Homeಮುಖಪುಟಸಂಸದರ ನಿಧಿಯನ್ನು ಮಗನ ಮದುವೆಗೆ ಮತ್ತು ಮನೆ ಕಟ್ಟಲು ಬಳಸಿಕೊಂಡೆ: ಒಪ್ಪಿಕೊಂಡ ಬಿಜೆಪಿ ಸಂಸದ

ಸಂಸದರ ನಿಧಿಯನ್ನು ಮಗನ ಮದುವೆಗೆ ಮತ್ತು ಮನೆ ಕಟ್ಟಲು ಬಳಸಿಕೊಂಡೆ: ಒಪ್ಪಿಕೊಂಡ ಬಿಜೆಪಿ ಸಂಸದ

- Advertisement -
- Advertisement -

ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ನಿಧಿಯನ್ನು ಮಗನ ಮದುವೆಗೆ ಮತ್ತು ಮನೆ ಕಟ್ಟಲು ಬಳಸಿಕೊಂಡೆ ಎಂದು ತೆಲಂಗಾಣದ ಆದಿಲ್‌ಬಾದ್‌ನ ಬಿಜೆಪಿ ಸಂಸದ ಸೋಯಂ ಬಾಪುರಾವ್ ಹೇಳುವ ಮೂಲಕ ನಿಧಿಯ ದುರ್ಬಳಕೆಯನ್ನು ಸ್ವಯಂ ಒಪ್ಪಿಕೊಂಡಿದ್ದಾರೆ.

“ನಾನು ಹಿಂದಿನ ಸಂಸದರಂತೆ ನಿಧಿಯ ಒಟ್ಟು ಹಣವನ್ನು ಲಪಟಾಯಿಸಿಲ್ಲ. ಬದಲಿಗೆ ಸ್ವಲ್ಪ ಹಣವನ್ನು ಗ್ರಾಮ ಪಂಚಾಯಿತಿಗಳಿಗೆ ನೀಡಿ, ಉಳಿದ ಹಣವನ್ನು ಮಗನ ಮದುವೆ ಮತ್ತು ಮನೆ ಕಟ್ಟಲು ಬಳಸಿಕೊಂಡಿರುವೆ” ಎಂದು ಹೆಮ್ಮೆಯಿಂದ ಹೇಳಿಕೊಂಡಿರುವ ವಿಡಿಯೋ ಒಂದು ವೈರಲ್ ಆಗಿದೆ. ಈ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದ ಬಿಜೆಪಿ ಕಾರ್ಯಕರ್ತರು ಚಪ್ಪಾಳೆ ತಟ್ಟುವುದನ್ನು ನೋಡಬಹುದಾಗಿದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಉಲ್ಟಾ ಹೊಡೆದಿರುವ ಸಂಸದರು, “ಪಕ್ಷದಲ್ಲಿ ತನ್ನ ಬೆಳವಣಿಗೆಯನ್ನು ಇಷ್ಟಪಡದ ಕೆಲವು ಬಿಜೆಪಿ ನಾಯಕರ ಕೈವಾಡವಿದು” ಎಂದು ಆರೋಪಿಸಿದ್ದಾರೆ.

“ಬಿಜೆಪಿ ಜಿಲ್ಲಾಧ್ಯಕ್ಷ ಪಾಯಲ್ ಶಂಕರ್ ಹಾಗೂ ಆದಿಲಾಬಾದ್ ಮಾಜಿ ಸಂಸದ ರಮೇಶ್ ರಾಥೋಡ್ ತಮ್ಮ ವಿರುದ್ಧ ಸುಳ್ಳು ಪ್ರಚಾರ ಮಾಡುತ್ತಿದ್ದು, ಇಡೀ ಸಂಚಿಕೆ ಹಿಂದೆ ಅವರ ಕೈವಾಡವಿದೆ. ಬಿಜೆಪಿಯ ಕೆಲ ನಾಯಕರಿಗೆ ನನ್ನ ಮಾತು ಇಷ್ಟವಿಲ್ಲ. ಅವರು ನನ್ನನ್ನು ನಿಂದಿಸಲು ಮತ್ತು ನನ್ನನ್ನು ತೊಡೆದುಹಾಕಲು ಈ ಎಲ್ಲಾ ಸಾಹಸಗಳನ್ನು ಮಾಡುತ್ತಿದ್ದಾರೆ” ಎಂದು ಸೋಯಂ ಬಾಪುರಾವ್ ಹೇಳಿದ್ದಾರೆ.

MPLAD ಹಣ ದುರುಪಯೋಗದ ಆರೋಪವನ್ನು ತಳ್ಳಿಹಾಕಿದ ಬಾಪು ರಾವ್, “ತಮ್ಮ ಮನೆ ಮತ್ತು ಮಗನ ಮದುವೆಯ ನಿರ್ಮಾಣದಲ್ಲಿ ನಿರತರಾಗಿರುವ ಕಾರಣ ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಹಣವನ್ನು ಬಳಸಲಾಗಿಲ್ಲ. ನಿಧಿಯನ್ನು ಖರ್ಚು ಮಾಡಲು ಅಧಿಕೃತ ಕಾರ್ಯವಿಧಾನ ಇರುವುದರಿಂದ ಯಾವುದೇ ಸಂಸದರು ತಮ್ಮ ವೈಯಕ್ತಿಕ ಬಳಕೆಗಾಗಿ MPLAD ಹಣವನ್ನು ಬಳಸಲು ಯಾವುದೇ ಅವಕಾಶವಿಲ್ಲ” ಎಂದು ಹೇಳಿದ್ದಾರೆ.

ಆದರೆ ಅವರ ಮೊದಲ ಹೇಳಿಕೆ ವೈರಲ್ ಆಗಿದ್ದು, ಬಿಜೆಪಿ ಹೇಗೆ ಭ್ರಷ್ಟಾಚಾರದಲ್ಲಿ ನಿರತವಾಗಿದೆ ಎಂದು ವಿಪಕ್ಷಗಳಾದ ಬಿಆರ್‌ಎಸ್ ಮತ್ತು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿವೆ.

ಇದನ್ನೂ ಓದಿ; ಬಡವರ ಅನ್ನದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಜ್ಯದ ಜನರು ಮತ್ತೊಮ್ಮೆ ಪಾಠ ಕಲಿಸುತ್ತಾರೆ: ಡಿಕೆಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...

ಲೈಂಗಿಕ ಕಿರುಕುಳದ ಆರೋಪ ಮಾಡಿದ ಪತ್ರಕರ್ತೆಯ ವಿರುದ್ಧ ಜಾತಿ ನಿಂದನೆ ಪ್ರಕರಣ: ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ವರದಿ ಮಾಡುವಾಗ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಮಹಿಳಾ ಪತ್ರಕರ್ತೆಯ ವಿರುದ್ಧ ದಾಖಲಾಗಿರುವ...