Homeಮುಖಪುಟದೆಹಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಸಿಬಿಎಸ್‌ಇ ಪರೀಕ್ಷಾ ಶುಲ್ಕ ಪಾವತಿಸಬೇಕಾಗಿಲ್ಲ: ಮನೀಶ್ ಸಿಸೋಡಿಯಾ

ದೆಹಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಸಿಬಿಎಸ್‌ಇ ಪರೀಕ್ಷಾ ಶುಲ್ಕ ಪಾವತಿಸಬೇಕಾಗಿಲ್ಲ: ಮನೀಶ್ ಸಿಸೋಡಿಯಾ

- Advertisement -
- Advertisement -

ದೆಹಲಿಯ ಶಾಲಾ ವಿದ್ಯಾರ್ಥಿಗಳು ಸಿಬಿಎಸ್‌ಇ ಪರೀಕ್ಷಾ ಶುಲ್ಕವನ್ನು ಪಾವತಿಸಬೇಕಾಗಿಲ್ಲ, ಎಲ್ಲಾ ವರ್ಗದ ವಿದ್ಯಾರ್ಥಿಗಳ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ದೆಹಲಿಯ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳು 10 ನೇ ತರಗತಿ ಮತ್ತು 12 ನೇ ತರಗತಿ ಪರೀಕ್ಷೆಗಳಿಗೆ ಯಾವುದೇ ಶುಲ್ಕವನ್ನು ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿಗೆ ಪಾವತಿಸಬೇಕಾಗಿಲ್ಲ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬುಧವಾರ ಪ್ರಕಟಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಈ ವರ್ಷ ಪರೀಕ್ಷಾ ಶುಲ್ಕ ಹೆಚ್ಚಳವನ್ನು ಹಿಂತೆಗೆದುಕೊಳ್ಳಲು ಸರ್ಕಾರ ಸಿಬಿಎಸ್‌ಇಯೊಂದಿಗೆ ಚರ್ಚಿಸುತ್ತಿದೆ ಎಂದು ಸಿಸೋಡಿಯಾ ಹೇಳಿದ್ದಾರೆ”. ಏನಾಗುತ್ತದೆ ಎಂಬುದರ ಹೊರತಾಗಿಯೂ, ಯಾವುದೇ ಮಗು ನೋಂದಣಿ ಶುಲ್ಕದ ಹೊಣೆಯನ್ನು ಹೊರಬೇಕಾಗಿಲ್ಲ, ಏಕೆಂದರೆ ಸರ್ಕಾರವು ಅದನ್ನು ಭರಿಸಲಿದೆ” ಎಂದು ಅವರು ಹೇಳಿದ್ದಾರೆ.

ಕಳೆದ ವಾರ, ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿಯು ದೆಹಲಿ ಸರ್ಕಾರಿ ಶಾಲೆಗಳಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಐದು ವಿಷಯಗಳಿಗೆ 1,200 ರೂ ಉಳಿದವರೆಲ್ಲರೂ ಐದು ವಿಷಯಗಳಿಗೆ 1,500 ರೂ. ಶುಲ್ಕ ಹೆಚ್ಚಿಸಿತ್ತು.

ಈ ಮೊದಲು, ದೆಹಲಿಯಲ್ಲಿ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಯ ಶುಲ್ಕ 350 ರೂ, ಅದರಲ್ಲಿ ದೆಹಲಿ ಸರ್ಕಾರ 300 ರೂ. ಪಾವತಿಸಿತ್ತು. ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಇದು 750 ರೂ. ಪರೀಕ್ಷಾ ಶುಲ್ಕವಾಗಿ ದೆಹಲಿಯ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಕೇವಲ 50 ರೂ. ಮಾತ್ರ ಸಂಗ್ರಹಿಸುತ್ತಿತ್ತು.

ಇದನ್ನೂ ಓದಿ: ಸಿಬಿಎಸ್ಸಿ ಪರೀಕ್ಷಾ ಶುಲ್ಕ ಹೆಚ್ಚಳ ವಿರೋಧಿಸಿ ಕೇಂದ್ರಕ್ಕೆ ಪತ್ರ ಬರೆದ ಒಡಿಸ್ಸಾ ಸಿಎಂ ನವೀನ್ ಪಟ್ನಾಯಕ್, ದನಿಗೂಡಿಸಿದ ಕೇಜ್ರಿವಾಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...