Homeಕರ್ನಾಟಕಫಲಿತಾಂಶ ಬಂದು 2 ತಿಂಗಳಾಯ್ತು, ಬಿಜೆಪಿಯ ವಿರೋಧ ಪಕ್ಷದ ನಾಯಕನೆಲ್ಲಿ?: ಕಾಂಗ್ರೆಸ್ ಪ್ರಶ್ನೆ

ಫಲಿತಾಂಶ ಬಂದು 2 ತಿಂಗಳಾಯ್ತು, ಬಿಜೆಪಿಯ ವಿರೋಧ ಪಕ್ಷದ ನಾಯಕನೆಲ್ಲಿ?: ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆದು ಫಲಿತಾಂಶ ಬಂದು 60ದಿನಗಳು ಕಳೆದಿವೆ ಆದರೆ ಪ್ರಬಲ ವಿರೋಧ ಪಕ್ಷವಾಗಿರುವ ಬಿಜೆಪಿಯು ಈವರೆಗೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ರಾಜ್ಯ ಕಾಂಗ್ರೆಸ್ ನಾಯಕರು ವಿಪಕ್ಷ ನಾಯಕನ ನೇಮಕ ವಿಚಾರಕ್ಕೆ ಟೀಕೆ ಮಾಡುತ್ತಲೇ ಇದ್ದಾರೆ. ಇದು ರಾಜ್ಯ ಬಿಜೆಪಿ ನಾಯಕರಿಗೆ ಮುಜುಗರ ಉಂಟು ಮಾಡಿದೆ.

ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ”ಚುನಾವಣೆ ಫಲಿತಾಂಶ ಬಂದು 2 ತಿಂಗಳಾಯ್ತು, ಅಧಿವೇಶನವೂ ಪ್ರಾರಂಭ ಆಯ್ತು, ಆದರೆ ಬಿಜೆಪಿಯ ವಿರೋಧ ಪಕ್ಷದ ನಾಯಕನೆಲ್ಲಿ? ನಾವಿಕನಿಲ್ಲದ ನೌಕೆ, ನಾಯಕನಿಲ್ಲದ ಬಿಜೆಪಿ ಎರಡೂ ಮುಳುಗುವುದು ನಿಶ್ಚಿತ!” ಎಂದು ಹೇಳಿದೆ

”ಹಿಂದೆ ಬಿಎಸ್ ಯಡಿಯೂರಪ್ಪ ಅವರು ಸಂಪುಟ ರಚನೆಗೆ ತಿಂಗಳುಗಟ್ಟಲೆ ಹೈಕಮಾಂಡ್ ಬಾಗಿಲು ಕಾದಿದ್ದರು, ನಂತರ ಬಸವರಾಜ ಬೊಮ್ಮಾಯಿ ಅವರು ಸಂಪುಟ ವಿಸ್ತರಣೆಗೆ 15ಕ್ಕೂ ಹೆಚ್ಚು ಬಾರಿ ದೆಹಲಿ ದಂಡಯಾತ್ರೆ ಮಾಡಿದ್ದರು, ಆದರೂ ಸಂಪುಟ ವಿಸ್ತರಣೆಯಾಗಲಿಲ್ಲ. ಈಗ ವಿಪಕ್ಷ ನಾಯಕನ ಆಯ್ಕೆಗೆ ಸತಾಯಿಸುತ್ತಿದ್ದಾರೆ” ಎಂದು ಕಾಂಗ್ರೆಸ್ ಟೀಕೆ ಮಾಡಿದೆ.

”ಬಿಜೆಪಿ ಹೈಕಮಾಂಡಿಗೆ ಕರ್ನಾಟಕವನ್ನಷ್ಟೇ ಅಲ್ಲ, ಕರ್ನಾಟಕದ ಬಿಜೆಪಿಯನ್ನು ಕಂಡರೂ ತಾತ್ಸಾರವೇ?” ಎಂದು ಪ್ರಶ್ನೆ ಮಾಡಿದೆ.

ವಿಧಾನಮಂಡಲ ಅಧಿವೇಶನ ಆರಂಭವಾದರೂ ವಿಧಾನಸಭೆಯ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದಿರುವುದಕ್ಕೆ ಬಿಜೆಪಿಗೆ ಸಾಧ್ಯವಾಗುತ್ತಿಲ್ಲ ಎಂದು ಕಾಂಗ್ರೆಸ್ ಈ ಹಿಂದೆಯೂ ಸಾಕಷ್ಟು ಬಾರಿ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿತ್ತು.

”ಡಿಯರ್ ಬಿಜೆಪಿ, ಸರ್ಕಾರ ರಚನೆ ಆಯ್ತು, ನಮ್ಮ ಸರ್ಕಾರ ಟೆಕಾಫ್ ಆಗಿ ಹಲವು ದಿನಗಳಾಯ್ತು, ನಮ್ಮ ಗ್ಯಾರಂಟಿ ಯೋಜನೆಗಳ ಜಾರಿಯೂ ಆಯ್ತು, ಸದನವೂ ಪ್ರಾರಂಭವಾಯ್ತು. ಎಲ್ಲಿ ನಿಮ್ಮ ವಿರೋಧ ಪಕ್ಷದ ನಾಯಕ? ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ ಎಂದರೆ ಎಂತಹ ಹಿನಾಯ ಸ್ಥಿತಿಯಲ್ಲಿದೆ!” ಎಂದು ಕಾಂಗ್ರೆಸ್ ವ್ಯಂಗ್ಯವಾಡಿತ್ತು.

ಇದನ್ನೂ ಓದಿ: ಅಕ್ರಮ ಗಣಿಗಾರಿಕೆ: ಮಾಜಿ ಸಚಿವ ಮುನಿರತ್ನ ಸೇರಿ ನಾಲ್ವರ ವಿರುದ್ಧ FIR ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬುಲ್ಡೋಝರ್ ಬಳಸಿ ಮನೆ ಧ್ವಂಸ ಪ್ರಕರಣ : ಐದು ಕುಟುಂಬಗಳಿಗೆ 30 ಲಕ್ಷ ರೂ....

0
ನಾಗಾಂವ್‌ ಜಿಲ್ಲೆಯಲ್ಲಿ 2022ರಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಘಟನೆಯ ಬಳಿಕ ಐದು ಮುಸ್ಲಿಂ ಕುಟುಂಬಗಳ ಮನೆಗಳನ್ನು ಬುಲ್ಡೋಝರ್ ಬಳಸಿ ಸರ್ಕಾರ ಧ್ವಂಸಗೊಳಿಸಿತ್ತು. ಇದೀಗ ಮನೆ ಕಳೆದುಕೊಂಡವರಿಗೆ ಪರಿಹಾರವಾಗಿ 30 ಲಕ್ಷ ರೂಪಾಯಿಗಳನ್ನು...