Homeಮುಖಪುಟಬಿಹಾರದಲ್ಲಿ ಸಾವನಪ್ಪಿದ ಬಿಜೆಪಿ ಮುಖಂಡ ಲಾಠಿ ಚಾರ್ಜ್ ಸಮಯದಲ್ಲಿ ಪ್ರತಿಭಟನಾ ಸ್ಥಳದಲ್ಲಿರಲಿಲ್ಲ: ಪೊಲೀಸರ ಹೇಳಿಕೆ

ಬಿಹಾರದಲ್ಲಿ ಸಾವನಪ್ಪಿದ ಬಿಜೆಪಿ ಮುಖಂಡ ಲಾಠಿ ಚಾರ್ಜ್ ಸಮಯದಲ್ಲಿ ಪ್ರತಿಭಟನಾ ಸ್ಥಳದಲ್ಲಿರಲಿಲ್ಲ: ಪೊಲೀಸರ ಹೇಳಿಕೆ

- Advertisement -
- Advertisement -

ಬಿಹಾರ ಸರ್ಕಾರದ ಶಿಕ್ಷಕರ ನೇಮಕಾತಿ ನೀತಿ ವಿರೋಧಿಸಿ ಗುರುವಾರ ಬಿಜೆಪಿ ಪಕ್ಷವು ಪಾಟ್ನಾದಲ್ಲಿ ನಡೆಸಿದ ವಿಧಾನಸಭಾ ಮುತ್ತಿಗೆಯ ಬೃಹತ್ ಪ್ರತಿಭಟನೆ ನಿಯಂತ್ರಿಸಲು ಪೊಲೀಸರು ಮಾಡಿದ ಲಾಠೀ ಚಾರ್ಜ್‌ನಲ್ಲಿ ಬಿಜೆಪಿ ಮುಖಂಡ ವಿಜಯ್ ಕುಮಾರ್ ಸಿಂಗ್ ಸಾವನಪ್ಪಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಆದರೆ ಈ ಆರೋಪವನ್ನು ತಳ್ಳಿ ಹಾಕಿರುವ ಬಿಹಾರ ಪೊಲೀಸರು ಬಿಜೆಪಿ ಮುಖಂಡ ಲಾಠಿ ಚಾರ್ಜ್ ಸಮಯದಲ್ಲಿ ಪ್ರತಿಭಟನಾ ಸ್ಥಳದಲ್ಲಿರಲಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಪೊಲೀಸ್ ಲಾಠಿ ಚಾರ್ಜ್‌ನಲ್ಲಿ ಬಿಜೆಪಿ ಪಕ್ಷದ ಜೆಹಾನಾಬಾದ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ ಸಿಂಗ್ ಅವರು ಸಾವನ್ನಪ್ಪಿದ್ದಾರೆ ಎಂದು ಬಿಜೆಪಿ ಆರೋಪಿಸಿದ ನಂತರ ಪೊಲೀಸರು ಹೇಳಿಕೆ ನೀಡಿದ್ದು, “ಪ್ರಾಥಮಿಕ ತನಿಖೆ ಮತ್ತು ವಿವಿಧ ಸ್ಥಳಗಳ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆಯಿಂದ ಜೆಹಾನಾಬಾದ್ ಮೂಲದ ವಿಜಯ್ ಕುಮಾರ್ ಸಿಂಗ್ ಲಾಠಿ ಚಾರ್ಜ್ ನಡೆದ ಡಾಕ್ ಬಂಗಲೆ ವೃತ್ತವನ್ನು ತಲುಪಿರಲಿಲ್ಲ” ಎಂದು ಪಾಟ್ನಾದ ಹಿರಿಯ ಅಧೀಕ್ಷರಾದ ರಾಜೀವ್ ಮಿಶ್ರಾ ತಿಳಿಸಿದ್ದಾರೆ.

“ಒಂದು ಸಿಸಿಟಿವಿಯ ವಿಡಿಯೋ ತುಣುಕಿನಲ್ಲಿ ವಿಜಯ್ ಕುಮಾರ್ ಸಿಂಗ್ ಮತ್ತು ಅವರೊಂದಿಗೆ ಇಬ್ಬರು ವ್ಯಕ್ತಿಗಳು ಮಧ್ಯಾಹ್ನ 1 ಗಂಟೆ 22 ನಿಮಿಷದ ಸಂದರ್ಭದಲ್ಲಿ ಗಾಂಧಿ ಮೈದಾನ-ಚಜ್ಜು ಬಾಗ್ ರಸ್ತೆಯ ಮೂಲಕ ಚಜ್ಜು ಬಾಗ್ ಪ್ರದೇಶದಲ್ಲಿ ಚಲಿಸುತ್ತಿರುವುದನ್ನು ಕಾಣಬಹುದು. ಆ ಮೂವರೂ ಪರಸ್ಪರ ಮಾತನಾಡುತ್ತಿದ್ದರು ಮತ್ತು ಅವರು ಆರೋಗ್ಯವಾಗಿದ್ದರು. ಆನಂತರ 1 ಗಂಟೆ 27ನೇ ನಿಮಿಷದ ಸಂದರ್ಭದಲ್ಲಿ ಆಟೋ ರಿಕ್ಷಾದಲ್ಲಿ  ಆಸ್ಪತ್ರೆಗೆ ಕರೆದೊಯ್ದದ್ದು ಕೂಡ ಅದೇ ವಿಡಿಯೋದಲ್ಲಿ ದಾಖಲಾಗಿದೆ. ಸಿಸಿಟಿವಿ ಕ್ಯಾಮರಾದಿಂದ ಸುಮಾರು 50 ಮೀಟರ್ ದೂರದಲ್ಲಿ ಎಲೆಕ್ಟ್ರಿಕ್ ಟ್ರಾನ್ಸ್‌ಫಾರ್ಮರ್ ಬಳಿ ಸಿಂಗ್ ರಸ್ತೆಯಲ್ಲಿ ಬಿದ್ದಿರುವುದು ಕಂಡುಬಂದಿದೆ ಎಂದು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ತಿಳಿಸಿದ್ದಾರೆ ಎಂದು ರಾಜೀವ್ ಮಿಶ್ರಾ ಹೇಳಿದ್ದಾರೆ.

