Homeಮುಖಪುಟಮಣಿಪುರದಲ್ಲಿ ಮಾನವೀಯತೆ ಸತ್ತಿದೆ: ಮಹಿಳೆಯರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರಕ್ಕೆ ವಿಪಕ್ಷಗಳ ಕಿಡಿ

ಮಣಿಪುರದಲ್ಲಿ ಮಾನವೀಯತೆ ಸತ್ತಿದೆ: ಮಹಿಳೆಯರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರಕ್ಕೆ ವಿಪಕ್ಷಗಳ ಕಿಡಿ

ಸರ್ಕಾರ ಕ್ರಮ ತೆಗೆದುಕೊಳ್ಳದಿದ್ದರೆ ನಾವು ಕ್ರಮಕ್ಕೆ ಮುಂದಾಗುತ್ತೇವೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಡಿ.ವೈ ಚಂದ್ರಚೂಡ್ ತಿಳಿಸಿದ್ದಾರೆ.

- Advertisement -
- Advertisement -

ಮಣಿಪುರದಲ್ಲಿ ಮಾನವೀಯತೆ ಸತ್ತಿದೆ. ನರೇಂದ್ರ ಮೋದಿಯವರೆ ನಿಮ್ಮ ಮೌನವನ್ನು ಭಾರತ ಎಂದಿಗೂ ಕ್ಷಮಿಸುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರದ ಅಮಾನುಷ ವಿಡಿಯೋ ವೈರಲ್ ಆದ ಬೆನ್ನಲ್ಲೆ ತೀವ್ರ ಆತಂಕ ವ್ಯಕ್ತಪಡಿಸಿರುವ ಅವರು, “ಮೋದಿ ಸರ್ಕಾರ ಮತ್ತು ಬಿಜೆಪಿ ರಾಜ್ಯದ ಸೂಕ್ಷ್ಮ ಸಾಮಾಜಿಕ ರಚನೆಯನ್ನು ನಾಶಪಡಿಸುವ ಮೂಲಕ ಪ್ರಜಾಪ್ರಭುತ್ವ ಮತ್ತು ಕಾನೂನಿನ ಆಡಳಿತವನ್ನು ಮೊಬೊಕ್ರಸಿಯಾಗಿ ಬದಲಾಯಿಸಿವೆ” ಎಂದಿದ್ದಾರೆ.

ನಿಮ್ಮ ಸರ್ಕಾರದಲ್ಲಿ ಯಾವುದೇ ಆತ್ಮಸಾಕ್ಷಿ ಅಥವಾ ಮರ್ಯಾದೆ ಉಳಿದಿದ್ದರೆ, ನೀವು ಸಂಸತ್ತಿನಲ್ಲಿ ಮಣಿಪುರದ ಬಗ್ಗೆ ಮಾತನಾಡಬೇಕು ಮತ್ತು ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ನಿಮ್ಮ ದ್ವಂದ್ವ ಅಸಮರ್ಥತೆಗೆ ಇತರರನ್ನು ದೂಷಿಸದೆ ಏನಾಯಿತು ಎಂದು ರಾಷ್ಟ್ರಕ್ಕೆ ತಿಳಿಸಬೇಕು ಎಂದು ಮೋದಿಯವರಿಗೆ ಖರ್ಗೆ ತಾಕೀತು ಮಾಡಿದ್ದಾರೆ.

ನೀವು ನಿಮ್ಮ ಸಾಂವಿಧಾನಿಕ ಜವಾಬ್ದಾರಿಯನ್ನು ತ್ಯಜಿಸಿದ್ದೀರಿ. ಈ ಬಿಕ್ಕಟ್ಟಿನ ಸಮಯದಲ್ಲಿ, ನಾವು ಮಣಿಪುರದ ಜನರೊಂದಿಗೆ ಒಟ್ಟಾಗಿ ನಿಲ್ಲುತ್ತೇವೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ವೈರಲ್ ವಿಡಿಯೋ ತುಂಬಾ ಆಘಾತ ಉಂಟು ಮಾಡಿದೆ. ಈ ರೀತಿಯ ಘಟನೆಗಳು ಯಾವುದೇ ಕಾರಣಕ್ಕೂ ಸ್ವೀಕಾರಾರ್ಹವಲ್ಲ. ಕೋಮುವಾದಿ ಗಲಭೆಗಳಲ್ಲಿ ಮಹಿಳೆಯರನ್ನು ಆಯುಧವಾಗಿ ಬಳಸಿಕೊಳ್ಳುವುದು ಅತಿ ದೊಡ್ಡ ಸಾಂವಿಧಾನಿಕ ದುರ್ಬಳಕೆಯಾಗಿದೆ. ಸರ್ಕಾರ ಕ್ರಮ ತೆಗೆದುಕೊಳ್ಳದಿದ್ದರೆ ನಾವು ಕ್ರಮಕ್ಕೆ ಮುಂದಾಗುತ್ತೇವೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಡಿ.ವೈ ಚಂದ್ರಚೂಡ್ ತಿಳಿಸಿದ್ದಾರೆ.

