ಛತ್ತೀಸ್‌ಗಢದಲ್ಲಿ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳಿರುವಾಗ ಸಚಿವ ಟಿಎಸ್ ಸಿಂಗ್ ದೇವ್ ಅವರನ್ನು ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಬುಧವಾರ ನೇಮಕ ಮಾಡಿದೆ.
ಛತ್ತೀಸ್‌ಗಢದಲ್ಲಿ ಚುನಾವಣಾ ಕಾರ್ಯತಂತ್ರದ ಕುರಿತು ಚರ್ಚಿಸಲು ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕತ್ವದ ಸಭೆ ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್, ರಾಜ್ಯದ ಕಾಂಗ್ರೆಸ್ ಉಸ್ತುವಾರಿ ಅಧಿಕಾರಿ ಕುಮಾರಿ ಸೆಲ್ಜಾ, ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಟಿಎಸ್ ಸಿಂಗ್ ದೇವ್, ಉಪಸ್ಥಿತರಿದ್ದರು.
ಛತ್ತೀಸಗಢ ವಿಧಾನಸಭೆಗೆ ಈ ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿದ್ದು, ಕಾರ್ಯತಂತ್ರ ಸಭೆ ಸಲುವಾಗಿ ಈ ಇಬ್ಬರೂ ದೆಹಲಿಗೆ ಆಗಮಿಸಿದ್ದರು. ಸಭೆ ಬಳಿಕ ಉಭಯ ನಾಯಕರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ.
ಪಕ್ಷವು 2018ರಲ್ಲಿ ಅಧಿಕಾರಕ್ಕೇರಿದಾಗಿನಿಂದಲೂ ಮುಖ್ಯಮಂತ್ರಿ ಭೂಪೇಶ್ ಬಫೇಲ್ ಮತ್ತು ಸಿಂಗ್ ಡಿಯೊ ನಡುವೆ ಅಧಿಕ್ಕಾರಕ್ಕಾಗಿ ತಿಕ್ಕಾಟ ನಡೆಯುತ್ತಿದೆ.
ಭೂಪೇಶ್ ಬಘೇಲ್ ಮತ್ತು ತಮ್ಮ ನಡುವೆ ಅಧಿಕಾರ ಹಂಚಿಕೆಯಾಗಲಿದೆ ಎಂದು ಪಕ್ಷದ ನಾಯಕರು ಭರವಸೆ ನೀಡಿರುವುದಾಗಿ ಸಿಂಗ್ ಡಿಯೊ ಈ ಹಿಂದೆ ಹೇಳಿಕೆ ನೀಡಿದ್ದರು. ಅದನ್ನು ಭೂಪೇಶ್ ಬಘೇಲ್ ತಿರಸ್ಕರಿಸಿದ್ದರು. ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಸರತ್ತು ಆರಂಭಿಸಿದ್ದ ಸಿಂಗ್ ಡಿಯೊ, ಆಪ್ತ ಶಾಸಕರೊಂದಿಗೆ ಹೈಕಮಾಂಡ್ ಬಳಿ ತೆರಳಿ ಪ್ರಯತ್ನ ನಡೆಸಿದ್ದರು.
ಸಿಂಗ್ ಡಿಯೊ ಜೊತೆಗಿನ ಚಿತ್ರವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಭೂಪೇಶ್ ಬಘೇಲ್, ‘ನಾವು (ಚುನಾವಣೆಗೆ) ತಯಾರಾಗಿದ್ದೇವೆ. ಉಪಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಂಡ ಮಹಾರಾಜ್ ಸಾಹೆಬ್ ಅವರಿಗೆ ಅಭಿನಂದನೆ ಮತ್ತು ಶುಭಾಶಯಗಳು’ ಎಂದು ಬರೆದುಕೊಂಡಿದ್ದಾರೆ.
हैं तैयार हम.
महाराज साहब को उपमुख्यमंत्री के रूप में दायित्व के लिए बधाई एवं शुभकामनाएँ. @TS_SinghDeo pic.twitter.com/1sRZqsEU2W— Bhupesh Baghel (@bhupeshbaghel) June 28, 2023
ದೇವು ಅವರನ್ನು ಉಪಮುಖ್ಯಮಂತ್ರಿ ಮಾಡುವುದರಿಂದ ಛತ್ತೀಸ್‌ಗಢಕ್ಕೆ ಹೆಚ್ಚಿನ ಲಾಭವಾಗಲಿದೆ ಎಂದು ವೇಣುಗೋಪಾಲ್ ಬುಧವಾರ ಹೇಳಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ‘ಅವರು (ಸಿಂಗ್ ಡಿಯೊ) ಕಾಂಗ್ರೆಸ್‌ನ ನಿಷ್ಠಾವಂತ ನಾಯಕ ಮತ್ತು ಸಮರ್ಥ ಆಡಳಿತಗಾರ. ಉಪ ಮುಖ್ಯಮಂತ್ರಿಯಾಗಿ ಅವರ ಸೇವೆಯನ್ನು ರಾಜ್ಯವು ಮತ್ತಷ್ಟು ಪಡೆಯಲಿದೆ. ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವಕ್ಕೆ ಬಹುಮತ ನೀಡುವ ಮೂಲಕ ಛತ್ತೀಸಗಢದ ಜನರು ಮತ್ತೊಮ್ಮೆ ಕಾಂಗ್ರೆಸ್‌ಗೆ ಅಧಿಕಾರ ನೀಡಲಿದ್ದಾರೆ ಎಂಬ ವಿಶ್ವಾಸದಲ್ಲಿದ್ದೇವೆ’ ಎಂದು ಟ್ವಿಟ್ ಮಾಡಿದ್ದಾರೆ.
INC President Sh. Mallikarjun @kharge ji has approved the proposal for appointment of Sh. TS Singh Deo @TS_SinghDeo ji as the Deputy Chief Minister of Chhattisgarh.
He is a loyal Congress leader and an able administrator. The state will benefit greatly from his services as…
— K C Venugopal (@kcvenugopalmp) June 28, 2023


