Homeಮುಖಪುಟಮೈತೇಯಿಗಳ ಜೊತೆ ಬಿರೇನ್ ಸಿಂಗ್ ಸರ್ಕಾರದ ಸಹಭಾಗಿತ್ವ: ಹಾಗಾಗಿ ಮಣಿಪುರ ಹಿಂಸಾಚಾರ ತಡೆಯಲಿಲ್ಲ ಎಂದ ಬಿಜೆಪಿ...

ಮೈತೇಯಿಗಳ ಜೊತೆ ಬಿರೇನ್ ಸಿಂಗ್ ಸರ್ಕಾರದ ಸಹಭಾಗಿತ್ವ: ಹಾಗಾಗಿ ಮಣಿಪುರ ಹಿಂಸಾಚಾರ ತಡೆಯಲಿಲ್ಲ ಎಂದ ಬಿಜೆಪಿ ಶಾಸಕ

ಪ್ರಧಾನಿಗಳು ತಮ್ಮ ಆದ್ಯತೆಗಳನ್ನು ಪರಿಗಣಿಸುವುದರಲ್ಲಿ ಎಡವಿದ್ದಾರೆ. ಅವರನ್ನು ಭೇಟಿಯಾಗಲು ಎಷ್ಟೇ ಪ್ರಯತ್ನ ಪಟ್ಟರೂ ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಮಣಿಪುರದಲ್ಲಿ ಮೇ 3 ರಿಂದ ಆರಂಭವಾದ ಜನಾಂಗೀಯ ಹಿಂಸಾಚಾರವನ್ನು ಕೂಡಲೇ ನಿಗ್ರಹಿಸಬಹುದಿತ್ತು. ಆದರೆ ಆ ಹಿಂಸಾಚಾರದಲ್ಲಿ ರಾಜ್ಯ ಸರ್ಕಾರದ ಸಹಭಾಗಿತ್ವವಿದ್ದ ಕಾರಣದಿಂದಲೇ ಅದು ಇಲ್ಲಿಯವರೆಗೂ ಬೆಳೆಯಿತು ಎಂದು ಸ್ವತಃ ಮಣಿಪುರದ ಬಿಜೆಪಿ ಶಾಸಕ ಪೋಲಿಯೆನ್‌ಲಾಲ್ ಹಾಕಿಪ್ ಆರೋಪಿಸಿದ್ದಾರೆ.

