Homeಮುಖಪುಟಯಾವುದೇ ರಾಜಕೀಯ ಉದ್ದೇಶ ಇಲ್ಲದೇ ಪಠ್ಯಪುಸ್ತಕ ಬದಲಾವಣೆ ಆಗಲಿದೆ: ಮಧು ಬಂಗಾರಪ್ಪ

ಯಾವುದೇ ರಾಜಕೀಯ ಉದ್ದೇಶ ಇಲ್ಲದೇ ಪಠ್ಯಪುಸ್ತಕ ಬದಲಾವಣೆ ಆಗಲಿದೆ: ಮಧು ಬಂಗಾರಪ್ಪ

- Advertisement -
- Advertisement -

ಪಠ್ಯ ಪುಸ್ತಕ ಪೂರ್ಣ ಪರಿಷ್ಕರಣೆ ಆಗಲಿದೆ. ಬಿಜೆಪಿಯವರು ಪಠ್ಯವನ್ನು ಬದಲಿಸಿದ್ದರು. ನಾವು ತುರ್ತಾಗಿ ಸ್ವಲ್ಪ ಬದಲಾವಣೆ ಮಾಡಿ ಮೊದಲು ಇದ್ದಂತೆ ತಂದಿದ್ದೇವೆ. ಮುಂದಿನ ವರ್ಷ ಮಕ್ಕಳಿಗೆ ಅನುಕೂಲವಾಗುವಂತೆ ಬದಲಾಯಿಸುತ್ತೇವೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಈ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿದ ಅವರು, ”ನಾನು ಅಧಿಕಾರಕ್ಕೆ ಬಂದ ಕೂಡಲೇ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದ್ದೇನೆ. ಮಕ್ಕಳ ಭವಿಷ್ಯಕ್ಕೆ ಒಳ್ಳೆದಾಗಲಿ ಎಂದು ಈ ತೀರ್ಮಾನ ಮಾಡಲಾಗಿದೆ. ಇದರಲ್ಲಿ ಬಿಜೆಪಿಯವರು ಹೇಳುವ ಯಾವುದೇ ರಾಜಕೀಯ ಇಲ್ಲ. ಪಠ್ಯ ಪರಿಷ್ಕರಣೆ ವಿಚಾರವಾಗಿ ತಜ್ಞರ ಸಮಿತಿಯ ಸಹಾಯ ಪಡೆದು ಅವಶ್ಯಕತೆ ಇದ್ದಲ್ಲಿ ಬದಲಾವಣೆ ಮಾಡುತ್ತೇವೆ. ಯಾವುದೇ ರಾಜಕೀಯ ಉದ್ದೇಶ ಇಲ್ಲದೇ ಬದಲಾವಣೆ ಆಗಲಿದೆ. ಮುಖ್ಯಮಂತ್ರಿಗಳ ಸಲಹೆ ಪಡೆದು ಅವರ ಸಹಕಾರದಿಂದ ಎಲ್ಲವೂ ಆಗಲಿದೆ. ಮಕ್ಕಳಿಗೆ ಉತ್ತಮ ಮತ್ತು ತಿಳುವಳಿಕೆಯ ಪಠ್ಯಗಳು ಇರಬೇಕು” ಎಂದರು.

”ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಯವರು ಇದೇ ನೀಚ ಬುದ್ದಿ ಮಾಡಿಕೊಂಡು ಹೋಗಲಿ.. ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ್ ಕಟೀಲ್ ಅವರ ಭಾವನಾತ್ಮಕ ನಾಟಕಕ್ಕೆ ರಾಜ್ಯದ ಜನ ಬುದ್ಧಿ ಕಲಿಸಿದ್ದಾರೆ. ಅವರನ್ನು ಸೋಲಿಸಿ ಜನರು ಕಾಂಗ್ರೆಸ್ ಗೆಲ್ಲಿಸಿದ್ದಾರೆ. ಬಿಜೆಪಿಯವರ ಜೀವನ ನಡೆಯುವುದು ಕೂಡ ನಮ್ಮ ಗ್ಯಾರಂಟಿಗಳ ಮೇಲೆ” ಎಂದು ಹೇಳಿದ್ದಾರೆ.

”ಸದ್ಯ ಮಕ್ಕಳ ಪೌಷ್ಟಿಕತೆಗಾಗಿ ವಾರಕ್ಕೆ ಎರಡು ಬಾರಿ ಮೊಟ್ಟೆ ಕೊಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಮಧ್ಯೆ ಸರ್ಕಾರ ಇದನ್ನ ಮಾಡಿದೆ. ಶಿಕ್ಷಕರ ಕೊರತೆ ರಾಜ್ಯದಲ್ಲಿ ಇದೆ, ಅದನ್ನ ನಾವು ಸರಿ ಮಾಡುತ್ತೇವೆ. ಇದರ ಮಧ್ಯೆ ದಾಖಲೆ ಪ್ರಮಾಣದಲ್ಲಿ 25 ಸಾವಿರ ಶಿಕ್ಷಕರ ವರ್ಗಾವಣೆ ಆಗಿದೆ” ಎಂದರು.

”ಈ ಬಿಜೆಪಿಯವರು ಸಭಾಧ್ಯಕ್ಷರ ಪೀಠವನ್ನೇ ಅವಮಾನಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲೂ ರಾಜ್ಯದ ಜನ ನಮ್ಮನ್ನ ಗೆಲ್ಲಿಸುತ್ತಾರೆ. ಕರಾವಳಿ ಭಾಗ ಕಲ್ಮಶ ಆಗಿದ್ದು ನಿಜ, ಆದರೆ ಮತ್ತೆ ಶಾಂತಿ ಸೌಹಾರ್ದತೆ ಬರಲಿದೆ. ನಮ್ಮ ಸರ್ಕಾರ ಅವೆಲ್ಲವನ್ನೂ ಮತ್ತೆ ಮೂಡಿಸಲಿದೆ” ಎಂದರು.

ಇದನ್ನೂ ಓದಿ: ಈ ವರ್ಷವೇ ಪಠ್ಯ ಪರಿಷ್ಕರಣೆಯಾಗಲಿದೆ: ಸಚಿವ ಮಧು ಬಂಗಾರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...