Homeಕರ್ನಾಟಕಕರ್ನಾಟಕಕ್ಕೆ ಅಕ್ಕಿ ನೀಡಲು ಸಾಧ್ಯವಿಲ್ಲ ಎಂದ ಕೇಂದ್ರ; ಇದು ರಾಜಕೀಯ ದುರುದ್ದೇಶ: ಮುನಿಯಪ್ಪ

ಕರ್ನಾಟಕಕ್ಕೆ ಅಕ್ಕಿ ನೀಡಲು ಸಾಧ್ಯವಿಲ್ಲ ಎಂದ ಕೇಂದ್ರ; ಇದು ರಾಜಕೀಯ ದುರುದ್ದೇಶ: ಮುನಿಯಪ್ಪ

- Advertisement -
- Advertisement -

ರಾಜ್ಯ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ 5 ಕೆಜಿ ಅಕ್ಕಿ ನೀಡಲು ಕೇಂದ್ರ ಆಹಾರ ಸಚಿವ ಪೀಯೂಷ್ ಗೋಯಲ್ ನಿರಾಕರಿಸಿದ್ದಾರೆ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಆರೋಪಿಸಿದ್ದಾರೆ.

ಇಂದು (ಜೂನ್ 23) ದೆಹಲಿಯಲ್ಲಿ ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಕರ್ನಾಟಕಕ್ಕೆ ಅಕ್ಕಿ ಪೂರೈಸುವಂತೆ ಮನವಿ ಮಾಡಿದರು. ಆದರೆ, ಪಿಯೂಷ್ ಗೋಯಲ್ ಅವರು ಹಾರಿಕೆಯ ಉತ್ತರ ನೀಡಿದ್ದಾರೆ ಎಂದು ಮುನಿಯಪ್ಪ ಹೇಳಿದ್ದಾರೆ.

ಪಿಯೂಷ್ ಗೋಯಲ್ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮುನಿಯಪ್ಪ, ”ಕೇಂದ್ರ ಸರ್ಕಾರದಲ್ಲಿ ಸಾಕಷ್ಟು ಅಕ್ಕಿ ದಾಸ್ತಾನು ಇದ್ದರೂ ರಾಜಕೀಯ ದುರುದ್ದೇಶದಿಂದ ಸಚಿವರು ನಮ್ಮ ಬೇಡಿಕೆಯನ್ನು ನಿರಾಕರಿಸಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

”ಅಕ್ಕಿ ಕೊಡಲು ಆಗುವುದಿಲ್ಲ ಎಂದು ಗೋಯಲ್​ ಹೇಳಿದ್ದಾರೆ. ಹೆಚ್ಚುವರಿ ಅಕ್ಕಿ ಪೂರೈಸಲು ಆಗಲ್ಲ ಎಂದಿದ್ದಾರೆ. ಹಣ ನೀಡುತ್ತೇವೆ ಅಕ್ಕಿ ಪೂರೈಸಿ ಎಂದು ಕೇಳಿದೆ. ಆದರೆ ಕೇಂದ್ರ ಸಚಿವ ಗೋಯಲ್ ಹಾರಿಕೆ ಉತ್ತರ ಕೊಟ್ಟಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿಸದರು.

”ಎಷ್ಟೇ ಕಷ್ಟವಾದರೂ ಉಚಿತವಾಗಿ 10 ಕೆಜಿ ಅಕ್ಕಿ ಕೊಟ್ಟೇ ಕೊಡುತ್ತೇವೆ. ಅಕ್ಕಿ ಕೊಡಲು ಸ್ವಲ್ಪ ವಿಳಂಬವಾಗಹುದು ಅಷ್ಟೇ. ಏಜೆನ್ಸಿಗಳ ಮೂಲಕ‌ ಅಕ್ಕಿ ಖರೀದಿಸುವ ಪ್ರಯತ್ನ ಮಾಡುತ್ತಿದ್ದೇವೆ. ರಾಜಕೀಯ ಉದ್ದೇಶದಿಂದ ಅಕ್ಕಿ ಪೂರೈಕೆ ಮಾಡುತ್ತಿಲ್ಲ. ಸ್ಟಾಕ್​ ಇದ್ದರೂ ಅಕ್ಕಿ ಕೊಡಲ್ಲ ಎನ್ನುವುದು ಎಷ್ಟರ ಮಟ್ಟಿಗೆ ಸರಿ? ಅಕ್ಕಿ ವಿಚಾರವಾಗಿ ನಮ್ಮ ದಾರಿಯನ್ನು ನಾವು ಕಂಡುಕೊಳ್ಳಬೇಕಿದೆ. ರಾಜಕೀಯ ದುರುದ್ದೇಶ ಇದೆ ಎನ್ನುವ ಭಾವನೆ ಬರುತ್ತಿದೆ. ಈ ವಾರದಲ್ಲಿ ಅಂತಿಮ ತೀರ್ಮಾನ ಆಗಲಿದೆ” ಎಂದು ಹೇಳಿದರು.

