ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಅಪ್ರಾಪ್ತ ಸಹೋದರಿಯ ಮೇಲೆ ಬಿಜೆಪಿ ಮುಖಂಡನ ಮಗ ಸೇರಿದಂತೆ ನಾಲ್ವರು ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಮಧ್ಯಪ್ರದೇಶದ ದತಿಯಾ ಜಿಲ್ಲೆಯಲ್ಲಿ ನಡೆದಿದೆ.
17 ಮತ್ತು 19 ವರ್ಷ ವಯಸ್ಸಿನ ಇಬ್ಬರು ಶಾಲಾ ಬಾಲಕಿಯರು ಸಂತ್ರಸ್ತಾರಗಿದ್ದಾರೆ. ನಾಲ್ವರು ಆರೋಪಿಗಳಲ್ಲಿ ಓರ್ವ ಮಧ್ಯಪ್ರದೇಶದ ಬಿಜೆಪಿ ಮುಖಂಡನ ಮಗನಾಗಿದ್ದಾನೆ. ಸಂತ್ರಸ್ತರ ಸಂಬಂಧಿಕರು ಮತ್ತು ಸ್ಥಳೀಯರು ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದರು. ಆ ನಂತರ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರದೇಶವು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರ ತವರು ಕ್ಷೇತ್ರವಾಗಿದೆ, ಅವರು ಡಾಟಿಯಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ.
19 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಸಾಮೂಹಿಕ ಅತ್ಯಾಚಾರದಿಂದ ಬದುಕುಳಿದ ಯುವತಿ ಆತ್ಮಹತ್ಯೆಗೆ ಯತ್ನಿಸಿದಳು ಆದರೆ ಆಕೆಯ ಕುಟುಂಬ ಸದಸ್ಯರು ರಕ್ಷಿಸಿದ್ದಾರೆ.
ಈ ಘಟನೆ ಬಗ್ಗೆ ಪೊಲೀಸರ ತಾತ್ಸಾರ ತೋರಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ನಂತರ ಪೊಲೀಸರು ಶುಕ್ರವಾರ ರಾತ್ರಿ ಪ್ರಕರಣ ದಾಖಲಿಸಿದ್ದಾರೆ. ಅಪರಾಧದಲ್ಲಿ ಭಾಗಿಯಾಗಿರುವವರಲ್ಲಿ ಮೂವರು ಅಪ್ರಾಪ್ತರು ಎಂದು ಪೊಲೀಸರು ತಿಳಿಸಿದ್ದಾರೆ.
ದೂರಿನ ಪ್ರಕಾರ, ಶುಕ್ರವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸಹೋದರಿಯರು ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಆರೋಪಿಗಳು ಅವರನ್ನು ಅಡ್ಡಗಟ್ಟಿದ್ದಾರೆ. ಶಂಕಿತ ಆರೋಪಿಯ ಮನೆಗೆ ಇಬ್ಬರನ್ನೂ ಎಳೆದೊಯ್ದು, ಅಲ್ಲಿ ಅಕ್ಕನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಅವರು ಮನೆಗೆ ತಲುಪಿದಾಗ ಮತ್ತು ಮೌನವಾಗಿದ್ದಾಗ ಸಹೋದರಿಯರು ತೀವ್ರವಾಗಿ ಆಘಾತಕ್ಕೊಳಗಾಗಿದ್ದರು. ಆದರೆ ಅತ್ಯಾಚಾರ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನಿಸಿದಾಗ, ಆಕೆಯ ಕಿರಿಯ ಸಹೋದರಿ ತಮ್ಮ ಪೋಷಕರಿಗೆ ಘಟನೆ ಬಗ್ಗೆ ತಿಳಿಸಿದ್ದಾಳೆ. ಆನಂತರ ಕುಟುಂಬಸ್ಥರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸಹೋದರಿಯರನ್ನು ಝಾನ್ಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಪೊಲೀಸರು ಎಫ್‌ಐಆರ್ ದಾಖಲಿಸಲು ವಿಳಂಬ ಮಾಡಿದ್ದಾರೆ ಹಾಗಾಗಿ ಸ್ಥಳೀಯರು ಕ್ರಮಕ್ಕಾಗಿ ಒತ್ತಾಯಿಸಿ ರಾತ್ರಿ 9.30 ಕ್ಕೆ ಉನಾವ್ ಪೊಲೀಸ್ ಠಾಣೆಗೆ ಘೇರಾವ್ ಹಾಕಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಆಬಳಿಕ ಪೊಲೀಸರು ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಮೂವರು ಆರೋಪಿಗಳು ಬಂಧನದಲ್ಲಿದ್ದು, ಹಿರಿಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಎಸ್‌ಪಿ ಶರ್ಮಾ ತಿಳಿಸಿದ್ದಾರೆ. ಅವರ ವಿರುದ್ಧ ಅಕ್ರಮ ಬಂಧನ, ಸಾಮೂಹಿಕ ಅತ್ಯಾಚಾರ ಮತ್ತು ಕಿರುಕುಳದ ಆರೋಪ ಹೊರಿಸಲಾಗಿದೆ.
(ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನಗಳ ಪ್ರಕಾರ ಆಕೆಯ ಗೌಪ್ಯತೆಯನ್ನು ರಕ್ಷಿಸಲು ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಲಾಗಿಲ್ಲ)
ಇದನ್ನೂ ಓದಿ: ಧರ್ಮಸ್ಥಳದ “ನಿರ್ಭಯಾ” ಅತ್ಯಾಚಾರ-ಕೊಲೆ ಕೇಸ್: ಆರೋಪಿ ಸಂತೋಷ್ ರಾವ್ ನಿರ್ದೋಷಿ; ಅಸಲಿ ಅಪರಾಧಿಗಳನ್ನೇಕೆ ಹಿಡಿಯಲಾಗುತ್ತಿಲ್ಲ?!


