Homeಮುಖಪುಟಸಿಧಿ ಮೂತ್ರ ವಿಸರ್ಜನೆ ಪ್ರಕರಣ ಟೀಕಿಸಿ ಕಾರ್ಟೂನ್ ಟ್ವೀಟ್: ಗಾಯಕಿ ನೇಹಾ ಸಿಂಗ್ ವಿರುದ್ಧ FIR...

ಸಿಧಿ ಮೂತ್ರ ವಿಸರ್ಜನೆ ಪ್ರಕರಣ ಟೀಕಿಸಿ ಕಾರ್ಟೂನ್ ಟ್ವೀಟ್: ಗಾಯಕಿ ನೇಹಾ ಸಿಂಗ್ ವಿರುದ್ಧ FIR ದಾಖಲು

- Advertisement -
- Advertisement -

ಸಿಧಿ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಸಂಬಂಧಿಸಿ ಟೀಕಿಸಿ ಕಾರ್ಟೂನ್ ಟ್ವೀಟ್ ಮಾಡಿರುವ ಭೋಜ್‌ಪುರಿ ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ಶುಕ್ರವಾರ ಭೋಪಾಲೋನ್‌ನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಗಾಯಕಿ ನೇಹಾ ಸಿಂಗ್ ಅವರ ಟ್ವೀಟ್‌ನಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರನ್ನು ಕೆಟ್ಟದಾಗಿ ತೋರಿಸಲಾಗಿದೆ ಎಂದು ಹೇಳಲಾಗಿದೆ. ಎಎನ್‌ಐ ಪ್ರಕಾರ, ಆರ್‌ಎಸ್‌ಎಸ್ ಉಡುಪಿನ ವ್ಯಕ್ತಿಯೊಬ್ಬರು ಮತ್ತೋರ್ವ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವುದನ್ನು ಆ ಚಿತ್ರದಲ್ಲಿ ಚಿತ್ರಿಸಲಾಗಿದೆ.

ಮಧ್ಯಪ್ರದೇಶದಲ್ಲಿ ಇತ್ತೀಚೆಗೆ ನಡೆದ ಘಟನೆಯನ್ನೇ ಚಿತ್ರಿಸುವಂತೆ ಈ ಟ್ವೀಟ್ ಮಾಡಲಾಗಿದೆ. ಪ್ರವೇಶ್ ಶುಕ್ಲಾ ಎನ್ನುವ ಬಿಜೆಪಿ ಮುಖಂಡನು ಬುಡಕಟ್ಟು ಸಮುದಾಯದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದನು. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಶುಕ್ಲಾ ಅವರನ್ನು ಬಂಧಿಸಲಾಗಿದೆ.

ಈ ಘಟನೆ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಖಂಡನೆ ವ್ಯಕ್ತವಾಯಿತು. ಆ ಬಳಿಕ ಆರೋಪಿಯನ್ನು ಬಂಧಿಸಿ ಎನ್‌ಎಸ್‌ಸಿ ಪ್ರಕರಣ ದಾಖಲಿಸಲಾಗಿದೆ.

ಇದೀಗ ಈ ಪ್ರಕರಣವನ್ನು ಟೀಕಿಸಿ ಟ್ವೀಟ್ ಮಾಡಿರುವವರ ವಿರುದ್ಧ ರಾಜ್ಯ ಬಿಜೆಪಿ ಸಮರ ಸಾರಿದ್ದು, ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಹಬೀಬ್‌ಗಂಜ್ ಪೊಲೀಸ್ ಠಾಣೆಯ ಉಸ್ತುವಾರಿ ಮನೀಶ್ ಸಿಂಗ್ ಭಡೋರಿಯಾ, ”ನಾವು ಐಪಿಸಿ ಸೆಕ್ಷನ್ 153ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ” ಎಂದು ಹೇಳಿದ್ದಾರೆ.

”ನಾವು ಟ್ವಿಟರ್ ಕಂಪನಿಯಿಂದ ಖಾತೆದಾರರ ಬಗ್ಗೆ ಮಾಹಿತಿಯನ್ನು ಪಡೆಯುತ್ತೇವೆ. ಈ ರೀತಿಯ ಟ್ವೀಟ್‌ನ್ನು ಬೇರೆ ಯಾವುದೇ ವ್ಯಕ್ತಿ ಹಾಕಿದ್ದಾರೆಯೇ ಎಂಬುದು ತನಿಖೆಯ ನಂತರ ಸ್ಪಷ್ಟವಾಗುತ್ತದೆ. ಆರೆಸ್ಸೆಸ್ ಮತ್ತು ಬುಡಕಟ್ಟು ಸಮುದಾಯದ ನಡುವೆ ವೈಷಮ್ಯವನ್ನು ಹುಟ್ಟುಹಾಕಿದ ಆರೋಪ ಗಾಯಕಿಯ ಮೇಲಿದೆ” ಎಂದು ಅವರು ತಿಳಿಸಿದ್ದಾರೆ.

