Homeಮುಖಪುಟಟೊಮೆಟೊ ದರ ತಗ್ಗಿಸಲು ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದಿಂದ ಖರೀದಿಗೆ ಮುಂದಾದ ಕೇಂದ್ರ

ಟೊಮೆಟೊ ದರ ತಗ್ಗಿಸಲು ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದಿಂದ ಖರೀದಿಗೆ ಮುಂದಾದ ಕೇಂದ್ರ

- Advertisement -
- Advertisement -

ಆಂಧ್ರ ಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರದಿಂದ ಟೊಮೆಟೊ ಖರೀದಿಸಲು ಸಹಕಾರ ಸಂಘಗಳಿಗೆ, ನಾಫೆಡ್ ಮತ್ತು ಎನ್‌ಸಿಸಿಎಫ್‌ಗೆ ಬುಧವಾರ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಆದರೆ ಈ ರಾಜ್ಯಗಳಲ್ಲೇ ಸಾಕಷ್ಟು ಟೊಮೆಟೊ ಲಭ್ಯವಿಲ್ಲ ಹಾಗಾಗಿಯೇ ಇಲ್ಲಿ ಟೊಮೆಟೊ ಬೆಲೆ ಗಗಣಕ್ಕೇರಿದೆ. ಕೇಂದ್ರ ಟೊಮೆಟೊ ಖರೀದಿಸುವುದಾದರೂ ಹೇಗೆ ಎಂಬ ಪ್ರಶ್ನೆ ಮೂಡಿದೆ.

ಕಳೆದ ಕೆಲವು ವಾರಗಳಿಂದ ದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ದೇಶಾದ್ಯಂತ ಟೊಮೆಟೊ ಬೆಲೆ ಗಗನಕ್ಕೇರಿದೆ. ಕೆಲವೆಡೆ ಪ್ರತಿ ಕೆಜಿಗೆ 200 ರೂ.ಗೆ ಮಾರಾಟ ಮಾಡಲಾಗುತ್ತಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಕಳೆದ ತಿಂಗಳು ದೇಶದಲ್ಲಿ ಟೊಮೆಟೊ ಸರಾಸರಿ ದರ 23.61 ರೂ.

ಕಳೆದ ಕೆಲವು ತಿಂಗಳುಗಳಲ್ಲಿ ಟೊಮೆಟೊಗಳ ಸಗಟು ಬೆಲೆಯಲ್ಲಿ ಭಾರೀ ಕುಸಿತ ಕಂಡಿತ್ತು. ಅನೇಕ ರೈತರು ತಮ್ಮ ಉತ್ಪನ್ನಗಳನ್ನು ರಸ್ತೆಗೆ ಸುರಿದು ಪ್ರತಿಭಟನೆ ಮಾಡಿದ್ದರು. ಈಗ ಇದು ಟೊಮೆಟೊ ಹೆಚ್ಚಿನ ದರಕ್ಕೆ ಕಾರಣವಾಗಿದೆ.

ಕೆಲ ದಿನಗಳಿಂದ ದೇಶದಲ್ಲಿ ಹಲವು ರಾಜ್ಯಗಳಲ್ಲಿ ಟೊಮೆಟೊ ಬೆಲೆ ಗರಿಷ್ಠ ಏರಿಕೆ ದಾಖಲಾಗಿದೆ. ಹಾಗಾಗಿ ಕೇಂದ್ರ ಸರ್ಕಾರವು ಟೊಮೆಟೊ ಖರೀದಿಸಿ ಪ್ರಮುಖ ಸ್ಥಳಗಳಿಗೆ ವಿತರಿಸುವ ಯೋಜನೆ ಹಮ್ಮಿಕೊಂಡಿದೆ. ಜುಲೈ 14ರಿಂದ ದೆಹಲಿ-ಎನ್‌ಸಿಆರ್ ಪ್ರದೇಶದ ಗ್ರಾಹಕರಿಗೆ ಸಬ್ಸಿಡಿ ದರದಲ್ಲಿ ಚಿಲ್ಲರೆ ಮಳಿಗೆಗಳ ಮೂಲಕ ಟೊಮೆಟೊವನ್ನು ವಿತರಿಸಲಾಗುವುದು ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಕಾರಣ ದೇಶದ ಹಲವೆಡೆ ಟೊಮೆಟೊ ಚಿಲ್ಲರೆ ಬೆಲೆ ಕೆಜಿಗೆ 200 ರೂ.ವರೆಗೆ ತಲುಪಿದೆ. ನ್ಯಾಷನಲ್ ಅಗ್ರಿಕಲ್ಚರಲ್ ಕೋಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ (ನಾಫೆಡ್‌) ಮತ್ತು ರಾಷ್ಟ್ರೀಯ ಸಹಕಾರಿ ಗ್ರಾಹಕ ಒಕ್ಕೂಟ (ಎನ್‌ಸಿಸಿಎಫ್‌) ಟೊಮೆಟೊಗಳನ್ನು ಸಂಗ್ರಹಿಸುವ ಕೆಲಸವನ್ನು ಮಾಡಲಿವೆ. ನಂತರ ಇವುಗಳನ್ನು ಸಬ್ಸಿಡಿ ದರದಲ್ಲಿ ಸರಕಾರ ಮಾರಾಟ ಮಾಡಲಿದೆ.

