Homeಮುಖಪುಟಬಿಆರ್‌ಎಸ್ ಪಕ್ಷವು ಬಿಜೆಪಿಯ 'ಬಿ ಟೀಮ್': ರಾಹುಲ್ ಗಾಂಧಿ

ಬಿಆರ್‌ಎಸ್ ಪಕ್ಷವು ಬಿಜೆಪಿಯ ‘ಬಿ ಟೀಮ್’: ರಾಹುಲ್ ಗಾಂಧಿ

- Advertisement -
- Advertisement -

ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷವು ಬಿಜೆಪಿಯ “ಬಿ ಟೀಮ್” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಪಕ್ಷದ ಪರ ಪ್ರಚಾರ ನಡೆಸುವ ವೇಳೆ ಹೇಳಿದ್ದಾರೆಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಬಿಆರ್‌ಎಸ್ ಪಕ್ಷವು ಬಿಜೆಪಿ ರಿಷ್ಟೇದಾರ್ (ಸಂಬಂಧಿ) ಸಮಿತಿ ಇದ್ದಂತೆ ಎಂದು ಖಮ್ಮಂ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ರಾಹುಲ್ ಹೇಳಿದರು. ”ಕೆಸಿಆರ್ [ರಾವ್] ಅವರು ರಾಜ ಮತ್ತು ತೆಲಂಗಾಣ ಅವರ ಸಾಮ್ರಾಜ್ಯ ಎಂದು ಭಾವಿಸುತ್ತಾರೆ” ಎಂದು ಹರಿಹಾಯ್ದರು.

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಿಆರ್‌ಎಸ್‌ ಪಕ್ಷದ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕೆ. ಕವಿತಾ ಅವರನ್ನು ಜಾರಿ ನಿರ್ದೇಶನಾಲಯವು ವಿಚಾರಣೆ ನಡೆಸಿರುವುದನ್ನು ಪ್ರಸ್ತಾಪಿಸಿದ ರಾಹುಲ್ ಗಾಂಧಿ, ”ಬಿಆರ್‌ಎಸ್ ಪಕ್ಷವು ಬಿಜೆಪಿಗೆ ಅಧೀನವಾಗಿದೆ” ಎಂದರು.

”ದೆಹಲಿ ಮದ್ಯ ಪ್ರಕರಣದಲ್ಲಿ ಕೆಸಿಆರ್ ಪುತ್ರಿ ಭಾಗಿಯಾಗಿರುವ ಕಾರಣ ಕೆಸಿಆರ್ (ರಾವ್) ಅವರು ನರೇಂದ್ರ ಮೋದಿ ಸರ್ಕಾರದಿಂದ ರಕ್ಷಣೆ ಕೋರುತ್ತಿದ್ದಾರೆ” ಎಂದು ರಾಹುಲ್ ಆರೋಪಿಸಿದ್ದಾರೆ.

”ಮೋದಿ ಈಗ ಬಿಜೆಪಿಯನ್ನು ಬೆಂಬಲಿಸುವಂತೆ ಕೆಸಿಆರ್ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ. ಕೆಸಿಆರ್ ಅವರ ರಿಮೋಟ್ ಕಂಟ್ರೋಲ್ ಈಗ ಮೋದಿ ಕೈಯಲ್ಲಿದೆ” ಎಂದು ಟೀಕಿಸಿದ್ದಾರೆ.

ಇತ್ತೀಚೆಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ”ಭ್ರಷ್ಟ ಮತ್ತು ಬಡವರ ವಿರೋಧಿ ಸರ್ಕಾರದ” ವಿರುದ್ಧ ಚುನಾವಣೆಯಲ್ಲಿ ಹೋರಾಡಿ ಗೆಲುವು ಸಾಧಿಸಿತು. ”ಕರ್ನಾಟಕದಲ್ಲಿ ಬಡವರು, ಒಬಿಸಿಗಳು, ಅಲ್ಪಸಂಖ್ಯಾತರು ಮತ್ತು ತುಳಿತಕ್ಕೊಳಗಾದವರ ಬೆಂಬಲದೊಂದಿಗೆ” ಬಿಜೆಪಿಯನ್ನು ಸೋಲಿಸಿದೆವು ಎಂದು ಭಾನುವಾರ ಗಾಂಧಿ ಹೇಳಿದರು.

”ತೆಲಂಗಾಣದಲ್ಲೂ ಅದೇ ರೀತಿಯ ಏನಾದರೂ ಸಂಭವಿಸಲಿದೆ. ಒಂದು ಕಡೆ ರಾಜ್ಯದ ಶ್ರೀಮಂತರು ಮತ್ತು ಶಕ್ತಿಶಾಲಿಗಳು ಮತ್ತು ಇನ್ನೊಂದು ಕಡೆ ನಮ್ಮೊಂದಿಗೆ ಬಡವರು, ಆದಿವಾಸಿಗಳು, ಅಲ್ಪಸಂಖ್ಯಾತರು, ರೈತರು ಮತ್ತು ಸಣ್ಣ ಅಂಗಡಿಯವರು ಇರುತ್ತಾರೆ. ಕರ್ನಾಟಕದಲ್ಲಿ ಏನಾಗಿದೆಯೋ ಅದೇ ತೆಲಂಗಾಣದಲ್ಲೂ ಪುನರಾವರ್ತನೆಯಾಗುತ್ತದೆ” ಎಂದು ರಾಹುಲ್ ಹೇಳಿದರು.

ಕರ್ನಾಟಕ ಚುನಾವಣೆಯಲ್ಲಿ ಸೋತ ನಂತರ ತೆಲಂಗಾಣದಲ್ಲಿ ಬಿಜೆಪಿ ಕೊನೆಗೊಂಡಿದೆ. ತೆಲಂಗಾಣದಲ್ಲಿ ಈಗ ಕಾಂಗ್ರೆಸ್ ಮತ್ತು ಬಿಆರ್‌ಎಸ್ ನಡುವೆ ಹೋರಾಟ ನಡೆಯುತ್ತಿದೆ. ಕರ್ನಾಟಕದಂತೆಯೇ ತೆಲಂಗಾಣದಲ್ಲೂ ಭ್ರಷ್ಟ ಬಿಆರ್‌ಎಸ್ ಅನ್ನು ತೆಲಂಗಾಣದ ಜನರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಸೋಲಿಸುತ್ತಾರೆ” ಎಂದು ರಾಹುಲ್ ವಿಶ್ವಾಸ ವ್ಯಕ್ತಪಡಿಸಿದರು.

ಈ ವರ್ಷದ ಕೊನೆಯಲ್ಲಿ ತೆಲಂಗಾಣ ವಿಧಾನಸಭೆ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ದ್ವೇಷ, ಹಿಂಸೆಯೆಂಬ ವಿಪತ್ತನ್ನು ಪ್ರೀತಿ ಮತ್ತು ಮಾತುಕತೆ ಮೂಲಕ ಮಾತ್ರ ಎದುರಿಸಬಹುದು: ಮಣಿಪುರ ಭೇಟಿ ಬಳಿಕ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...