ಇದೀಗ ಈ ಘಟನೆ ಕುರಿತು ಹೇಳಿಕೆ ನೀಡಿರುವ ಸಂತ್ರಸ್ತ ದಶಮತ್ ರಾವತ್, ”ಆರೋಪಿಯಿಂದ ತಪ್ಪಾಗಿದೆ. ಅವರಿಗೆ ತಪ್ಪಿನ ಅರಿವಾಗಿದೆ. ಅವರನ್ನು ಬಿಡುಗಡೆಗೊಳಿಸಿ” ಎಂದು ರಾಜ್ಯ ಸರ್ಕಾರವನ್ನು ಕೋರಿದ್ದಾರೆ.

ಏನಿದು ಘಟನೆ:

ಮಧ್ಯಪ್ರದೇಶದ ಬಿಜೆಪಿ ನಾಯಕನೊಬ್ಬ ಆದಿವಾಸಿ ಬುಡಕಟ್ಟು ಸಮುದಾಯದ ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನುಷ ಘಟನೆ ಸಿಧಿ ಜಿಲ್ಲೆಯಲ್ಲಿ ವರದಿಯಾಗಿತ್ತು. ಮನುಷ್ಯರೆಲ್ಲರೂ ತಲೆತಗ್ಗಿಸಬೇಕಾದ ಅಮಾನವೀಯ ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಆರೋಪಿಯನ್ನು ಬಂಧಿಸಿದ್ದಾರೆ ಮತ್ತು ಅವರ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ)ಯನ್ನು ದಾಖಲು ಮಾಡಿದ್ದಾರೆ.

ಆರೋಪಿ ಸಿಧಿ ಬಿಜೆಪಿ ಶಾಸಕ ಕೇದಾರ್ ನಾಥ್ ಶುಕ್ಲಾ ಅವರ ಬೆಂಬಲಿಗ ಪ್ರವೇಶ್ ಶುಕ್ಲಾನನ್ನು ಬಂಧಿಸಲು ಹಲವಾರು ತಂಡಗಳನ್ನು ಕಳುಹಿಸಲಾಗಿತ್ತು. ಆರೋಪಿ ತನ್ನ ಸ್ಥಳಗಳನ್ನು ಬದಲಾಯಿಸುತ್ತಿದ್ದ ಕೊನೆಗೂ ಅವರನ್ನು ಪತ್ತೆಹಚ್ಚುವಲ್ಲಿ ಮಧ್ಯಪ್ರದೇಶ ಪೊಲೀಸರು ಯಶಸ್ವಿಯಾಗಿದ್ದಾರೆ. ನಿನ್ನೆ ತಡರಾತ್ರಿ ಆತನನ್ನು ಬಂಧಿಸಲಾಗಿದ್ದು, ಸದ್ಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿರುವ ಪೊಲೀಸರು, NSA ಜೊತೆಗೆ, ಐಪಿಸಿ ಸೆಕ್ಷನ್ 294 (ಅಶ್ಲೀಲ ಕೃತ್ಯಗಳು ಮತ್ತು ಹಾಡುಗಳು), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಮತ್ತು SC/ST (ದೌರ್ಜನ್ಯ ತಡೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ಇದು ಸುಮಾರು ಮೂರು ತಿಂಗಳ ಹಿಂದಿನ ವೀಡಿಯೋ ಎನ್ನುವುದು ಗೊತ್ತಾಗಿದೆ. ಈ ವಿಚಾರ ತಿಳಿದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ಆರೋಪಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಹೇಳಿದ್ದಾರೆ.

ವಿಪಕ್ಷಗಳಿಂದ ಟೀಕೆ: 

”ಶುಕ್ಲಾ ಅವರು ಬಿಜೆಪಿಯ ಸಿದ್ಧಿ ಶಾಸಕ ಕೇದಾರನಾಥ್ ಶುಕ್ಲಾ ಅವರ ಸಹವರ್ತಿ” ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ ಈ ಆರೋಪವನ್ನು ಬಿಜೆಪಿ ಮತ್ತು ಅದರ ಶಾಸಕರು ನಿರಾಕರಿಸಿದ್ದಾರೆ.

ಅವರ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ಬಿಎಸ್‌ಪಿ ವರಿಷ್ಠೆ ಮಾಯಾವತಿ, ”ಮಧ್ಯಪ್ರದೇಶದ ಬಿಜೆಪಿ ಸರ್ಕಾರವು ಆ ಕ್ರಿಮಿನಲ್ ವಿರುದ್ಧ ಎನ್‌ಎಸ್‌ಎ ಮಾತ್ರವಲ್ಲದೆ ಆತನ ಆಸ್ತಿಯನ್ನು ಮುಟ್ಟುಗೋಲು ಹಾಕುವ ಕ್ರಮ ತೆಗೆದುಕೊಳ್ಳಬೇಕು ಮತ್ತು ಅವರು ತಮ್ಮ ಪಕ್ಷಕ್ಕೆ ಸೇರಿದವರು ಎಂದು ಹೇಳುತ್ತಿಲ್ಲ. ಇಂತಹ ಘಟನೆಗಳು ಎಲ್ಲರಿಗೂ ನಾಚಿಕೆ ತರುತ್ತವೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...