ಕೇಂದ್ರ ಆಹಾರ ಸಚಿವರನ್ನು ಭೇಟಿಯಾಗಲು ಕೆ.ಎಚ್‌.ಮುನಿಯಪ್ಪ ಅವರು ಮೂರು ದಿನಗಳಿಂದ ಪ್ರಯತ್ನ ನಡೆಸಿದರೂ ಯಶಸ್ಸು ಸಿಕ್ಕಿರಲಿಲ್ಲ. ಕೇಂದ್ರ ಆಹಾರ ಸಚಿವ ಪೀಯೂಷ್ ಗೋಯಲ್ ಅವರನ್ನು ಭೇಟಿ ಮಾಡಲು ಮೂರು ದಿನಗಳಿಂದ ಪ್ರಯತ್ನ ನಡೆದಿದೆ. ಅವರು ಭೇಟಿಗೆ ಕಾಲಾವಕಾಶ ಕೊಟ್ಟಿಲ್ಲ ಎಂದು ಮುನಿಯಪ್ಪ ಬೇಸರ ವ್ಯಕ್ತಪಡಿಸಿದ್ದರು.

”ಆಹಾರ ಖಾತೆಯ ರಾಜ್ಯ ಸಚಿವರನ್ನು ಗುರುವಾರ ಬೆಳಿಗ್ಗೆ 10 ಗಂಟೆಗೆ ಭೇಟಿ ಮಾಡಲು ಕಾಲಾವಕಾಶ ಕೇಳಿದ್ದೆ. ಅವರು ಒಪ್ಪಿದ್ದರು. ಬಳಿಕ ನಿಲುವು ಬದಲಿಸಿದರು. ಅನ್ನ ಭಾಗ್ಯದ ವಿಷಯದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿರುವುದು ಸ್ಪಷ್ಟಗೊಂಡಿದೆ” ಎಂದು ಮುನಿಯಪ್ಪ ಬೇಸರ ಹೊರಹಾಕಿದರು.

ಪಿಯೂಷ್​​ ಗೋಯಲ್ ಅವರು ರಾಜ್ಯಕ್ಕೆ ಅಕ್ಕಿ ಪೂರೈಸಲು​ ನಿರಾಕರಿಸಿದ ಬಳಿಕ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ”ಕೇಂದ್ರ ಸರ್ಕಾರದ ಧೋರಣೆ ಏನು ಎಂದು ಎಲ್ಲರಿಗೂ ಅರ್ಥವಾಗುತ್ತಿದೆ. ಮುಂದೆ ಏನು ಮಾಡಬೇಕೆಂದು ಸಿಎಂ, ಆಹಾರ ಸಚಿವರು ನಿರ್ಧರಿಸುತ್ತಾರೆ. ಇನ್ನು ಯಡಿಯೂರಪ್ಪ ಸೇರಿ ಬಿಜೆಪಿ ನಾಯಕರು ಧರಣಿ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರದ ಧೋರಣೆ ವಿರುದ್ಧ ಪ್ರತಿಭಟನೆ ಮಾಡಿದರೆ ಒಳ್ಳೆಯದು” ಎಂದು ಟಾಂಗ್ ನೀಡಿದರು.

ಅನ್ನ ಭಾಗ್ಯ ಯೋಜನೆಗೆ ಭಾರತ ಆಹಾರ ನಿಗಮದ ಮುಕ್ತ ಮಾರುಕಟ್ಟೆ ವ್ಯಾಪಾರ ಯೋಜನೆಯಡಿ ಅಕ್ಕಿ ಖರೀದಿಸಲು ಕರ್ನಾಟಕ ಸರ್ಕಾರ ತೀರ್ಮಾನಿಸಿತ್ತು. ಆದರೆ, ಈಶಾನ್ಯ ರಾಜ್ಯಗಳು ಹಾಗೂ ನೈಸರ್ಗಿಕ ವಿಕೋಪ ಎದುರಿಸುತ್ತಿರುವ ರಾಜ್ಯಗಳಿಗೆ ಹೊರತುಪಡಿಸಿ ಉಳಿದ ರಾಜ್ಯಗಳಿಗೆ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ ಅಕ್ಕಿ ಹಾಗೂ ಗೋಧಿ ಮಾರಾಟವನ್ನು ಜೂನ್ 13ರಂದು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿತು.

ರಾಷ್ಟಪತಿ ಭೇಟಿ, ಕೇಂದ್ರ ಸಚಿವರ ಭೇಟಿ ಸೇರಿದಂತೆ ವಿವಿಧ ಕಾರಣಕ್ಕೆ ದೆಹಲಿಗೆ ಹಾರಿದ್ದ ಸಿಎಂ ಕೇಂದ್ರ ಗೃಹ ಸಚಿವ ಅಮಿತ್‌ ಶಾರನ್ನು ಭೇಟಿಯಾಗಿ ಅಕ್ಕಿ ಸಂಬಂಧ ಚರ್ಚಿಸಿದ್ದರು. ಅಮಿತ್‌ ಶಾ ಕೂಡಾ ಸಂಬಂಧ ಪಟ್ಟವರ ಜತೆ ಚರ್ಚಿಸುತ್ತೇನೆ ಎಂದು ಹೇಳಿದ್ದರಂತೆ, ಆದರೆ, ಇದೀಗ ಸ್ವತಃ ಕೇಂದ್ರ ಆಹಾರ ಸಚಿವ ಪಿಯೂಷ್​​ ಗೋಯಲ್, ಕರ್ನಾಟಕಕ್ಕೆ ಅಕ್ಕಿ ಕೊಡಲು​ ನಿರಾಕರಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಅನ್ನಭಾಗ್ಯ: ಕೇಂದ್ರೀಯ ಸಂಸ್ಥೆಗಳಿಂದಲೇ ಅಗತ್ಯವಿರುವ ಅಕ್ಕಿ ಖರೀದಿಗೆ ಪ್ರಯತ್ನ; ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...