Homeಕರ್ನಾಟಕಜುಲೈ 23 ರಂದು ಸ್ಪೂರ್ತಿಧಾಮದಲ್ಲಿ 'ಉದ್ಯೋಗ ಮೇಳ': 7,000 ಉದ್ಯೋಗಿಗಳ ನೇಮಕಕ್ಕೆ ಚಾಲನೆ

ಜುಲೈ 23 ರಂದು ಸ್ಪೂರ್ತಿಧಾಮದಲ್ಲಿ ‘ಉದ್ಯೋಗ ಮೇಳ’: 7,000 ಉದ್ಯೋಗಿಗಳ ನೇಮಕಕ್ಕೆ ಚಾಲನೆ

- Advertisement -
- Advertisement -

ಯುವಜನರಿಗೆ ಉದ್ಯೋಗಗಳನ್ನು ಕೊಡಿಸುವ ನಿಟ್ಟಿನಲ್ಲಿ QUESS ಸಂಸ್ಥೆಯು ಸ್ಫೂರ್ತಿಧಾಮ ಟ್ರಸ್ಟ್ ಸಹಯೋಗದಲ್ಲಿ ಜುಲೈ 23 ರಂದು ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಈ ಉದ್ಯೋಗ ಮೇಳವು ಸುಮಾರು 7,000 ದಷ್ಟು ಉದ್ಯೋಗಾಕಾಂಕ್ಷಿಗಳಿಗೆ ವ್ಯಾಪಕವಾದ ವೃತ್ತಿ ಅವಕಾಶಗಳನ್ನು ಮತ್ತು ನೇರ ನೇಮಕಾತಿ ಒದಗಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿಕೆ ತಿಳಿಸಿದೆ.

ಫೆಸಿಲಿಟಿ ಮ್ಯಾನೇಜ್‌ಮೆಂಟ್‌ ಸ್ಟಾಫ್‌, ಸೆಕ್ಯೂರಿಟಿ ಸ್ಟಾಫ್‌, ಇಂಜಿನಿಯರಿಂಗ್‌ ಸ್ಟಾಫ್‌, ಸಪೋರ್ಟ್ ಸ್ಟಾಫ್, ಫುಡ್ ಸರ್ವೀಸ್ ಸ್ಟಾಫ್, ಫೀನಾನ್ಸ್/ಹೆಚ್.ಆರ್/‌ಪ್ರೊಕ್ಯೂರ್‌ಮೆಂಟ್ಸ್ ಫ್ರಾಂಟ್ ಆಫೀಸ್ ಸ್ಟಾಫ್ ಉದ್ಯೋಗಗಳು ಲಭ್ಯವಿವೆ ಎನ್ನಲಾಗಿದೆ.

ವಿದ್ಯಾರ್ಹತೆ: ಪದವಿ/ಡಿಪ್ಲೊಮಾ 10 ಮತ್ತು 12 ನೇ ತರಗತಿ ಅಥವಾ ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿರಬೇಕು. ಮೊದಲ ಬಾರಿಗೆ ಕೆಲಸಕ್ಕೆ ಸೇರುವವರು ಮತ್ತು ಅನುಭವವುಳ್ಳವವರು ಇಬ್ಬರಿಗೂ ಅವಕಾಶಗಳಿದ್ದು, ಒಳ್ಳೆ ಸಂವಹನ ಕೌಶಲ್ಯವಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ದಿನಾಂಕ: 23ನೇ ಜುಲೈ, ಭಾನುವಾರ, ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ಬೆಂಗಳೂರಿನ ಸ್ಪೂರ್ತಿಧಾಮ, 2ನೇ ಇ ಮುಖ್ಯ ರಸ್ತೆ, BEL ಲೇಔಟ್, ಹಂತ 2, ಬೇಡರಹಳ್ಳಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ. ಆಸಕ್ತರು ಹೆಚ್ಚಿನ ಮಾಹಿತಿಗೆ 9535368657 ಅಥವಾ 9900773406 ಮೊಬೈಲ್ ನಂಬರ್‌ಗಳನ್ನು ಸಂಪರ್ಕಿಸಬಹುದು.

ಇದನ್ನೂ ಓದಿ; ದಲಿತರಿಗೆ ಭೂಮಿ ಪರಬಾರೆ ಆಗಲೇಬೇಕು, ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರುತ್ತೇವೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...