Homeಕರ್ನಾಟಕಮೀಸಲಾತಿ ವಿಚಾರದಲ್ಲಿ ಮುಸ್ಲಿಮರು, ಲಿಂಗಾಯತರು, ಒಕ್ಕಲಿಗರಿಗೆ ಬಿಜೆಪಿ ದ್ರೋಹ ಬಗೆದಿದೆ: ಕಾಂಗ್ರೆಸ್ ವಾಗ್ದಾಳಿ

ಮೀಸಲಾತಿ ವಿಚಾರದಲ್ಲಿ ಮುಸ್ಲಿಮರು, ಲಿಂಗಾಯತರು, ಒಕ್ಕಲಿಗರಿಗೆ ಬಿಜೆಪಿ ದ್ರೋಹ ಬಗೆದಿದೆ: ಕಾಂಗ್ರೆಸ್ ವಾಗ್ದಾಳಿ

- Advertisement -
- Advertisement -

ಹಿಂದಿನ ಅವಧಿಯಲ್ಲಿ ರಾಜ್ಯ ಬಿಜೆಪಿಯು ಮೀಸಲಾತಿ ವಿಚಾರವಾಗಿ ಮುಸ್ಲಿಮರಿಗೆ, ಲಿಂಗಾಯತರಿಗೆ ಹಾಗೂ ಒಕ್ಕಲಿಗರಿಗೆ ದ್ರೋಹ ಬಗೆದಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್, ”ಹಿಂದಿನ ಬಿಜೆಪಿ ಸರ್ಕಾರ ಏಕಕಾಲಕ್ಕೆ ಮುಸ್ಲಿಮರಿಗೆ, ಲಿಂಗಾಯತರಿಗೆ, ಒಕ್ಕಲಿಗರಿಗೆ ದ್ರೋಹ ಎಸಗಿತ್ತು” ಎಂದು ಕಿಡಿಕಾರಿದೆ.

”ಹಿಂದುಳಿದ ವರ್ಗಗಳ ಆಯೋಗದ ಶಿಘಾರಸು ಹಾಗೂ ಅಭಿಪ್ರಾಯ ಪಡೆಯದೆ ಮುಸ್ಲಿಮರ ಮೀಸಲಾತಿ ರದ್ದು ಮಾಡಿ ಒಕ್ಕಲಿಗ, ಲಿಂಗಾಯತರಿಗೆ ಹಂಚಿದ್ದೇವೆ ಎಂದಿದ್ದು ಜನರಿಗೆ ಮಂಕುಬೂದಿ ಎರಚುವ ತಂತ್ರವಷ್ಟೇ” ಎಂದು ಕಾಂಗ್ರೆಸ್ ದೂರಿದೆ.

”ಬಿಜೆಪಿಯ ಈ ನಿಯಮ ಉಲ್ಲಂಘನೆಯ ಹಿಂದೆ ಮುಸ್ಲಿಮರ ಮೇಲಿನ ದ್ವೇಷ ಹಾಗೂ ಒಕ್ಕಲಿಗ & ಲಿಂಗಾಯತರ ಮೇಲಿನ ಅಸಹನೆ ಎದ್ದು ಕಾಣುತ್ತಿದೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ಕಿಡಿಕಾರಿದೆ.

ಮತ್ತೊಂದು ಟ್ವೀಟ್‌ನಲ್ಲಿ ಅಕ್ಕಿ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ”ಕರ್ನಾಟಕದ ಸರ್ಕಾರಕ್ಕೆ ಅಕ್ಕಿ ನೀಡಲು ನಿರಾಕರಿಸಿ, ಖಾಸಗಿ ಮಾರಾಟಕ್ಕೆ ಮುಂದಾಗಿತ್ತು ಕೇಂದ್ರ ಸರ್ಕಾರ. ಆಹಾರ ನಿಗಮದಲ್ಲಿ 3.86 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಮಾರಾಟಕ್ಕಿದ್ದರೂ ಬಿಡ್ ಆಗಿದ್ದು ಕೇವಲ 170 ಮೆಟ್ರಿಕ್ ಟನ್ ಗೆ ಮಾತ್ರ! ಉಳಿದ ಅಕ್ಕಿ ಗೋದಾಮಿನಲ್ಲಿ ಕೊಳೆತು ಹೋಗಬೇಕೆ? ಅಕ್ಕಿ ಕೊಳೆತು ಹೋದರೂ ಸರಿ ಬಡವರ ಹಸಿವಿಗೆ ಅನ್ನವಾಗಬಾರದು ಎಂಬ ಮೋದಿಯ ಜನವಿರೋಧಿ ಧೋರಣೆಯಂತಹ ಕ್ರೌರ್ಯ ಇನ್ನೊಂದಿಲ್ಲ. ಅಲ್ಲವೇ? ಎಂದು ರಾಜ್ಯ ಬಿಜೆಪಿಗೆ ಪ್ರಶ್ನೆ ಮಾಡಿದೆ.

ಇದನ್ನೂ ಓದಿ: ವಿಪಕ್ಷ ನಾಯಕನನ್ನು ನೇಮಿಸದಿರುವುದು ಪ್ರಜಾಪ್ರಭುತ್ವಕ್ಕೆ ಅವಮಾನ: ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

0
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತದ...