Homeಮುಖಪುಟಬೆಂಗಳೂರಿನಿಂದ ದೆಹಲಿಯವರೆಗೆ ಟೊಮೆಟೊ ಬೆಲೆ ಧಿಡೀರ್ ಏರಿಕೆಗೆ ಕಾರಣವೇನು?

ಬೆಂಗಳೂರಿನಿಂದ ದೆಹಲಿಯವರೆಗೆ ಟೊಮೆಟೊ ಬೆಲೆ ಧಿಡೀರ್ ಏರಿಕೆಗೆ ಕಾರಣವೇನು?

- Advertisement -
- Advertisement -

ಸಾಮಾನ್ಯವಾಗಿ ಪ್ರತಿನಿತ್ಯ ಬಳಸುವ ತರಕಾರಿಗಳಲ್ಲಿ ಒಂದಾದ ಟೊಮೆಟೊ ಬೆಲೆ ಧಿಡೀರ್ ಏರಿಕೆಯಾಗಿದೆ. ಕರ್ನಾಟಕದಲ್ಲಿ ಮಾತ್ರವಲ್ಲದೇ ಇಡೀ ದೇಶಾದ್ಯಂತ ಉತ್ತಮ ಗುಣಮಟ್ಟದ ಒಂದು ಕೆಜಿ ಟೊಮೆಟೊ ಬೆಲೆ 100 ರೂಗಳ ಆಸುಪಾಸಿನಲ್ಲಿದೆ. ಹಲವಾರು ಕಾರಣಗಳಿಂದ ಟೊಮೆಟೊ ಉತ್ಪಾನದೆ ಕುಸಿದ ಕಾರಣ, ಬೇಡಿಕೆ ಹೆಚ್ಚಾಗಿ ಈ ಮಟ್ಟದ ಬೆಲೆ ಏರಿಕೆ ಉದ್ಭವಿಸಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅತಿಯಾದ ಮಳೆ ಮತ್ತು ಅತಿಯಾದ ಬಿಸಿಲು

ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್, ಒಡಿಶಾ, ಚತ್ತೀಸ್‌ಘಡ, ಪಶ್ಚಿಮ ಬಂಗಾಳ ರಾಜ್ಯಗಳು ಅತಿ ಹೆಚ್ಚು ಟೊಮೆಟೊ ಬೆಳೆಯುವ ರಾಜ್ಯಗಳಾಗಿವೆ. ಕೆಲ ರಾಜ್ಯಗಳಲ್ಲಿ ಏಪ್ರಿಲ್ ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಳೆಯಿಂದ ಟೊಮೆಟೊ ಬೆಳೆ ನಾಶವಾದರೆ ಕೆಲ ರಾಜ್ಯಗಳಲ್ಲಿ ತೀರಾ ಬಿಸಿಲು ಕಂಡುಬಂದು ಹಾಳಾಗಿದೆ. ಬಿಫರ್‌ಜಾಯ್ ಚಂಡಮಾರುತವೂ ಬೆಳೆ ನಾಶಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ಇತ್ತೀಚೆಗೆ ಮುಂಗಾರು ಮಳೆ ಬಾರದೆ ಸಂಕಷ್ಟ ಎದುರಾಗಿದೆ. ಹಾಗಾಗಿ ಒಟ್ಟಾರೆ ಟೊಮೆಟೊ ಇಳುವರಿಯಲ್ಲಿ ಕುಸಿತ ಕಂಡಿದೆ.

ಮುಖ್ಯವಾಗಿ ಕರ್ನಾಟಕದಲ್ಲಿ ಬೆಂಗಳೂರು ಸುತ್ತಮುತ್ತಲಿನ 5 ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಟೊಮೆಟೊ ಬೆಳೆಯಲಾಗುತ್ತಿತ್ತು. ಆದರೆ ಈ ಬಾರಿ ಹಲವು ಕಾರಣಗಳಿಂದ ಉತ್ಪಾದನೆ ಅರ್ಧದಷ್ಟು ಕುಸಿತ ಕಂಡಿದೆ. ಈ ಜಿಲ್ಲೆಗಳಿಂದ ಕಳೆದ ವರ್ಷದ ಟೊಮೆಟೊ ಉತ್ಪಾದನೆ 5.45 ಲಕ್ಷ ಕ್ವಿಂಟಲ್‌ ಇದ್ದಿದ್ದು ಈ ವರ್ಷ 2.90 ಲಕ್ಷ ಕ್ವಿಂಟಲ್‌ಗೆ ಕುಸಿದಿದೆ ಎನ್ನಲಾಗಿದೆ.

ರೋಗಬಾಧೆ

ಬಿಳಿಸೊಳ್ಳೆ, ವೈರಸ್‌ ಬಾಧೆ, ಎಲೆ ರೋಗ ಟೊಮೆಟೊ ಬೆಳೆಗೆ ಬಾಧಿಸುತ್ತಿದೆ. ರೋಗಬಾಧೆ ಕಾರಣದಿಂದಾಗಿ ಕರ್ನಾಟಕ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಟೊಮೆಟೊ ಇಳುವರಿ ಕಡಿಮೆಯಾಗಿದೆ.

ಬೀನ್ಸ್‌ನತ್ತ ಮುಖ ಮಾಡಿದ ಕೆಲ ರೈತರು

ಕಳೆದ ವರ್ಷ ಬೀನ್ಸ್ ಬೆಳೆಗೆ ಉತ್ತಮ ಬೆಲೆ ಸಿಕ್ಕಿತ್ತು. ಅದೇ ಸಂದರ್ಭದಲ್ಲಿ ಟೊಮೆಟೊ ಬೆಳೆದವರು ನಷ್ಟಕ್ಕೆ ತುತ್ತಾಗಿದ್ದರು. ಹಾಗಾಗಿ ಈ ಬಾರಿ ಬಹುತೇಕರು ಟಮೊಟೊ ಬಿಟ್ಟು ಬೀನ್ಸ್‌ ಬೆಳೆಯತ್ತ ಮುಖ ಮಾಡಿದ್ದಾರೆ. ಹಾಗಾಗಿ ಸಹಜವಾಗಿ ಉತ್ಪಾದನೆ ಕಡಿಮೆಯಾಗಿದೆ.

