Homeಕರ್ನಾಟಕಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಆರೋಪಿ ಬಿಜೆಪಿ ಕಾರ್ಪೊರೇಟರ್ ತಮ್ಮ!

ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಆರೋಪಿ ಬಿಜೆಪಿ ಕಾರ್ಪೊರೇಟರ್ ತಮ್ಮ!

ಆರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಇದು ವೈಯಕ್ತಿಕ ದ್ವೇಷದ ಕಾರಣಕ್ಕೆ ನಡೆದ ಕೊಲೆ ಎಂದು ತಿಳಿಸಿದ್ದಾರೆ.

- Advertisement -
- Advertisement -

ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಕ್ಲುಲ್ಲಕ ವಿಷಯಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕೊನೆಗೆ ವೇಣುಗೋಪಾಲ್ ನಾಯಕ್‌ ಎಂಬ ಯುವಕನ ಕೊಲೆಯಾಗಿತ್ತು. ಈ ಕುರಿತು ಬಿಜೆಪಿ ಪಕ್ಷವು ಪ್ರತಿಭಟನೆ ನಡೆಸಿದ್ದಲ್ಲದೆ ಸತ್ಯಶೋಧನೆ ನಡೆಸಲು ಮುಂದಾಗಿತ್ತು. ಆದರೆ ಕೊಲೆಯಲ್ಲಿ ಬಿಜೆಪಿ ಕಾರ್ಪೊರೇಟರ್ ಒಬ್ಬರ ತಮ್ಮನೂ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

ಬಿಜೆಪಿ ಕಾರ್ಯದರ್ಶಿ ಸಿ.ಟಿ ರವಿ ನೇತೃತ್ವದಲ್ಲಿ ಶಾಸಕರಾದ ಸಿ.ಎನ್ ಅಶ್ವಥ್ ನಾರಾಯಣ್, ಶ್ರೀವತ್ಸ ಸಂಸದರಾದ ಪ್ರತಾಪ್ ಸಿಂಹ, ಮಾಜಿ ಶಾಸಕರಾದ ಎನ್.ಮಹೇಶ್, ಪ್ರೀತಂಗೌಡ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷೆ ಮಂಜುಳಾ ಸೋಮಶೇಖರ್ ನಿಯೋಗ ಇಂದು ಟಿ.ನರಸೀಪುರಕ್ಕೆ ಭೇಟಿ ಮಾಡಿದ್ದಾರೆ. ವೇಣುಗೋಪಾಲ್ ನಿವಾಸಕ್ಕೆ ಭೇಟಿ ನೀಡಿ ಅವರ ಪತ್ನಿಗೆ ಸಾಂತ್ವಾನ ಹೇಳಿದ್ದಾರೆ.

ಕೊಲೆ ಪ್ರಕರಣದ ಆರೋಪಿಗಳಾದ ಮಣಿಕಂಠ, ಸಂದೇಶ್, ಅನಿಲ್, ಶಂಕರ್, ಮಂಜು ಮತ್ತು ಹ್ಯಾರಿಸ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಶಂಕರ್ ಆಲಿಯಾಸ್ ತುಪ್ಪ ಎನ್ನುವ ಆರೋಪಿಯ ಅಕ್ಕ ಮೈಸೂರು ಮಹಾನಗರ ಪಾಲಿಗೆಯ ಬಿಜೆಪಿ ಸದಸ್ಯರು ಎನ್ನಲಾಗುತ್ತಿದೆ. ಇದು ವೈಯಕ್ತಿಕ ದ್ವೇಷದ ಕಾರಣಕ್ಕೆ ನಡೆದ ಕೊಲೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ವಿವರ

ಟಿ ನರಸೀಪುರದಲ್ಲಿ ಧರ್ಮ ಜಾಗೃತಿ ಬಳಗದ ವತಿಯಿಂದ ಶನಿವಾರ ಹನುಮ ಜಯಂತಿ ಹಮ್ಮಿಕೊಳ್ಳಲಾಗಿತ್ತು. ಶ್ರೀ ಗುಂಜ ನರಸಿಂಹಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಸಹ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಣಿಕಂಠ ಮತ್ತು ಸಂದೇಶ್ ಎಂಬುವವರು ಬೈಕ್‌ನಲ್ಲಿ ಬಂದಿದ್ದಕ್ಕೆ ಆಯೋಜಕರು ಮತ್ತು ವೇಣುಗೋಪಾಲ್ ಆಕ್ಷೇಪ ವ್ಯಕ್ತಪಡಿಸಿದ್ದರು. ಆಗ ಎರಡು ಗುಂಪುಗಳ ನಡುವೆ ಜಗಳ ಆರಂಭವಾಗಿತ್ತು. ಆನಂತರ ಮಣಿಕಂಠ ಮತ್ತು ಸಂದೇಶ್ ಪುನೀತ್ ರಾಜ್‌ಕುಮಾರ್‌ ಫೋಟೊ ಇರುವ ಬ್ಯಾನರ್ ಹಾಕಲು ಮುಂದಾದಾದ ಅದನ್ನು ವೇಣುಗೋಪಾಲ್ ತಡೆದಿದ್ದು ಜಗಳ ಉಲ್ಭಣವಾಗಲು ಕಾರಣವಾಗಿತ್ತು.

ಕುಪಿತಗೊಂಡು ವೇಣುಗೋಪಾಲ್ ಮೇಲೆ ಹಗೆ ಸಾಧಿಸಿದ ಮಣಿಕಂಠ ಮತ್ತು ಸಂದೇಶ್ ಭಾನುವಾರ ಮಧ್ಯಾಹ್ನ ಶಾಮಿಯಾನ ಅಂಗಡಿಯಲ್ಲಿ ವೇಣುಗೋಪಾಲ್ ಜೊತೆ ಗಲಾಟೆ ಆರಂಭಿಸಿದ್ದರು. ಪೊಲೀಸರು ಬಂದಿದ್ದಕ್ಕೆ ಸುಮ್ಮನಾದ ಅವರು ಸಂಜೆ ವೇಳೆ ರಾಜಿ ಪಂಚಾಯ್ತಿಗೆ ಎಂದು ಮಾರುತಿ ಸರ್ವೀಸ್ ಸ್ಟೇಷನ್ ಬಳಿ ಕರೆಸಿಕೊಂಡು ಮದ್ಯದ ಬಾಟಲಿಗಳಿಂದ ಹೊಡೆದು, ಚಾಕುವಿನಿಂದ ಚುಚ್ಚಿ ಸಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ವೇಣುಗೋಪಾಲ್ ನಾಯಕ್‌ ಸಹವರ್ತಿ ರಾಮಾನುಜಂ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಟಿ ನರಸೀಪುರ ಪೊಲೀಸರು ಮಣಿಕಂಠ ಮತ್ತು ಸಂದೇಶ್‌ರವರನ್ನು ಬಂಧಿಸಿದ್ದಾರೆ. ಆರೋಪಿಗಳಲ್ಲಿ ನಾಯಕ ಜನಾಂಗದ ಮಣಿಕಂಠ, ಅನಿಲ್, ಕುರುಬ ಜನಾಂಗದ ಶಂಕರ, ಒಕ್ಕಲಿಗ ಜನಾಂಗದ ಸಂದೇಶ್ ಸೇರಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ; ದಲಿತ ಯುವತಿಯೊಂದಿಗೆ ಸಿನಿಮಾ ವೀಕ್ಷಿಸಲು ಬಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ಥಳಿತ: ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...