HomeUncategorizedಪ. ಬಂಗಾಳ ಪಂಚಾಯತ್ ಚುನಾವಣೆ: ಹಿಂಸಾಚಾರ ಹಿನ್ನೆಲೆ 696 ಬೂತ್‌ಗಳಲ್ಲಿ ಮರು ಮತದಾನ

ಪ. ಬಂಗಾಳ ಪಂಚಾಯತ್ ಚುನಾವಣೆ: ಹಿಂಸಾಚಾರ ಹಿನ್ನೆಲೆ 696 ಬೂತ್‌ಗಳಲ್ಲಿ ಮರು ಮತದಾನ

- Advertisement -
- Advertisement -

ಹಿಂಸಾಚಾರ ಮತ್ತು ಮತಯಂತ್ರಗಳನ್ನು ಒಡೆದುಹಾಕಿದ ಆರೋಪದಡಿ ಮರು ಮತದಾನಕ್ಕೆ ಪಶ್ಚಿಮ ಬಂಗಾಳ ರಾಜ್ಯ ಚುನಾವಣಾ ಆಯೋಗ ಮುಂದಾಗಿದ್ದು, ರಾಜ್ಯಾದ್ಯಂತ 696 ಬೂತ್‌ಗಳಲ್ಲಿ ಸೋಮವಾರ ಬೆಳಿಗ್ಗೆ ಪಂಚಾಯತ್ ಚುನಾವಣೆಗಳಿಗೆ ಮರುಮತದಾನ ಪ್ರಾರಂಭವಾಗಿದೆ.

ಜುಲೈ 8ರಂದು ನಡೆದ ಪಂಚಾಯತ್ ಚುನಾವಣೆಗಳಲ್ಲಿ ವ್ಯಾಪಕ ಹಿಂಸಾಚಾರದಲ್ಲಿ 15 ಜನರು ಸಾವಿಗೀಡಾಗಿದ್ದಾರೆ. ರಾಜ್ಯದ ಕೆಲವೆಡೆ ಮತಪೆಟ್ಟಿಗೆಗಳನ್ನು ಧ್ವಂಸಗೊಳಿಸಿ ಮತದಾರರನ್ನು ಬೆದರಿಸಿದ ಘಟನೆಗಳೂ ವರದಿಯಾಗಿವೆ.

ಹಿಂಸಾಚಾರ ಮತ್ತು ಮತಪೆಟ್ಟಿಗೆಗಳು ಮತ್ತು ಮತಯಂತ್ರಗಳನ್ನು ಧ್ವಂಸ ಪ್ರಕರಣಗಳು ವರದಿಯಾದ್ದರಿಂದ 19 ಜಿಲ್ಲೆಗಳ 696 ಬೂತ್‌ಗಳಲ್ಲಿ ಮರು ಮತದಾನ ಮಾಡುವಂತೆ ರಾಜ್ಯ ಚುನಾವಣಾ ಆಯೋಗ ಆದೇಶಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಅತಿ ಹೆಚ್ಚು ಸಂಖ್ಯೆಯಲ್ಲಿ ಮುರ್ಷಿದಾಬಾದ್ ಜಿಲ್ಲೆಯಲ್ಲಿ (175), ನಂತರದ ಸ್ಥಾನದಲ್ಲಿ ಮಾಲ್ಡಾ (109). ನಾಡಿಯಾದಲ್ಲಿ 89, ಕೂಚ್ ಬೆಹಾರ್‌ನಲ್ಲಿ 46, ಉತ್ತರ 24 ಪರಗಣಗಳಲ್ಲಿ 46, ಉತ್ತರ ದಿನಜ್‌ಪುರದಲ್ಲಿ 42, ದಕ್ಷಿಣ 24 ಪರಗಣಗಳಲ್ಲಿ 36, ಪುರ್ಬಾ ಮೇದಿನಿಪುರದಲ್ಲಿ 31 ಮತ್ತು ಹೂಗ್ಲಿಯಲ್ಲಿ 29 ಬೂತ್‌ಗಳಲ್ಲಿ ಮರುಮತದಾನ ನಡೆಯುತ್ತಿದೆ. ಡಾರ್ಜಿಲಿಂಗ್, ಜಾ‌ಗ್ರಾಮ್ ಮತ್ತು ಕಾಲಿಂಪಾಂಗ್ ಜಿಲ್ಲೆಗಳಲ್ಲಿ ಮರು ಮತದಾನಕ್ಕೆ ಆದೇಶ ನೀಡಲಾಗಿಲ್ಲ.

