ಮಹಾರಾಷ್ಟ್ರದ ಬುಲ್ಧಾನದಲ್ಲಿ ಶುಕ್ರವಾರ ತಡರಾತ್ರಿ ಭೀಕರ ಅಪಘಾತ ನಡೆದಿದೆ. ನಾಗ್ಪುರದಿಂದ ಪುಣೆಗೆ ತೆರಳುತ್ತಿದ್ದ ಖಾಸಗಿ ಬಸ್, ಬುಲ್ಧಾನ ಜಿಲ್ಲೆಯ ಸಿಂಧಖೇಡ್ ಸಮೃದ್ಧಿ ಮಹಾಮಾರ್ಗ್ ಎಕ್ಸ್‌ಪ್ರೆಸ್‌ವೇಯಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿ ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಂಡಿದ್ದು, 25 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಬಸ್‌ನಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರೆಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಹೋಗಿದ್ದು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.
ಗಾಯಾಳುಗಳನ್ನು ಬುಲ್ಧಾನ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಉಪ ಎಸ್ಪಿ ಬಾಬುರಾವ್ ಮಹಾಮುನಿ ತಿಳಿಸಿದ್ದಾರೆ. ಶನಿವಾರ ಮುಂಜಾನೆ 2 ಗಂಟೆ ಸುಮಾರಿಗೆ ಖಾಸಗಿ ಟ್ರಾವೆಲ್ಸ್ ಬಸ್ ನಾಗಪುರದಿಂದ ಪುಣೆಗೆ ತೆರಳುತ್ತಿದ್ದಾಗ ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿಯಂತೆ ಬಸ್ ಟಯರ್ ಒಡೆದು ವಾಹನ ಕಂಬಕ್ಕೆ ಡಿಕ್ಕಿ ಹೊಡೆದು ಡಿವೈಡರ್ ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ ಎಂದು ಬುಲ್ಧಾನ ಎಸ್ ಪಿ ಸುನಿಲ್ ಕಡಸ್ನೆ ಪಿಟಿಐಗೆ ತಿಳಿಸಿದ್ದಾರೆ. ಬಸ್ಸಿನಲ್ಲಿದ್ದ 33 ಪ್ರಯಾಣಿಕರ ಪೈಕಿ 25 ಮಂದಿ ಸುಟ್ಟು ಕರಕಲಾಗಿದ್ದಾರೆ.
ಘಟನೆಯಲ್ಲಿ ಬದುಕುಳಿದಿರುವ ಬಸ್‌ನ ಚಾಲಕ, ಕಡಸನೆ ಪ್ರಕಾರ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಟೈರ್ ಒಡೆದ ನಂತರ ಬಸ್ ಪಲ್ಟಿಯಾಗಿದೆ ಎಂದು ಹೇಳಿದರು.
ಅಪಘಾತದ ನಂತರ ಬಸ್ಸಿನಲ್ಲಿ ಕಾಣಿಸಿಕೊಂಡ ಬೆಂಕಿ
ಇನ್ನು ಬಸ್ ಅಪಘಾತವಾದಾಗ ಎಲ್ಲಾ ಪ್ರಯಾಣಿಕರು ಮಲಗಿಕೊಂಡಿದ್ದು, ಎನಾಗುತ್ತಿದೆ ಎನ್ನುವಷ್ಟರಲ್ಲೇ ಬೆಂಕಿ ಹೊತ್ತಿಕೊಂಡಿದೆ. ಸುಮಾರು 25 ಪ್ರಯಾಣಿಕರು ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಈ ಬಗ್ಗೆ ಪೊಲೀಸ್-ಆಡಳಿತ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಸದ್ಯ ಅಗ್ನಿಶಾಮಕ ದಳ ಹಾಗೂ ಪೊಲೀಸ್ ತಂಡ ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ.
ಇದನ್ನೂ ಓದಿ: ಮೈ-ಬೆಂ ಹೆದ್ದಾರಿಯಲ್ಲಿ ಮತ್ತೊಂದು ಅಪಘಾತ: ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನ ಸಾವು


