Homeಮುಖಪುಟವಿರೋಧ ಪಕ್ಷಗಳ ಮುಂದಿನ ಸಭೆ ಬೆಂಗಳೂರಿನಲ್ಲಿ: ಎಸ್‌ಸಿಪಿ ಮುಖ್ಯಸ್ಥ ಶರದ್ ಪವಾರ್

ವಿರೋಧ ಪಕ್ಷಗಳ ಮುಂದಿನ ಸಭೆ ಬೆಂಗಳೂರಿನಲ್ಲಿ: ಎಸ್‌ಸಿಪಿ ಮುಖ್ಯಸ್ಥ ಶರದ್ ಪವಾರ್

- Advertisement -
- Advertisement -

ಜುಲೈ 13-14 ರಂದು ವಿರೋಧ ಪಕ್ಷಗಳ ಮುಂದಿನ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ತಿಳಿಸಿದ್ದಾರೆ.

ಜೂನ್ 23 ರಂದು ಬಿಹಾರದ ಪಾಟ್ನಾದಲ್ಲಿ ಮೊದಲ ಸಭೆ ನಡೆದಿದೆ. 15 ವಿಪಕ್ಷಗಳು ಸೇರಿ ಒಗ್ಗಟ್ಟು ಪ್ರದರ್ಶಿಸಿದ್ದೇವೆ. ಆದಾದ ನಂತರ ಮೋದಿಯವರು ಪ್ರಕ್ಷುಬ್ದರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಿಹಾರ ಸಿಎಂ ನಿತೀಶ್ ಕುಮಾರ್ ಮತ್ತು ಡಿಸಿಎಂ ತೇಜಸ್ವಿ ಯಾದವ್ ಕರೆದಿದ್ದ 15 ವಿರೋಧ ಪಕ್ಷಗಳ  ಪಾಟ್ನಾ ಸಭೆಗೆ ಬಿಜೆಪಿ ಪ್ರತಿಕ್ರಿಯೆ ನೋಡಿದರೆ ಅದು ಯಶಸ್ವಿಯಾಗಿದೆ ಎಂದು ನಿರೂಪಿಸಿದೆ ಎಂದು ಜಮ್ಮು ಕಾಶ್ಮೀರದ ಮಾಜಿ ಸಿಎಂ ಓಮರ್ ಅಬ್ದುಲ್ಲ ಹೇಳಿದ್ದಾರೆ.

ಪಾಟ್ನಾ ಸಭೆಯ ನಂತರ ವಿರೋಧ ಪಕ್ಷಗಳ ಮುಂದಿನ ಸಭೆಯನ್ನು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆಸಲಾಗುವುದು ಎಂದು ಹೇಳಲಾಗಿತ್ತು. ಆದರೆ ಈಗ ದಕ್ಷಿಣ ಭಾರತದಲ್ಲಿ ನಡೆಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗುವುದು ಎಂದು ಶರದ್ ಪವಾರ್ ತಿಳಿಸಿದ್ದಾರೆ.

ಮೊದಲ ಸಭೆಯಲ್ಲಿ ವಿರೋಧ ಪಕ್ಷಗಳ ಐಕ್ಯತೆ ಮತ್ತು ಅಗತ್ಯತೆ ಬಗ್ಗೆ ಚರ್ಚಿಸಲಾಗಿತ್ತು. ಸೀಟು ಹಂಚಿಕೆಯ ಬಗ್ಗೆ ಮುಂದಿನ ಸಭೆಗಳಲ್ಲಿ ಚರ್ಚಿಸಲಾಗುತ್ತದೆ ಎನ್ನಲಾಗಿದೆ.

ಇದನ್ನೂ ಓದಿ; ಮಣಿಪುರದ ಚುರಾಚಂದ್‌ಪುರ ಜಿಲ್ಲೆಗೆ ಹೊರಟಿದ್ದ ರಾಹುಲ್ ಗಾಂಧಿಗೆ ಪೊಲೀಸರಿಂದ ತಡೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read