ಇಂದು ಬೆಳಿಗ್ಗೆ 7 ಗಂಟೆಯಿಂದ ಮರು ಮತದಾನ ಆರಂಭಗೊಂಡಿದ್ದು, ಎಲ್ಲ ಮತಗಟ್ಟೆಗಳಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಕೇಂದ್ರ ಪಡೆಯ ನಾಲ್ವರು ಸಿಬ್ಬಂದಿ ಸೇರಿದಂತೆ ರಾಜ್ಯ ಪೊಲೀಸರನ್ನು ಮತಗಟ್ಟೆಗಳಿಗೆ ನಿಯೋಜಿಸಲಾಗಿದೆ. ಸಂಜೆ ಐದು ಗಂಟೆಯವರೆಗೆ ಮರು ಮತದಾನ ನಡೆಯಲಿವೆ. ಪಂಚಾಯತ್ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಲಿದೆ.

ರಾಜ್ಯ ಚುನಾವಣಾ ಆಯೋಗದ ಪ್ರಕಾರ ಜುಲೈ 8 ರಂದು ನಡೆದ ಪಂಚಾಯತ್ ಚುನಾವಣೆಯಲ್ಲಿ ಅಂತಿಮ ಮತದಾನವು 81% ಆಗಿತ್ತು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಪುರ್ಬಾ ಮೇದಿನಿಪುರ್ ಜಿಲ್ಲೆಯಲ್ಲಿ (84.7%), ಬಿರ್ಭುಮ್ (83.1%) ಮತ್ತು ಬಂಕುರಾ (83%) ನಲ್ಲಿ ಅತಿ ಹೆಚ್ಚು ಮತದಾನವಾಗಿದೆ.

ಹತ್ಯೆಗೀಡಾದ 15 ಜನರಲ್ಲಿ 10 ಮಂದಿ ತೃಣಮೂಲ ಕಾಂಗ್ರೆಸ್ ಪಕ್ಷದವರು. ಬಿಜೆಪಿ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಕಾಂಗ್ರೆಸ್ ಮತ್ತು ಇಂಡಿಯನ್ ಸೆಕ್ಯುಲರ್ ಫ್ರಂಟ್‌ನಿಂದ ತಲಾ ಒಬ್ಬ ಪಕ್ಷದ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ಸ್ವತಂತ್ರ ಅಭ್ಯರ್ಥಿಯೊಬ್ಬರ ಬೆಂಬಲಿಗರೂ ಸೇರಿದ್ದಾರೆ.

ವಿರೋಧ ಪಕ್ಷಗಳು ಚುನಾವಣೆಯ ಸಂದರ್ಭದಲ್ಲಿ ಈ ರೀತಿ ಹಿಂಸಾಚಾರ ನಡೆಸಿ ಸರ್ಕಾರವನ್ನು ಅಪಖ್ಯಾತಿಗೊಳಿಸಲು ಮುಂದಾಗಿವೆ ಎಂದು ಟಿಎಂಸಿ ಆರೋಪಿಸಿದೆ.

”ಇಡೀ ಚುನಾವಣಾ ಪ್ರಕ್ರಿಯೆಯನ್ನು ಹಿಂಸಾತ್ಮಕವಾಗಿ ಚಿತ್ರಿಸಲು ವಿರೋಧ ಪಕ್ಷಗಳು ಪ್ರಯತ್ನಿಸುತ್ತಿವೆ, ಆದರೆ ಬಹುಮಟ್ಟಿಗೆ ಶಾಂತಿಯುತ ಮತ್ತು ನ್ಯಾಯಯುತ ಚುನಾವಣೆಯ ಶ್ರೇಯಸ್ಸು ಸಾರ್ವಜನಿಕರಿಗೆ ಸಲ್ಲುತ್ತದೆ” ಎಂದು ತೃಣಮೂಲ ಕಾಂಗ್ರೆಸ್ ನಾಯಕ ಕುನಾಲ್ ಘೋಷ್ ಹೇಳಿದ್ದಾರೆ.

”ಹೆಚ್ಚಿನ ಸಾವುಗಳು ತೃಣಮೂಲ ಕಾರ್ಯಕರ್ತರದ್ದಾಗಿವೆ, ತೃಣಮೂಲ ಹಿಂಸಾಚಾರವನ್ನು ಪ್ರಚೋದಿಸುತ್ತಿದ್ದರೆ, ಅವರು ತಮ್ಮ ಸ್ವಂತ ಕಾರ್ಯಕರ್ತರನ್ನು ಏಕೆ ಗುರಿಯಾಗಿಸುತ್ತಾರೆ?” ಎಂದು ಘೋಷ್‌ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಪ.ಬಂಗಾಳ ಚುನಾವಣಾ ಹಿಂಸಾಚಾರ: ಸೂಕ್ಷ್ಮ ಮತಗಟ್ಟೆಗಳ ಕುರಿತು ಆಯೋಗ ಮಾಹಿತಿ ನೀಡಿಲ್ಲ; ಬಿಎಸ್‌ಎಫ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...