Homeಮುಖಪುಟಬಿಜೆಪಿಯ 'ಬೇಟಿ ಬಚಾವೋ' ಈಗ 'ಬೇಟಿ ಜಲಾವೋ(ಸುಡುವುದು)' ಆಗಿ ಬದಲಾಗಿದೆ: ಮಮತಾ ಬ್ಯಾನರ್ಜಿ ವಾಗ್ದಾಳಿ

ಬಿಜೆಪಿಯ ‘ಬೇಟಿ ಬಚಾವೋ’ ಈಗ ‘ಬೇಟಿ ಜಲಾವೋ(ಸುಡುವುದು)’ ಆಗಿ ಬದಲಾಗಿದೆ: ಮಮತಾ ಬ್ಯಾನರ್ಜಿ ವಾಗ್ದಾಳಿ

- Advertisement -
- Advertisement -

ಮಣಿಪುರದ ಹೇಯ ಕೃತ್ಯ, ಬಿಲ್ಕಿಸ್ ಬಾನೋ ಪ್ರಕರಣ ಮತ್ತು ಕುಸ್ತಿಪಟುಗಳ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಗಳ ವಿಚಾರವಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿಯ ‘ಬೇಟಿ ಬಚಾವೋ’ ಘೋಷಣೆ ಈಗ ‘ಬೇಟಿ ಜಲಾವೋ(ಸುಡುವುದು)’ ಆಗಿ ಬದಲಾಗಿದೆ ಎಂದು ಬಿಜೆಪಿಯನ್ನು ಟೀಕಿಸಿದ್ದಾರೆ.

ಶುಕ್ರವಾರ ಕೋಲ್ಕತ್ತಾದಲ್ಲಿ ಆಯೋಜಿಸಿದ್ದ ಆಡಳಿತ ಪಕ್ಷದ ‘ಹುತಾತ್ಮರ ದಿನ’ ರ್ಯಾಲಿಯಲ್ಲಿ ಮಾತನಾಡಿದ ಅವರು, ”ನೀವು (ಬಿಜೆಪಿ) ‘ಬೇಟಿ ಬಚಾವೋ’ ಘೋಷಣೆಯನ್ನು ನೀಡಿದ್ದೀರಿ, ಈಗ ನಿಮ್ಮ ಘೋಷಣೆ ಎಲ್ಲಿದೆ?” ಎಂದು ಪ್ರಶ್ನೆ ಮಾಡಿದ್ದಾರೆ.

”ಮಣಿಪುರದ ಜನರೊಂದಿಗೆ ನಾವು ನಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸುತ್ತೇವೆ. ಇಂದು ಮಣಿಪುರ ಹೊತ್ತಿ ಉರಿಯುತ್ತಿದೆ, ಇಡೀ ದೇಶವೇ ಹೊತ್ತಿ ಉರಿಯುತ್ತಿದೆ. ಬಿಲ್ಕಿಸ್ ಬಾನೋ ಪ್ರಕರಣದಲ್ಲಿ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣದಲ್ಲಿ (ಬ್ರಿಜ್ ಭೂಷಣ್ ಸಿಂಗ್) ಕೂಡ ಜಾಮೀನು ಪಡೆದಿದ್ದಾರೆ… ಮುಂಬರುವ ಚುನಾವಣೆಯಲ್ಲಿ ದೇಶದ ಮಹಿಳೆಯರು ನಿಮ್ಮನ್ನು ದೇಶದ ರಾಜಕೀಯದಿಂದ ಹೊರಹಾಕುತ್ತಾರೆ… ಬಿಜೆಪಿಯ ‘ಬೇಟಿ ಬಚಾವೋ’ ಇದೀಗ ‘ಬೇಟಿ ಜಲಾವೋ(ಸುಡುವುದು)’ ಆಗಿ ಬದಲಾಗಿದೆ ಎಂದು ಕೇಂದ್ರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ತೃಣಮೂಲ ಕಾಂಗ್ರೆಸ್‌ಗೆ ಯಾವುದೇ ಕುರ್ಚಿ ಬೇಕಾಗಿಲ್ಲ, ಆದರೆ ”ಈ ಬಿಜೆಪಿ ಆಡಳಿತ ಹೋಗಬೇಕೆಂದು ನಾವು ಬಯಸುತ್ತೇವೆ” ಎಂದು ಬ್ಯಾನರ್ಜಿ ಪ್ರತಿಪಾದಿಸಿದರು.

”ನಾವು ಕೇಂದ್ರದ ವಿರುದ್ಧ ಪ್ರತಿಪಕ್ಷಗಳ ಮೈತ್ರಿ I.N.D.I.A. ಬ್ಯಾನರ್ ಅಡಿಯಲ್ಲಿ ಎಲ್ಲಾ ಪ್ರತಿಭಟನೆಗಳನ್ನು ಆಯೋಜಿಸುತ್ತೇವೆ” ಎಂದು ತಿಳಿಸಿದರು.

ಇದನ್ನೂ ಓದಿ: ಮಣಿಪುರದಲ್ಲಿ ಶಾಂತಿ-ಭದ್ರತೆ ಸ್ಥಾಪಿಸಲು ಸಾಧ್ಯವಾಗದಿದ್ದರೆ, ಅಧಿಕಾರದಲ್ಲಿರಲು ಹಕ್ಕಿಲ್ಲ: ಮೋದಿ ಹಳೆಯ ಟ್ವೀಟ್ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...