ಟಿಎಂಸಿ ಸಂಸದೆ ಮೊಹುವ ಮೊಯಿತ್ರಾ ಟ್ವೀಟ್ ಮಾಡಿ, “ಮಣಿಪುರದಲ್ಲಿ ಅಂತರ್ಯುದ್ಧ ನಡೆಯುತ್ತಿದೆ. ನಾವೆಲ್ಲರೂ ಯುದ್ಧ ಅಪರಾಧಗಳಿಗೆ ಸಾಕ್ಷಿಯಾಗಿದ್ದೇವೆ. ಇದು ನಮ್ಮ ದೇಶದಲ್ಲಿ ನಡೆಯುತ್ತಿದ್ದು, ಬಿಜೆಪಿಯು ಈ ಸ್ಥಿತಿಗೆ ದೇಶವನ್ನು ತಂದೊಡ್ಡಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಟ್ವಿಟ್ ಮಾಡಿ, “ಮಣಿಪುರದಲ್ಲಿ ನಡೆದಿರುವ ಘಟನೆ ಅತ್ಯಂತ ನಾಚಿಕೆಗೇಡು ಮತ್ತು ಖಂಡನೀಯ. ಭಾರತೀಯ ಸಮಾಜದಲ್ಲಿ ಈ ರೀತಿಯ ಹೇಯ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ. ಮಣಿಪುರದಲ್ಲಿ ಪರಿಸ್ಥಿತಿ ಚಿಂತಾಜನಕವಾಗುತ್ತಿದೆ. ಮಣಿಪುರದ ಪರಿಸ್ಥಿತಿಯ ಬಗ್ಗೆ ಗಮನ ಹರಿಸುವಂತೆ ನಾನು ಪ್ರಧಾನಿಗೆ ಮನವಿ ಮಾಡುತ್ತೇನೆ. ದಯವಿಟ್ಟು ಈ ಘಟನೆಯ ವಿಡಿಯೋದಲ್ಲಿರುವ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ. ಇಂತಹ ಕ್ರಿಮಿನಲ್ ಸ್ವಭಾವದವರಿಗೆ ಭಾರತದಲ್ಲಿ ಜಾಗ ಇರಬಾರದು” ಎಂದು ಆಗ್ರಹಿಸಿದ್ದಾರೆ.

ವಿಡಿಯೋ ಡಿಲೀಟ್ ಮಾಡುವಂತೆ ಟ್ವಿಟರ್ ಮತ್ತು ಇತರ ಸಂಸ್ಥೆಗಳಿಗೆ ಸೂಚನೆ

ಆ ಅಮಾನವೀಯ ವಿಡಿಯೋ ಬುಧವಾರ ವೈರಲ್ ಆಗುತ್ತಿದ್ದಂತೆ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಆ ವೀಡಿಯೊವನ್ನು ತೆಗೆದುಹಾಕುವಂತೆ ಕೇಂದ್ರ ಸರ್ಕಾರವು ಟ್ವಿಟರ್ ಮತ್ತು ಇತರ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಗೆ ಸೂಚಿಸಿದೆ. ಈ ವಿಷಯವು ತನಿಖೆಯಲ್ಲಿರುತ್ತದೆ ಹಾಗಾಗಿ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಮಾಧ್ಯಮ ವೇದಿಕೆಗಳು ಭಾರತೀಯ ಕಾನೂನುಗಳಿಗೆ ಬದ್ಧವಾಗಿರಬೇಕು ಎಂದು ತಾಕೀತು ಮಾಡಿದೆ.

ಇದನ್ನೂ ಓದಿ: ಮಣಿಪುರದಲ್ಲಿ ಹೇಯ ಕೃತ್ಯ: ಬುಡಕಟ್ಟು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ ಸಾಮೂಹಿಕ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...