ಈ ಕುರಿತು ಇಂಡಿಯಾ ಟುಡೆ ಪತ್ರಿಕೆಗೆ ವಿವರವಾದ ಲೇಖನ ಬರೆದಿರುವ ಅವರು, ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದಾಗ ಅದನ್ನು ಜನಾಂಗೀಯ ಕೋಮು ಹಿಂಸಾಚಾರ ಎಂಬುದನ್ನು ಮರೆಮಾಚಲು ಸ್ವತಃ ಮುಖ್ಯಮಂತ್ರಿಗಳು ಡ್ರಗ್ಸ್ ವಿರುದ್ಧದ ಸಮರ ಎಂಬಂತೆ ತಪ್ಪಾಗಿ ಬಿಂಬಿಸಿದರು. ಅಲ್ಲಿಂದಲೇ ರಾಜ್ಯದಲ್ಲಿ ಜಟಿಲತೆ ಆರಂಭವಾಯಿತು. ಆನಂತರ ಕುಕಿ ಸಮುದಾಯದ ವಿರುದ್ಧ ಮೈತೇಯಿ ಸಮುದಾಯ ದಾಳಿ ಮಾಡಲು ರಾಜ್ಯ ಸರ್ಕಾರದ ಪಡೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿ ಶಾಸಕ ಪೋಲಿಯೆನ್‌ಲಾಲ್ ಹಾಕಿಪ್ ಸೇರಿದಂತೆ 10 ಶಾಸಕರು ಮೇ ತಿಂಗಳಿನಲ್ಲಿಯೇ ಹಿಂಸಾಚಾರವನ್ನು ತಡೆಯುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್‌ರವರಿಗೆ ಪತ್ರ ಬರೆದಿದ್ದರು. ಆ ಪತ್ರದಲ್ಲಿ ಬಹುಸಂಖ್ಯಾತ ಮೈತೇಯಿ ಸಮುದಾಯದವರು ಕುಕಿ ಸಮುದಾಯದ ಮೇಲೆ ಹಿಂಸಾಚಾರ ನಡೆಸುತ್ತಿದ್ದು ಅದನ್ನು ಬಿಜೆಪಿ ಆಡಳಿತ ಸರ್ಕಾರ ಮೌನವಾಗಿ ಬೆಂಬಲಿಸುತ್ತಿದೆ ಎಂದು ಆರೋಪಿಸಿದ್ದರು. ಹಿಂಸಾಚಾರವನ್ನು ತಹಬದಿಗೆ ತರಲು ‘ರಾಜ್ಯದಲ್ಲಿ ಕುಕಿ ಪ್ರಾಬಲ್ಯವಿರುವ ಜಿಲ್ಲೆಗಳಿಗೆ ಪ್ರತ್ಯೇಕ ಆಡಳಿತದ’ ಬೇಡಿಕೆ ಇಟ್ಟಿದ್ದರು. ಆದರೆ ರಾಜ್ಯದ ಸಮಗ್ರತೆಯ ವಿಚಾರ ಮುಂದಿಟ್ಟು ಆ ಬೇಡಿಕೆಯನ್ನು ಮುಖ್ಯಮಂತ್ರಿಗಳು ತಿರಸ್ಕರಿಸಿದ್ದರು.

ಆರಂಭದಲ್ಲಿ ಡ್ರಗ್ಸ್ ವಿರುದ್ಧದ ಯುದ್ಧ ಎಂಬರ್ಥದಲ್ಲಿ ಕುಕಿಗಳ ಮೇಲಿನ ದಾಳಿಗೆ ರಾಜ್ಯದ ಯಂತ್ರಾಂಗವನ್ನು ದುರಪಯೋಗಪಡಿಸಕೊಳ್ಳಲಾಯಿತು. ಅದು ಮುಂದುವರಿದು ಮೈತೇಯಿಗಳು ರಕ್ತಪಾತಕ್ಕೆ ಕಾರಣರಾದರು. ಅಲ್ಲದೇ ಸಂವಿಧಾನದ ಅಡಿಯಲ್ಲಿ ಹಕ್ಕುಗಳ ಮೇಲಿನ ದೀರ್ಘಕಾಲದ ಸಂಘರ್ಷವು ರಾಜ್ಯ ರಚನೆಯ ಪೂರ್ವದ ದಿನಗಳಿಂದಲೂ ಅಸ್ತಿತ್ವದಲ್ಲಿದೆ. ರಾಜ್ಯದ ಸಂಪತ್ತಿನ ಮೇಲಿನ ಹೆಚ್ಚಿನ ಹಿಡಿತ ಮೈತೇಯಿಗಳ ಕೈಯಲ್ಲಿದೆ. ಶಾಸನ ಸಭೆಗಳಲ್ಲಿಯೂ ಸಹ ಗುಡ್ಡಗಾಡು ಪ್ರದೇಶಗಳ ಸಮಿತಿಯ ಅಧಿಕಾರವನ್ನು ಕಿತ್ತುಕೊಳ್ಳಲಾಗಿದೆ. ಕುಕಿ ಸಮುದಾಯದ ಹಿಡಿತ ಹೊಂದಿದ್ದ ಬುಡಕಟ್ಟು ಭೂಮಿಗಳನ್ನು ಕಾಯ್ದಿರಿಸಿದ ಅರಣ್ಯಗಳು ಮತ್ತು ಸಂರಕ್ಷಿತ ಅರಣ್ಯಗಳಾಗಿ ಬದಲಾಯಿಸಲಾಗಿದೆ. ಅಲ್ಲದೇ ಜನಸಂಖ್ಯಾವಾರು ಮೀಸಲಾತಿ ಪರಿಚಯಿಸಲು ಮುಂದಾಗುತ್ತಿರುವುದು ಕುಕಿಗಳಿಗೆ ತಮ್ಮ ಅಸ್ತಿತ್ವದ ಪ್ರಶ್ನೆಯಾಗಿ ಕಂಡರೆ ಮೈತೇಯಿಗಳಿಗೆ ಕಣಿವೆ ಪ್ರದೇಶದ ಭೂಮಿಯ ಆಸೆಯಾಗಿ ಕಂಡಿದೆ ಎಂದು ಪೋಲಿಯೆನ್‌ಲಾಲ್ ಹಾಕಿಪ್ ಲೇಖನದಲ್ಲಿ ವಿವರಿಸಿದ್ದಾರೆ.

ರಾಜ್ಯದಲ್ಲಿ ಭ್ರಷ್ಟಾಚಾರವು ನಿರ್ವಹಿಸಲಾಗದ ಮಟ್ಟ ತಲುಪಿದೆ. ಇದರಿಂದ ಕುಕಿಗಳು ಅವಕಾಶ ವಂಚಿತರಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಆಳುವವರು ಪಕ್ಷಪಾತ ಮತ್ತು ತಾರತಮ್ಯ ಎಸಗಿದರು. ಮುಖ್ಯಮಂತ್ರಿ ಬಿರೇನ್ ಸಿಂಗ್ ಕುಕಿಗಳ ವಿರುದ್ಧದ ಹಿಂಸಾಚಾರದಲ್ಲಿ ಮೈತೆ ಲೀಪುನ್ ಮತ್ತು ಅರಾಂಬೈ ತೆಂಗೋಲ್‌ನಂತಹ ಮೂಲಭೂತ ಗುಂಪುಗಳೊಂದಿಗೆ ಕೈಜೋಡಿಸಿದ್ದರಿಂದ ಹಿಂಸಾಚಾರ ಉಲ್ಬಣವಾಯಿತು ಎಂದು ಅವರು ಬರೆದಿದ್ದಾರೆ.

ನ್ಯೂಸ್‌ಲಾಂಡ್ರಿಗೆ ನೀಡಿರುವ ಸಂದರ್ಶನದಲ್ಲಿ ಅವರು, ಪ್ರಧಾನಿಗಳು ತಮ್ಮ ಆದ್ಯತೆಗಳನ್ನು ಪರಿಗಣಿಸುವುದರಲ್ಲಿ ಎಡವಿದ್ದಾರೆ. ನಾವು ಪ್ರಧಾನಿಯವರನ್ನು ಭೇಟಿಯಾಗಿ ಮಣಿಪುರದ ಸಮಸ್ಯೆಗಳನ್ನು ಮುಂದಿಡಲು ಪ್ರಯತ್ನಿಸುತ್ತಿದ್ದರೂ ಅವರು ಅದನ್ನು ತಪ್ಪಿಸಿಕೊಳ್ಳುತ್ತಿದ್ದಾರೆ. ಈಗಲೂ ಮಣಿಪುರದ ಹಿಂಸಾಚಾರದ ನಿಯಂತ್ರಣಕ್ಕೆ ಪ್ರಧಾನಿಗಳ ಮಧ್ಯಪ್ರವೇಶ ಅನಿವಾರ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ; ‘ನಾನು ಕಂಡ ಅತ್ಯಂತ ಕೆಟ್ಟ ಪ್ರಧಾನಿ ಈ ಮೋದಿ’: ಸಚಿವ ಆರ್​.ಬಿ.ತಿಮ್ಮಾಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...