Homeಕರ್ನಾಟಕಅಕ್ಕಿ ಬದಲಿಗೆ ಹಣ ನೀಡಿ ಎಂದವರು ಈಗ ಉಲ್ಟಾ ಹೊಡೆದಿದ್ದಾರೆ, ಇದು ಇಬ್ಬಗೆಯ ನೀತಿ: ಬಿಜೆಪಿ...

ಅಕ್ಕಿ ಬದಲಿಗೆ ಹಣ ನೀಡಿ ಎಂದವರು ಈಗ ಉಲ್ಟಾ ಹೊಡೆದಿದ್ದಾರೆ, ಇದು ಇಬ್ಬಗೆಯ ನೀತಿ: ಬಿಜೆಪಿ ವಿರುದ್ಧ ಡಿಕೆಶಿ ಗರಂ

- Advertisement -
- Advertisement -

ನಾವು ಜನರಿಗೆ ಕೊಟ್ಟ ಮಾತಿನಂತೆ ಅನ್ನಭಾಗ್ಯ ಯೋಜನೆ ಜಾರಿ ಮಾಡುತ್ತೇವೆ. ಈಗ 5 ಕೆ.ಜಿ ಅಕ್ಕಿ ಹಾಗೂ ಹೆಚ್ಚುವರಿ ಅಕ್ಕಿ ಸಿಗುವವರೆಗೂ ಅದಕ್ಕೆ ಪ್ರತಿಯಾಗಿ ಹಣ ನೀಡುತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಕುಮಾರಕೃಪಾ ಅತಿಥಿಗೃಹದ ಬಳಿ ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆ ನೀಡಿದರು.

”ಅಕ್ಕಿ ಖರೀದಿಗೆ ನಮ್ಮ ಸಚಿವರು ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ಅಕ್ಕಿ ಸಿಗುವವರೆಗೂ ಬೇರೆ ಪಕ್ಷಗಳ ಸಲಹೆಯಂತೆ ಹಣ ನೀಡಲು ನಿರ್ಧರಿಸಿದ್ದೇವೆ. ಆರಂಭದಲ್ಲಿ ಹಣ ನೀಡಿ ಎಂದ ಬಿಜೆಪಿ ನಾಯಕರು ಈಗ ಪೂರ್ಣ ಪ್ರಮಾಣದಲ್ಲಿ ಅಕ್ಕಿ ನೀಡಿ ಎಂದು ಹೇಳುತ್ತಿರುವ ಬಗ್ಗೆ ಕೇಳಿದಾಗ, “ಇದರಿಂದ ಅವರ ಇಬ್ಬಗೆಯ ನೀತಿ ಗೊತ್ತಾಗುತ್ತಿದೆ” ಎಂದು ಬಿಜೆಪಿ ವಿರುದ್ಧ ಡಿಕೆಶಿ ಹರಿಹಾಯ್ದರು.

ಸದನದ ಒಳಗೆ ಹಾಗೂ ಹೊರಗೆ ಪ್ರತಿಭಟನೆ ಮಾಡುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ”ಬಹಳ ಸಂತೋಷ… ಪ್ರತಿಭಟನೆ ಮಾಡಬೇಕು… ನಾವು ಅವರನ್ನು ತಡೆಯುವುದಿಲ್ಲ. ಬಿಜೆಪಿಯವರು ಕೊಟ್ಟ ಮಾತು ಈಡೇರದೇ ಇರುವುದರ ಬಗ್ಗೆ ಹೋರಾಟ ಮಾಡಲು ಹೇಳಿದ್ದೇನೆ. ಅವರು ಹೋರಾಟದ ಮೂಲಕ ನಮ್ಮ ಯೋಜನೆಗೆ ಪ್ರಚಾರ ನೀಡುತ್ತಿದ್ದಾರೆ” ಎಂದರು.

