹಿಳೆಯನ್ನು ತನ್ನ ತೋಳುಗಳಲ್ಲಿ ಮತ್ತು ನಂತರ ತನ್ನ ಭುಜದ ಮೇಲೆ ಹೊತ್ತುಕೊಂಡು ಸಿಟಿ ಸೆಂಟರ್‌ನಿಂದ ಹೊರಕ್ಕೆ ಸಾಗಿಸುತ್ತಿರುವುದನ್ನು ಸಿಸಿಟಿವಿ ತೋರಿಸಿದೆ” ಎಂದು ಸೌತ್ ವೇಲ್ಸ್ ಪೊಲೀಸ್ ಕಾರ್ಡಿಫ್ ಟ್ವೀಟ್ ಮಾಡಿದೆ.

“ಕಾರ್ಡಿಫ್‌ನಲ್ಲಿ ಇಂತಹ ದಾಳಿಗಳು ಅತ್ಯಂತ ಅಸಾಮಾನ್ಯವಾಗಿವೆ. ಪ್ರೀತ್ ವಿಕಾಲ್‌ನಂತಹ ಅಪಾಯಕಾರಿ ವ್ಯಕ್ತಿ ಇದ್ದಿದ್ದರಿಂದ ಈ ಘಟನೆ ನಡೆದಿದೆ. ಪ್ರೀತ್ ವಿಕಾಲ್‌ ತನ್ನ ಸ್ನೇಹಿತರಿಂದ ದೂರ ಉಳಿದು, ನಶೆಯಲ್ಲಿದ್ದ ಯುವತಿಯ ಲಾಭವನ್ನು ಪಡೆದರು” ಎಂದು ಅವರು ಮತ್ತೊಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಮಹಿಳೆಯನ್ನು ಮನೆಗೆ ಕರೆದೊಯ್ದ ನಂತರ ಪ್ರೀತ್ ಆಕೆಯೊಂದಿಗೆ ಫೋಟೋ ತೆಗೆದುಕೊಂಡು ತನ್ನ ಸ್ನೇಹಿತರಿಗೆ ಕಳುಹಿಸಿದ್ದಾನೆ ಎಂದು ವರದಿಗಳು ತಿಳಿಸಿವೆ.

ಮಹಿಳೆ ಧೈರ್ಯದಿಂದ ನಡೆದ ಘಟನೆಯ ವಿವರವನ್ನು ಅಧಿಕಾರಿಗಳಿಗೆ ನೀಡಿದರು. ಸಿಸಿಟಿವಿ ದೃಶ್ಯಾವಳಿಗಳು ಮತ್ತು ಮಹಿಳೆಯೊಂದಿಗೆ Instagram ಸಂದೇಶ ವಿನಿಮಯವು ಪೊಲೀಸರಿಗೆ ಪ್ರೀತ್ ವಿಕಲ್ ಅನ್ನು ಗುರುತಿಸಲು ಸಹಾಯ ಮಾಡಿತು.

ಇದನ್ನೂ ಓದಿ: ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಎಸಗುವುದೇ RSS ಶಾಖೆಯ ನಿತ್ಯ ಪಾಠವೇ?: ಬಿಜೆಪಿಗೆ ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...

ಲೈಂಗಿಕ ಕಿರುಕುಳದ ಆರೋಪ ಮಾಡಿದ ಪತ್ರಕರ್ತೆಯ ವಿರುದ್ಧ ಜಾತಿ ನಿಂದನೆ ಪ್ರಕರಣ: ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ವರದಿ ಮಾಡುವಾಗ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಮಹಿಳಾ ಪತ್ರಕರ್ತೆಯ ವಿರುದ್ಧ ದಾಖಲಾಗಿರುವ...

ಸಿಇಸಿ ವಿರೋಧಿ ಪ್ರತಿಭಟನೆ: ಮೆಟ್ರೋ ನಿರ್ಬಂಧ, ಇಂಟರ್ನೆಟ್ ಸ್ಥಗಿತ ಪ್ರಕರಣ: ಸುಪ್ರೀಂ ಕೋರ್ಟ್ ಗೆ ಬೇಷರತ್ ಕ್ಷಮೆಯಾಚಿಸಿದ ಕೇಂದ್ರ ಕಾರ್ಯದರ್ಶಿ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮೆಟ್ರೋ ಮತ್ತು ರೈಲು ಸೇವೆಗಳ ಮೇಲೆ ನಿರ್ಬಂಧ ವಿಧಿಸಿದ ಹಾಗೂ ಇಂಟರ್ನೆಟ್...

‘ಯಾರೂ ನಮ್ಮನ್ನು ಬೆದರಿಸಿ ಮಣಿಸಲು ಸಾಧ್ಯವಿಲ್ಲ’: ವಿಪಕ್ಷಗಳ ಸುಪ್ರೀಂ ಕೋರ್ಟ್ ಮಾರ್ಚ್ ಕುರಿತು ಸಿಜೆಐ ಹೇಳಿಕೆ

ನ್ಯಾಯಾಲಯ ಸಂಕೀರ್ಣಗಳ ಸಮೀಪ ಪ್ರತಿಭಟನೆಗಳು ಮತ್ತು ಮೆರವಣಿಗೆಗಳಿಗೆ ನಿಯಂತ್ರಕ ಚೌಕಟ್ಟೊಂದನ್ನು ರೂಪಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಸಂಬಂಧ ಸುಪ್ರೀಂ ಕೋರ್ಟ್ ಇಂದು (ಅ.15) ನೋಟಿಸ್ ಜಾರಿ ಮಾಡಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ದೆಹಲಿ ಪ್ರತಿಭಟನೆ ಹಾಗೂ ಜಂತರ್ ಮಂತರ್ ರದ್ದತಿ ವಿವಾದ: ಕೇಂದ್ರ ಸರ್ಕಾರ ಹಾಗೂ ಪೊಲೀಸರಿಗೆ ಸುಪ್ರೀಂ ನೋಟಿಸ್; ವಿಡಿಯೋ ಸಾಕ್ಷ್ಯ ಭದ್ರಪಡಿಸಲು ನಿರ್ದೇಶನ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ನಡೆಸಿದ್ದರೆನ್ನಲಾದ ಅತಿಯಾದ ಬಲಪ್ರಯೋಗ, ಸಾರ್ವಜನಿಕರ ಸಂಚಾರ ನಿರ್ಬಂಧ ಹಾಗೂ ಪ್ರಮುಖ ಪ್ರತಿಭಟನಾ ಸ್ಥಳವಾಗಿದ್ದ 'ಜಂತರ್ ಮಂತರ್' ಅನ್ನು ರದ್ದುಗೊಳಿಸಿದ (De-notification) ಕೇಂದ್ರ...