ಸಾಗಾಣಿಕೆ ಸಮಸ್ಯೆ

ಟೊಮೆಟೊ ಬೇಗ ಹಾಳಾಗುವ ತರಕಾರಿಯಾಗಿದ್ದು, ಮಳೆಗೆ ಸಿಕ್ಕರಂತೂ ಇನ್ನೂ ಬೇಗ ಹಾಳಾಗುತ್ತದೆ. ಕೆಲ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾದ ಕಾರಣ ಸಾಗಾಣಿಕೆ ಸಮಸ್ಯೆಯಿಂದಲೂ ಸಹ ಬೆಲೆ ಏರಿಕೆ ಆಗಿದೆ.

ಸಾಕಷ್ಟು ಸಂಖ್ಯೆಯಲ್ಲಿ ಕೋಲ್ಡ್ ಸ್ಟೋರೇಜ್‌ಗಳು ಇಲ್ಲದಿರುವುದು

ಟೊಮೆಟೊ ಸೇರಿದಂತೆ ಹಲವು ತರಕಾರಿಗಳನ್ನು ಸಂಗ್ರಹಿಸಿಡುವ ದೊಡ್ಡ ದೊಡ್ಡ ಕೋಲ್ಡ್ ಸ್ಟೋರೇಜ್‌ಗಳು ಸಾಕಷ್ಟು ಸಂಖ್ಯೆಯಲ್ಲಿ ಇಲ್ಲದಿರುವುದರಿಂದ ಸಂಗ್ರಹಿಸಿ ಬೇಡಿಕೆಗೆ ತಕ್ಕಂತೆ ಪೂರೈಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಬೇಡಿಕೆ ಹೆಚ್ಚಿದಂತೆ ಬೆಲೆ ಏರಿಕೆ ಆಗಿದೆ.

ಪ್ರತಿವರ್ಷದ ವಿದ್ಯಮಾನ

ಇನ್ನು ಈ ಸಮಸ್ಯೆ ಪ್ರತಿವರ್ಷದ ವಿದ್ಯಾಮಾನವಾಗಿದ್ದು ಈ ಸಮಯದಲ್ಲಿ ಬೆಲೆ ಏರಿಕೆಯಾಗುವುದು ಸಹಜ. ಆದರೆ ಕೆಲವೇ ದಿನಗಳಲ್ಲಿ ಬೆಲೆ ಇಳಿಯಲಿದ್ದು ಸಹಜ ಸ್ಥಿತಿಗೆ ಮರಳಲಿದೆ ಎಂದು ಗ್ರಾಹರ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಬೆಲೆ ಏರಿಕೆ ತಡೆಯಲು ತಮಿಳುನಾಡು ಸರ್ಕಾರದ ಯತ್ನ

ಬಡವರು ಮತ್ತು ಮಧ್ಯಮ ವರ್ಗದ ಸಮುದಾಯಗಳ ಮೇಲಿನ ಬೆಲೆ ಏರಿಕೆ ಹೊರೆಯನ್ನು ತಗ್ಗಿಸುವ ಪ್ರಯತ್ನದಲ್ಲಿ ತಮಿಳುನಾಡು ಸರ್ಕಾರವು ರಾಜ್ಯದಾದ್ಯಂತ ಫಾರ್ಮ್ ಫ್ರೆಶ್ ಔಟ್ಲೆಟ್‌ಗಳಲ್ಲಿ (FFOs) ಟೊಮೆಟೊ ಮಾರಾಟ ಮಾಡಲು ಪ್ರಾರಂಭಿಸಿದೆ. ಟೊಮೆಟೊ ಬೆಲೆಯನ್ನು ನಿಯಂತ್ರಿಸುವುದು ಮತ್ತು ಈ ಅಗತ್ಯ ತರಕಾರಿಯನ್ನು ಸಾರ್ವಜನಿಕರಿಗೆ ಹೆಚ್ಚು ಸುಲಭವಾಗಿ ತಲುಪಿಸುವುದು ಇದರ ಉದ್ದೇಶವಾಗಿದೆ. ಎಫ್‌ಎಫ್‌ಒಗಳಲ್ಲಿ ಪ್ರತಿ ಕೆಜಿ ಟೊಮೆಟೊಗೆ 68 ರೂ.ಗೆ ಬೆಲೆ ನಿಗಧಿಪಡಿಸಲಾಗಿದೆ. 60 ರೂಗಿಂತ ಬೆಲೆ ಕಡಿಮೆ ಮಾಡಲು ಚಿಂತಸಲಾಗುತ್ತಿದೆ ಎಂದು ತಮಿಳುನಾಡಿನ ಸಹಕಾರ, ಆಹಾರ ಮತ್ತು ಗ್ರಾಹಕ ಸಂರಕ್ಷಣಾ ಇಲಾಖೆಯ ಸಚಿವ ಪೆರಿಯಕರುಪ್ಪನ್ ತಿಳಿಸಿದ್ದಾರೆ.

ಇದನ್ನೂ ಓದಿ: ಕೋಲಾರದಲ್ಲಿ ಮರ್ಯಾದೆಗೇಡು ಹತ್ಯೆ: ಪರಿಶಿಷ್ಟ ಜಾತಿಯವನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ; ಯುವಕ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...