”ಬಿಜೆಪಿ ಬಡವರ ಮೇಲೆ ಹೇಗೆ ಗದಾಪ್ರಹಾರ ಮಾಡುತ್ತಿದೆ, ಅಕ್ಕಿ ವಿಚಾರದಲ್ಲೂ ಅವರು ಹೇಗೆ ರಾಜಕೀಯ ಮಾಡುತ್ತಿದ್ದಾರೆ, ನಾವು ಜನರಿಗೆ ಅಕ್ಕಿ ನೀಡಲು ಎಷ್ಟು ಪ್ರಯತ್ನ ಮಾಡುತ್ತಿದ್ದೇವೆ ಎಂಬುದು ಜನರಿಗೆ ಅರ್ಥವಾಗುತ್ತಿದೆ. ಗೋದಾಮಿನಲ್ಲಿ ಅಕ್ಕಿ ಹುಳ ಹಿಡಿಯುತ್ತಿದ್ದರು ಬಡವರಿಗೆ ನೀಡದೆ ರಾಜಕಾರಣ ಮಾಡುತ್ತಿದ್ದಾರೆ. ಇದೆಲ್ಲವೂ ಜನರಿಗೆ ಗೊತ್ತಿದೆ” ಎಂದು ಹೇಳಿದರು.

”ನಾವು ದೀರ್ಘಾವಧಿ ಪರಿಹಾರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಕೇಂದ್ರ ನಿಗದಿ ಮಾಡಿರುವ ಮೊತ್ತಕ್ಕೆ ಅಕ್ಕಿ ಖರೀದಿಗೆ ಮುಂದಾಗಿದ್ದೇವೆ. ನಮ್ಮ ರಾಜ್ಯದಲ್ಲಿ ಅಕ್ಕಿ ಬೆಳೆದು ಈ ಮೊತ್ತಕ್ಕೆ ನೀಡಿದರೆ ಅವರಿಗೂ ಪ್ರೋತ್ಸಾಹ ನೀಡಿದಂತಾಗುತ್ತದೆ. ನಮಗೆ ಕೆಲ ರಾಜ್ಯದವರು ಒಂದೆರಡು ತಿಂಗಳು ಅಕ್ಕಿ ಪೂರೈಸಲು ಮುಂದಾಗಿದ್ದರು. ನಮಗೆ ತಾತ್ಕಾಲಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ಬೇಕು. ನಾವು ಆರಂಭದಲ್ಲಿ ಅಕ್ಕಿ ನೀಡಿ ನಂತರ ಅದನ್ನು ನಿಲ್ಲಿಸುವಂತೆ ಆಗಬಾರದು. ಹೀಗಾಗಿ ಬಿಜೆಪಿ ನಾಯಕರು ಕೊಟ್ಟಿರುವ ಸಲಹೆಯಂತೆ ಈಗ ಹಣ ನೀಡಲು ನಿರ್ಧರಿಸಿದ್ದೇವೆ” ಎಂದು ತಿಳಿಸಿದರು.

ಬಿಜೆಪಿ ಆಂತರಿಕ ಕಚ್ಚಾಟದ ಬಗ್ಗೆ ಪ್ರತಿಕ್ರಿಯಿಸಿ, ”ಬಿಜೆಪಿಯವರ ಬಾಯಿಗೆ ನಾವು ಹಿಂದೆಯೂ ಬೀಗ ಹಾಕಿಲ್ಲ. ಈಗಲೂ ಹಾಕುವುದಿಲ್ಲ. ಅವರ ಅನುಭವ, ನುಡಿಮುತ್ತುಗಳನ್ನು ಜನರಿಗೆ ತಿಳಿಸುತ್ತಿದ್ದಾರೆ” ಎಂದರು.

ಇದನ್ನೂ ಓದಿ: ನಾಳೆಯೇ ಮೊದಲ ಜಂಟಿ ಅಧಿವೇಶನ: ಬಿಜೆಪಿಯಲ್ಲಿ ಇನ್ನೂ ಮುಗಿಯದ ವಿಪಕ್ಷ ನಾಯಕನ ಆಯ್ಕೆಯ ಪ್ರಹಸನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...