Homeಕರ್ನಾಟಕ2023-24ರ ಆಯವ್ಯಯ ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಪೂರಕವಾಗಿದೆ: ನಿರಂಜನಾರಾಧ್ಯ.ವಿ.ಪಿ

2023-24ರ ಆಯವ್ಯಯ ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಪೂರಕವಾಗಿದೆ: ನಿರಂಜನಾರಾಧ್ಯ.ವಿ.ಪಿ

- Advertisement -
- Advertisement -

2023-24ರ ಆಯವ್ಯಯದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಒದಗಿಸಿರುವ ಹಣ ಶಿಕ್ಷಣ ಹಕ್ಕು ಕಾಯಿದೆಯ ಆಶಯಗಳನ್ನು ಸಾಕಾರಗೊಳಿಸಲು ಮತ್ತು ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಪೂರಕವಾಗಿದೆ ಎಂದು ಶಿಕ್ಷಣ ತಜ್ಞ ಡಾ.ವಿ.ಪಿ ನಿರಂಜನಾರಾಧ್ಯರವರು ಅಭಿಪ್ರಾಯಪಟ್ಟಿದ್ದಾರೆ.

ಹಣಕಾಸು ಜವಾಬ್ದಾರಿ ಹೊತ್ತಿರುವ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಇಂದು ಮಂಡಿಸಿದ ಆಯವ್ಯಯದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಒದಗಿಸಿರುವ ಹೊಸ ಕಾರ್ಯಕ್ರಮ, ಯೋಜನಾ ಅನುದಾನಗಳು ಹಾಗು ಆಯವ್ಯಯದಲ್ಲಿ ಮೀಸಲಿಟ್ಟಿರುವ ಒಟ್ಟು ಹಣ ರಾಜ್ಯದಲ್ಲಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಸಹಾಯಕಾರಿಯಾಗದೆ ಎಂದು ಅವರು ಹೇಳಿದ್ದಾರೆ.

ಈ ಮೂಲಕ ಶಿಕ್ಷಣ ಹಕ್ಕು ಕಾಯಿದೆಯ ಆಶಯಗಳನ್ನು ಸಾಕಾರಗೊಳಿಸಲು ಮತ್ತು ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಸರ್ಕಾರವು ಬದ್ಧವಾಗಿದೆ ಎಂಬ ಭರವಷೆಯನ್ನು ಆಯವ್ಯಯ ನೀಡಿದೆ. ಈ ಕಾರಣಕ್ಕಾಗಿ ನಾನು ಮಾನ್ಯ ಮುಖ್ಯ ಮಂತ್ರಿಗಳನ್ನು ಸರ್ಕಾರಿ ಶಾಲೆಗಳ ಸಮಸ್ತ ಮೂಲ ವಾರಸುದಾರರ ಪರವಾಗಿ ಅದರಲ್ಲೂ ವಿಶೇಷವಾಗಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಪರವಾಗಿ ಅಭಿನಂದಿಸುತ್ತೇನೆ ಎಂದಿದ್ದಾರೆ.