ಸಚಿವಾಲಯದ ಪ್ರಕಾರ, ಕಳೆದ ಒಂದು ತಿಂಗಳಲ್ಲಿ ಯಾವ ಪ್ರದೇಶದಲ್ಲಿ ಚಿಲ್ಲರೆ ಬೆಲೆ ಗರಿಷ್ಠ ಏರಿಕೆ ದಾಖಲಾಗಿದೆಯೋ ಆ ಪ್ರದೇಶಗಳಿಗೆ ಟೊಮೆಟೊ ಬಿಡುಗಡೆ ಮಾಡುವ ಗುರಿಯನ್ನು ಕೇಂದ್ರ ಸರಕಾರ ಹಾಕಿಕೊಂಡಿದೆ. ಈ ಪ್ರದೇಶಗಳಲ್ಲಿ ಚಾಲ್ತಿಯಲ್ಲಿರುವ ಬೆಲೆಗಳು ದೇಶದ ಸರಾಸರಿ ಬೆಲೆಗಿಂತ ಹೆಚ್ಚಿದ್ದಲ್ಲಿ ಕೇಂದ್ರ ಆ ಪ್ರದೇಶಗಳಿಗೆ ಟೊಮೆಟೊ ಬಿಡುಗಡೆ ಮಾಡಲಿದೆ.

ಜುಲೈ-ಆಗಸ್ಟ್ ಮತ್ತು ಅಕ್ಟೋಬರ್-ನವೆಂಬರ್ ತಿಂಗಳುಗಳಲ್ಲಿ ಟೊಮೆಟೊ ಉತ್ಪಾದನೆ ಕಡಿಮೆಯಾಗಿರುತ್ತದೆ. ಸಾಮಾನ್ಯವಾಗಿ ಜುಲೈ ತಿಂಗಳಲ್ಲಿ ಮುಂಗಾರು ಮಳೆಯಿಂದಾಗಿ, ವಿತರಣೆಯ ಸವಾಲುಗಳ ಕಾರಣಕ್ಕೆ ಪೂರೈಕೆ ಕಡಿಮೆಯಾಗುತ್ತದೆ ಹಾಗೂ ಬೆಲೆಗಳು ಹೆಚ್ಚಾಗುತ್ತವೆ. ಆದರೆ ಈ ಬಾರಿ ಬಿರು ಬಿಸಿಲಿನಿಂದಾಗಿ ಬೇಸಿಗೆಯಲ್ಲೇ ಉತ್ಪಾದನೆ ಕಡಿಮೆಯಾಗಿತ್ತು. ಇದ್ದ ಅಲ್ಪ ಸ್ವಲ್ಪ ಬೆಳೆಗೂ ಹಲವು ರೋಗಗಳು ಬಾಧಿಸಿದ್ದವು. ಇನ್ನೊಂದೆಡೆ ಮುಂಗಾರೂ ತೀರಾ ತಡವಾಗಿ ಆಗಮಿಸಿತು. ಇದರಿಂದ ಉತ್ಪಾದನೆಗೆ ಹೊಡೆತ ಬಿದ್ದಿದೆ.

ಪ್ರಸ್ತುತ, ಗುಜರಾತ್, ಮಧ್ಯ ಪ್ರದೇಶ ಮತ್ತು ಇತರ ಕೆಲವು ರಾಜ್ಯಗಳ ಮಾರುಕಟ್ಟೆಗಳಿಗೆ ಮಹಾರಾಷ್ಟ್ರದಿಂದ ಅದರಲ್ಲೂ ಪ್ರಮುಖವಾಗಿ ಇಲ್ಲಿನ ಸತಾರಾ, ನಾರಾಯಣಗಾಂವ್ ಹಾಗೂ ನಾಸಿಕ್‌ನಿಂದ ಟೊಮೆಟೊ ಪೂರೈಕೆಯಾಗುತ್ತಿದೆ. ಆಂಧ್ರ ಪ್ರದೇಶದ ಮದನಪಲ್ಲಿ (ಚಿತ್ತೂರು)ಯಲ್ಲಿಯೂ ಸಾಕಷ್ಟು ಪೂರೈಕೆ ಇದೆ.

ದೆಹಲಿ-ಎನ್‌ಸಿಆರ್‌ಗೆ ಟೊಮೆಟೊಗಳು ಮುಖ್ಯವಾಗಿ ಹಿಮಾಚಲ ಪ್ರದೇಶದಿಂದ ಹಾಗೂ ಕರ್ನಾಟಕದ ಕೋಲಾರದಿಂದ ಬರುತ್ತದೆ. ಹಿಮಾಚಲ ಪ್ರದೇಶ ಪ್ರವಾಹಕ್ಕೆ ತತ್ತರಿಸಿರುವುದರಿಂದ ಪೂರೈಕೆ ಕಡಿಮೆಯಾಗಿದ್ದರೆ, ಕೋಲಾರದಲ್ಲಿ ಅಗತ್ಯಕ್ಕೆ ಬೇಕಾದಷ್ಟು ಟೊಮೆಟೊ ಲಭ್ಯವಾಗುತ್ತಿಲ್ಲ.

ಇದನ್ನೂ ಓದಿ: ದುಬಾರಿ ದುನಿಯಾ: ಟೊಮೆಟೋ ಕಳ್ಳತನಕ್ಕೆ ಹೆದರಿ ಬೌನ್ಸರ್‌ಗಳನ್ನು ನೇಮಿಸಿಕೊಂಡ ತರಕಾರಿ ವ್ಯಾಪಾರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...