ಆ ಪ್ರದೇಶದಲ್ಲಿ ಯಾವುದೇ ಲಾಠಿ ಚಾರ್ಜ್ ನಡೆದಿಲ್ಲ, ಸಿಂಗ್ ಅವರ ದೇಹದ ಮೇಲೆ ಯಾವುದೇ ಬಾಹ್ಯ ಗಾಯದ ಗುರುತುಗಳು ಕಂಡುಬಂದಿಲ್ಲ ಎಂದು ಅವರು ಹೇಳಿದ್ದಾರೆ.

“ಮೃತ ಸಿಂಗ್ ಜೊತೆಗಿದ್ದ ಇಬ್ಬರು ವ್ಯಕ್ತಿಗಳು ತಾವು ಡಾಕ್ ಬಂಗಲೆ ವೃತ್ತಕ್ಕೆ ಹೋಗಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಆ ವೃತ್ತವನ್ನು ಬ್ಯಾರಿಕೇಡ್ ಹಾಕಿ ಮುಚ್ಚಿದ್ದರಿಂದ ಅವರು ಆ ಕಡೆ ಹೋಗದಿರಲು ನಿರ್ಧರಿಸಿದರು. ನಂತರ ಸಿಂಗ್ ಅವರ ಸ್ನೇಹಿತರು ಅವರನ್ನು ರಿಕ್ಷಾದ ಮೂಲಕ ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ರಿಕ್ಷಾವು ಹತ್ತಿರದ ಆಸ್ಪತ್ರೆಯನ್ನು ತಲುಪಲು ಐದರಿಂದ ಆರು ನಿಮಿಷಗಳನ್ನು ತೆಗೆದುಕೊಂಡಿರಬಹುದು ಎಂದು ನಾವು ನಂಬುತ್ತೇವೆ. ಅವರು ಮೂರ್ಛೆ ಹೋದ ಘಟನೆ ಮಧ್ಯಾಹ್ನ 1.23 ರಿಂದ 1.27 ರ ನಡುವೆ ನಡೆದಿರಬಹುದು. ಸಿಂಗ್ ಸುತ್ತಲೂ ಅಥವಾ ರಿಕ್ಷಾದ ಸುತ್ತಲೂ ಯಾವುದೇ ಪೊಲೀಸರು ಕಂಡುಬಂದಿಲ್ಲ ಎಂದು ದೃಶ್ಯಗಳು ಬಹಿರಂಗಪಡಿಸಿವೆ”ಎಂದು ಅವರು ಹೇಳಿದ್ದಾರೆ.

“ಅಲ್ಲದೇ ಚಜ್ಜು ಬಾಗ್ ಪ್ರದೇಶದಲ್ಲಿನ ಸಿಸಿಟಿವಿಯ ದೃಶ್ಯಗಳಲ್ಲಿ ಯಾವುದೇ ರೀತಿಯ ಕಾಲ್ತುಳಿತದ ದೃಶ್ಯ ಕಂಡುಬಂದಿಲ್ಲ. ಆ ಪ್ರದೇಶದಲ್ಲಿ ಸಂಪೂರ್ಣ ಸಾಮಾನ್ಯ ಸಂಚಾರ ದಟ್ಟಣೆ ಕಂಡುಬಂದಿದೆ. ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಅವರ ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಬಹುದು” ಎಸ್‌ಎಸ್‌ಪಿ ಹೇಳಿದ್ದಾರೆ.

ಬಿಜೆಪಿಯ ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಒಟ್ಟು 59 ಜನರನ್ನು ಬಂಧಿಸಲಾಯಿತು ಆದರೆ ಅವರೆಲ್ಲರನ್ನೂ ನಂತರ ಬಿಡುಗಡೆ ಮಾಡಲಾಯಿತು ಎಂದು ಅವರು ಹೇಳಿದರು.

“ಮೃತರ ಮರಣೋತ್ತರ ಪರೀಕ್ಷೆಯನ್ನು ನಡೆಸುವಾಗ ಜಿಲ್ಲಾಡಳಿತವು ಸಂಪೂರ್ಣ ಪಾರದರ್ಶಕತೆಯನ್ನು ಅನುಸರಿಸಿದೆ. ಮ್ಯಾಜಿಸ್ಟ್ರೇಟ್ ಮತ್ತು ಮರಣೋತ್ತರ ಪರೀಕ್ಷೆಯನ್ನು ವೈದ್ಯಕೀಯ ಮಂಡಳಿಯು ವೀಡಿಯೊಗ್ರಫಿ ಅಡಿಯಲ್ಲಿ ನಡೆಸಿತು” ಎಂದು ಎಸ್‌ಎಸ್‌ಪಿ ಹೇಳಿದ್ದಾರೆ.

ಇದನ್ನೂ ಓದಿ; ಬಿಜೆಪಿ ಸರ್ಕಾರ RSS ಅಂಗಸಂಸ್ಥೆಗೆ ಭೂಮಿ ನೀಡಿದ್ದ ಆದೇಶಕ್ಕೆ ತಡೆ: ಸಚಿವ ಕೃಷ್ಣಭೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....