ಆಯವ್ಯಯದಲ್ಲಿ, ಹೊಸ ತರಗತಿ ಕೋಣೆಗಳ ನಿರ್ಮಾಣಕ್ಕೆ 540 ಕೋಟಿ; ಶೌಚಾಲಯಗಳನ್ನು ನಿರ್ಮಿಸಲು 200 ಕೋಟಿ; ಅತ್ಯಂತ ಶಿಥಿಲವಾದ ಹಾಗು ದುರಸ್ಥಿಗೆ ಬಂದಿರುವ ಕಟ್ಟಡಗಳ ದುರಸ್ತಿಗೆ 1೦೦ ಕೋಟಿ ಪ್ರಾಥಮಿಕ ಹಾಗು ಪ್ರೌಢ ಶಾಲೆಗಳ ನಿರ್ವಹಣೆ ಮತ್ತು ಸುಸ್ಥಿತಿ ಕಾಪಾಡಲು ಈಗಿನ ಅನುದಾನವನ್ನು 20000 ನ್ನು 45000 ಕ್ಕೆ ಏರಿಸಲು 153 ಕೋಟಿ ; ವಾರಕ್ಕೆ ಎರಡು ಬಾರಿ ಮೊಟ್ಟೆ ನೀಡುವ ಮೂಲಕ ಮಕ್ಕಳ ಪೌಷ್ಠಿಕತೆಯನ್ನು ಸುಧಾರಿಸಲು 280 ಕೋಟಿ ;ಕಲಿಕಾ ನ್ಯೂನತೆಯನ್ನು ಸರಿಪಡಿಸಿ ಗುಣಾತ್ಮಕ ಶಿಕ್ಷಣವನ್ನು ಖಾತರಿಗೊಳಿಸಲು 80 ಕೋಟಿ; ಮಕ್ಕಳ ಸೃಜನಾತ್ಮಕ ಚಿಂತನೆ ಹಾಗು ಚಟುವಟಿಕೆಗಳ ಅನ್ವೇಷಣೆಗೆ 2 ಕೋಟಿ; ಸಾಟ್ಸ್‌ (Students Achievement Tracking System) ನ್ನು 2.0 ಗೆ ಮೇಲ್ದರ್ಜೆಗೇರಿಸಲು ಕ್ರಮ ; ಪರಿಸರ ರಕ್ಷಣೆಗೆ ಶಾಲೆಗಳ ಸುತ್ತಮುತ್ತ ಸುಮಾರು 50 ಲಕ್ಷ ಗಿಡಗಳನ್ನು ನೆಡುವ ಯೋಜನೆ ಹಾಗು ಸಾರ್ವಜನಿಕ ಗ್ರಂಥಾಲಯಗಳಿಗೆ ಸದಭಿರುಚಿಯ ಪುಸ್ತಕಗಳನ್ನು ಒದಗಿಸಲು 10 ಕೋಟಿ ಹಣವನ್ನು ಒದಗಿಸಿರುವುದು ಮುಖ್ಯ ಮಂತ್ರಿಗಳಿಗೆ ಹಾಗು ಸರ್ಕಾರಕ್ಕೆ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಇರುವ ಸದಾಶಯವನ್ನು ಸಾಬೀತುಪಡಿಸಿದೆ ಎಂದು ತಿಳಿಸಿದ್ದಾರೆ.

ಒಟ್ಟಾರೆ, 2023-24 ನೇ ಸಾಲಿಗೆ ಆಯವ್ಯಯದಲ್ಲಿ ಶಿಕ್ಷಣಕ್ಕೆ 37587 ಕೋಟಿಯನ್ನು (ಒಟ್ಟು ಆಯವ್ಯಯದಲ್ಲಿ ಶೇಕಡ.11) ಮೀಸಲಿಟ್ಟಿರುವುದು ನಿಜಕ್ಕೂ ಸ್ವಾಗತಾರ್ಹ. ಶಿಕ್ಷಣ ಇಲಾಖೆಗೆ , ಉಳಿದೆಲ್ಲ ಇಲಾಖೆಗಳಿಗಿಂತ ಅತಿ ಹೆಚ್ಚು ಹಣವನ್ನು ಒದಗಿಸಿರುವುದು, ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಗೊಳಿಸಲು ಸತತವಾಗಿ ನಾಲ್ಕು ದಶಕಗಳಿಂದ ಹೋರಾಡುತ್ತಿರುವ ನನ್ನಂಥವರಿಗೆ ಒಂದು ಹೊಸ ಭರವಸೆಯನ್ನು ಮೂಡಿಸಿದೆ ಎಂದಿದ್ದಾರೆ.

ಇದನ್ನೂ ಓದಿ; ಸಿದ್ದರಾಮಯ್ಯನವರು ಮಂಡಿಸುತ್ತಿರುವ ಬಜೆಟ್‌ನ ಮುಖ್ಯಾಂಶಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...