Homeಕರ್ನಾಟಕNEP ಬದಲು ರಾಜ್ಯ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ: ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್

NEP ಬದಲು ರಾಜ್ಯ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ: ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್

- Advertisement -
- Advertisement -

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕೆಲ ನ್ಯೂನತೆಗಳು ಇವೆ. ಹಾಗಾಗಿ NEP ಬದಲು ರಾಜ್ಯ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, “ಯಾವುದೇ ರೀತಿ ವಿದ್ಯಾರ್ಥಿಗಳ‌ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದ ರೀತಿ ಬದಲಾವಣೆಗೆ ಗಮನಹರಿಸುತ್ತಿದ್ದೇವೆ. ಹಾಗಾಗಿ ಹಂತ ಹಂತವಾಗಿ ರಾಜ್ಯ ಶಿಕ್ಷಣ ನೀತಿ ಜಾರಿಯಾಗಲಿದೆ” ಎಂದರು.

“ಎರಡು ವರ್ಷಗಳ ಹಿಂದೆ ಹಿಂದಿನ ಸರ್ಕಾರ ನಮ್ಮ ರಾಜ್ಯದಲ್ಲಿ ಎನ್‌ಇಪಿ ಅನುಷ್ಠಾನ ಮಾಡಿದೆ. ಅದಕ್ಕೆ ಬಹಳಷ್ಟು ಪೂರ್ವ ತಯಾರಿ‌ ಆಗಬೇಕಿತ್ತು. ಆದರೆ ಆಗದ ಕಾರಣ ಅದರಲ್ಲಿ ಕೆಲ ನ್ಯೂನತೆಗಳು ಇವೆ. ಬಿಜೆಪಿ ಆಡಳಿತದ ಹಲವು ರಾಜ್ಯಗಳಲ್ಲಿಯೂ ಎನ್‌ಇಪಿ ಜಾರಿಗೊಳಿಸಿಲ್ಲ. ಈ ಎಲ್ಲವನ್ನೂ ಶಿಕ್ಷಣ ತಜ್ಞರ ಜೊತೆಗೆ ಚರ್ಚಿಸುತ್ತಿದ್ದೇವೆ” ಎಂದರು.

“ರಾಜ್ಯ ಶಿಕ್ಷಣ ನೀತಿ ಬಗ್ಗೆ ಮುಂದಿನ ದಿನಗಳಲ್ಲಿ ಸ್ಪಷ್ಟವಾದ ರೂಪ ಕೊಟ್ಟು ಬದಲಾವಣೆ ಪ್ರಕ್ರಿಯೆ ಪ್ರಾರಂಭ ಮಾಡುತ್ತೇವೆ. ಯಾವುದೇ ನೀತಿ ಜಾರಿಗೆ ತರಬೇಕಾದರೆ ಮೂಲಭೂತ ಸೌಲಭ್ಯಗಳು ಇರಬೇಕು. ಅದಕ್ಕೆ ಬೇಕಾದ ಬೋಧಕ, ಬೋಧಕೇತರ ಸಿಬ್ಬಂದಿಗಳ ವ್ಯವಸ್ಥೆ ಮಾಡಿಕೊಳ್ಳಬೇಕಾಗುತ್ತದೆ. ಅದಕ್ಕೆ ಅನುದಾನ ಒದಗಿಸುವ ಬಗ್ಗೆ ತಯಾರಿ ಮಾಡಬೇಕಾಗುತ್ತದೆ” ಎಂದು ಹೇಳಿದರು.

“ಖಾಸಗಿ ಸಂಸ್ಥೆಗಳಲ್ಲಿ ಒಂದು ರೀತಿ, ಆದರೆ ಸರ್ಕಾರಿ ಸಂಸ್ಥೆಗಳಲ್ಲಿ ಮತ್ತೊಂದು ರೀತಿ ಶಿಕ್ಷಣ ನೀಡಲಾಗುತ್ತಿದೆ. ಈ ಎಲ್ಲ ವಿಚಾರಗಳ ಬಗ್ಗೆ ಹೆಚ್ಚಿನ ಅಧ್ಯಯನ ಮಾಡಿ ಹಂತ ಹಂತವಾಗಿ ಒಂದು ನೀತಿಗೆ ಬದಲಾವಣೆ ತರಬೇಕು” ಎಂದರು.

ಇಂದಿನ ಔದ್ಯೋಗಿಕ ಬೇಡಿಕೆಗೆ ತಕ್ಕಂತೆ ನಮ್ಮ ಪಠ್ಯಕ್ರಮ ಬದಲಾಗಬೇಕಿದೆ. ಆ ಕೆಲಸವನ್ನು ಹಂತ ಹಂತವಾಗಿ ಮಾಡುತ್ತೇವೆ. ಪ್ರಾಧ್ಯಾಪಕರ ನೇಮಕಾತಿ ವಿಷಯ ನ್ಯಾಯಾಲಯದಲ್ಲಿ ಬಗೆಹರಿದ ನಂತರ ನೇಮಕಾತಿ ಮಾಡಿಕೊಳ್ಳುತ್ತೇವೆ. ರಾಜ್ಯದಲ್ಲಿ ಖಾಲಿ ಇರುವ 2.5 ಲಕ್ಷ ಹುದ್ದೆಗಳನ್ನು ತುಂಬುತ್ತೇವೆ ಎಂದು ತಿಳಿಸಿದ್ದಾರೆ.

“ಕೇಂದ್ರ ಸರ್ಕಾರ ನಮ್ಮ ಕಾರ್ಯಕ್ರಮಗಳಿಗೆ ಅಡ್ಡಿಪಡಿಸುವ ಕೆಲಸ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರು ಕೊಟ್ಟ ಮಾತಿನಂತೆ ಜನರಿಗೆ ನಡೆದುಕೊಂಡಿದ್ದಾರೆ. ಈ ಉದ್ದೇಶದಿಂದ ನೇರವಾಗಿ 5 ಕೆಜಿ ಅಕ್ಕಿ ಬದಲು ಹಣ ಕೊಡುತ್ತೇವೆ. ಇದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ, ಬಹುತೇಕರು ಒಪ್ಪಿದ್ದಾರೆ. ಕೇಂದ್ರದ ಮೇಲೆ ಸಂಸದರು ಒತ್ತಡ ಹೇರಬಹುದಿತ್ತು. ಈಗ ಅದೇ ಪ್ರಶ್ನೆಯನ್ನು ಬಿಜೆಪಿಗೆ ನಿರಂತರವಾಗಿ ಕೇಳುತ್ತಿದ್ದೇವೆ” ಎಂದರು.

ಜೂನ್ 6 ರಂದು ಎಂ.ಸಿ ಸುಧಾಕರ್‌ರವರು ಹಲವು ಶಿಕ್ಷಣ ತಜ್ಞರ ಜೊತೆ ಸಭೆ ನಡೆಸಿ ಎನ್‌ಇಪಿ ಸಾಧಕ ಬಾಧಕಗಳು ಕುರಿತು ಚರ್ಚಿಸಿದ್ದರು.

ಇದನ್ನೂ ಓದಿ: ಬಿಟ್ಟಿ ಭಾಗ್ಯಗಳಲ್ಲ; ಸರ್ವೋದಯದತ್ತ ತೆರೆದ ದಾರಿದೀಪಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...