Homeಮುಖಪುಟರಾಜ್ಯಪಾಲರು ಕೇಂದ್ರದ ಏಜೆಂಟ್‌; ಹುದ್ದೆಯಲ್ಲಿರಲು ಅನರ್ಹರು: ರಾಷ್ಟ್ರಪತಿಗೆ ಸಿಎಂ ಸ್ಟಾಲಿನ್ ಪತ್ರ

ರಾಜ್ಯಪಾಲರು ಕೇಂದ್ರದ ಏಜೆಂಟ್‌; ಹುದ್ದೆಯಲ್ಲಿರಲು ಅನರ್ಹರು: ರಾಷ್ಟ್ರಪತಿಗೆ ಸಿಎಂ ಸ್ಟಾಲಿನ್ ಪತ್ರ

- Advertisement -
- Advertisement -

ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ವಿರುದ್ಧ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಶನಿವಾರ ಮತ್ತೊಮ್ಮೆ  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ದೂರು ನೀಡಿದ್ದಾರೆ.

ರಾಷ್ಟ್ರಪತಿ ಮುರ್ಮು ಅವರಿಗೆ ಪತ್ರ ಬರೆದಿರುವ ಸ್ಟಾಲಿನ್ ಅವರು, ”ರಾಜ್ಯಪಾಲ ಆರ್‌ಎನ್ ರವಿ ಅವರು ರಾಜ್ಯದಲ್ಲಿ ರಾಜಕೀಯ ಎದುರಾಳಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜ್ಯ ಸರ್ಕಾರವನ್ನು ಉರುಳಿಸಲು ಕಾಯುತ್ತಿದ್ದಾರೆ ಮತ್ತು ಅಕಾಶಗಳನ್ನು ಹುಡುಕುತ್ತಿದ್ದಾರೆ. ಹಾಗಾಗಿ ಅವರು ಸಾಂವಿಧಾನಿಕ ಹುದ್ದೆಯಲ್ಲಿ ಮುಂದುವರಿಯಲು ಯೋಗ್ಯರಲ್ಲ. ಅವರನ್ನು ಕೇವಲ ಕೇಂದ್ರ ಸರ್ಕಾರದ ಏಜೆಂಟ್ ಎಂದು ಪರಿಗಣಿಸಬಹುದು” ಎಂದು ಬರೆದಿರುವುದಾಗಿ ಪಿಟಿಐ ವರದಿ ಮಾಡಿದೆ.

“ರಾಜ್ಯಪಾಲರ ಈ ಕ್ರಮವು ಒಕ್ಕೂಟ ವ್ಯವಸ್ಥೆಯನ್ನು ಹಾನಿ ಮಾಡುತ್ತದೆ. ಈ ಮೂಲಕ ಭಾರತೀಯ ಪ್ರಜಾಪ್ರಭುತ್ವದ ಮೂಲ ತತ್ವಗಳನ್ನು ನಾಶಪಡಿಸುತ್ತದೆ. ರವಿ ಅಂತಹ ನಡವಳಿಕೆಗೆ ಒಳ್ಳೆಯ ಉದಾಹರಣೆ” ಎಂದು ಸ್ಟಾಲಿನ್ ಹೇಳಿದರು.

”ರಾಜ್ಯಪಾಲರು ಕೋಮು ದ್ವೇಷವನ್ನು ಪ್ರಚೋದಿಸುವ ಮೂಲಕ ತಮಿಳುನಾಡಿನ ಶಾಂತಿಗೆ ಧಕ್ಕೆ ತಂದಿದ್ದಾರೆ ಎಂದು ಸ್ಟಾಲಿನ್ ಆರೋಪಿಸಿದ್ದಾರೆ.

”ರಾಜ್ಯಪಾಲರು ತಮ್ಮ ರಾಜಕೀಯ ಮತ್ತು ಧಾರ್ಮಿಕ ಅಭಿಪ್ರಾಯಗಳನ್ನು ಸಾರ್ವಜನಿಕವಾಗಿ ವ್ಯಕ್ತಪಡಿಸುವುದು ಸೂಕ್ತವಲ್ಲ. ಇಂತಹ ಭಾಷಣಗಳು ಸರ್ಕಾರಕ್ಕೆ ಮುಜುಗರದ ಪರಿಸ್ಥಿತಿಯನ್ನು ಸೃಷ್ಟಿಸುವುದಲ್ಲದೆ ಚುನಾಯಿತ ಸರ್ಕಾರದ ವಿರುದ್ಧ ದ್ವೇಷದ ವಾತಾವರಣವನ್ನು ಸೃಷ್ಟಿಸುತ್ತವೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

”ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಏಕಪಕ್ಷೀಯವಾಗಿ ಸಂಪುಟದಿಂದ ವಜಾಗೊಳಿಸಿ ಕೆಲವೇ ಗಂಟೆಗಳಲ್ಲಿ ಅಮಾನತುಗೊಳಿಸಿರುವ ರಾಜ್ಯಪಾಲರ ಕ್ರಮ ಅವರ ರಾಜಕೀಯ ಒಲವನ್ನು ತೋರಿಸುತ್ತದೆ. ಸಚಿವರನ್ನು ಸಂಪುಟಕ್ಕೆ ಸೇರಿಸುವುದು ಅಥವಾ ಅವರನ್ನು ತೆಗೆದುಹಾಕುವುದು ರವಿ ಅವರ ಕೆಲಸವಲ್ಲ, ಇದು ಸಾಂವಿಧಾನಿಕ ನಿಬಂಧನೆಗಳ ಗಂಭೀರ ಉಲ್ಲಂಘನೆಯಾಗಿದೆ”  ಎಂದು ಸ್ಟಾಲಿನ್ ಕಿಡಿಕಾರಿದ್ದಾರೆ.

ಮಾಜಿ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ ಮಂತ್ರಿಗಳನ್ನು ವಿಚಾರಣೆಗೆ ಒಳಪಡಿಸಲು ಅನುಮತಿಯನ್ನು ರಾಜ್ಯಪಾಲರು ಅನಗತ್ಯವಾಗಿ ವಿಳಂಬ ಮಾಡುತ್ತಾರೆ ಎಂದು ಸ್ಟಾಲಿನ್ ಪತ್ರದಲ್ಲಿ ಬರೆದಿದ್ದಾರೆ.

”ವಿಧಾನಸಭೆ ಅಂಗೀಕರಿಸಿದ ಮಸೂದೆಗಳಿಗೆ ಒಪ್ಪಿಗೆ ನೀಡಲು ವಿಳಂಬ ಮಾಡುವ ಮೂಲಕ ರವಿ ಅವರು ರಾಜ್ಯ ಸರ್ಕಾರದ ಕಾರ್ಯನಿರ್ವಹಣೆಗೆ ಅಡ್ಡಿಪಡಿಸುತ್ತಾರೆ” ಎಂದು ಆರೋಪ ಮಾಡಿದ್ದಾರೆ.

”ರವಿ ಅವರು ನಾಗಾಲ್ಯಾಂಡ್ ಗವರ್ನರ್ ಆಗಿದ್ದ ವೇಳೆ, ಅವರ ಅಧಿಕಾರಾವಧಿಯೂ ತೃಪ್ತಿಕರವಾಗಿಲ್ಲ. ಅವರು ಅಲ್ಲಿಂದ ನಿರ್ಗಮಿಸಿದ ನಂತರವೇ ರಾಜ್ಯದಲ್ಲಿ ಶಾಂತಿ ನೆಲೆಸಿದೆ ಎಂದು ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ ಹೇಳಿರುವುದಾಗಿ” ಸ್ಟಾಲಿನ್ ಪತ್ರದಲ್ಲಿ ಬರೆದಿದ್ದಾರೆ.

”ತಮ್ಮ ನಡವಳಿಕೆ ಮತ್ತು ಕೆಲಸದಿಂದ ರಾಜ್ಯಪಾಲರು ಪಕ್ಷಪಾತಿ ಎನ್ನುವುದು ಸ್ಪಷ್ಟವಾಗಿದೆ ಹಾಗಾಗಿ ಅವರು ರಾಜ್ಯಪಾಲರ ಹುದ್ದೆಯಲ್ಲಿ ಮುಂದುವರೆಯಲು ಅನರ್ಹರು ಎಂದು ಸಾಬೀತುಪಡಿಸಿದ್ದಾರೆ. ರವಿಯನ್ನು ಉನ್ನತ ಹುದ್ದೆಯಿಂದ ಕೆಳಗಿಳಿಸಲು ಯೋಗ್ಯರಾಗಿದ್ದಾರೆ” ಎಂದು ಸ್ಟಾಲಿನ್ ಮುರ್ಮು ಅವರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು: ನಮ್ಮ ಸಚಿವರನ್ನು ವಜಾ ಮಾಡಲು ನೀವು ಯಾರು?; ರಾಜ್ಯಪಾಲರಿಗೆ ಸ್ಟಾಲಿನ್ ನೇರ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...

ಲೈಂಗಿಕ ಕಿರುಕುಳದ ಆರೋಪ ಮಾಡಿದ ಪತ್ರಕರ್ತೆಯ ವಿರುದ್ಧ ಜಾತಿ ನಿಂದನೆ ಪ್ರಕರಣ: ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ವರದಿ ಮಾಡುವಾಗ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಮಹಿಳಾ ಪತ್ರಕರ್ತೆಯ ವಿರುದ್ಧ ದಾಖಲಾಗಿರುವ...