Homeಕರ್ನಾಟಕಭಾವೀ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ವಿಳಂಬ: ಸರ್ಕಾರಕ್ಕೆ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಭಾವೀ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ವಿಳಂಬ: ಸರ್ಕಾರಕ್ಕೆ ಬೃಹತ್ ಪ್ರತಿಭಟನೆಯ ಎಚ್ಚರಿಕೆ

- Advertisement -
- Advertisement -

ಶಿಕ್ಷಕ ವೃತ್ತಿಗೆ ಆಯ್ಕೆಯಾಗಿ ವರ್ಷ ಕಳೆದರೂ ಸ್ಥಳನಿಯುಕ್ತಿ ಮಾಡದೆ, ಆದೇಶ ಪ್ರತಿ ನೀಡದೆ ಶಿಕ್ಷಣ ಇಲಾಖೆಯು ಸತಾಯಿಸಲಾಗುತ್ತಿದೆ. ಕೂಡಲೇ ಕೌನ್ಸೆಲಿಂಗ್ ನಡೆಸಿ ಕೆಲಸಕ್ಕೆ ಕಳಿಸಬೇಕೆಂದು ಒತ್ತಾಯಿಸಿ ಜು.3ರಂದು ಸಾವಿರಾರು ಭಾವೀ ಶಿಕ್ಷಕರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಆರಂಭಿಸಿದ್ದರು ಆದರೂ ಅವರ ಗೋಳು ಕೇಳುವವರಿಲ್ಲ. ಇದೀಗ ಮತ್ತೆ ಬೃಹತ್ ಪ್ರತಿಭಟನೆ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆಯು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗಾಗಿ 2022ರ ಮಾರ್ಚ್‌ನಲ್ಲಿ 15,000 ಶಿಕ್ಷಕರ ನೇಮಕಾತಿಗೆ ಅರ್ಜಿ ಕರೆಯಲಾಯಿತು. 70,000ಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಮೇ ತಿಂಗಳಿನಲ್ಲಿ ಪರೀಕ್ಷೆ ನಡೆಸಲಾಯಿತು. 13,351 ಅಭ್ಯರ್ಥಿಗಳು ಆಯ್ಕೆಯಾಗಿರುತ್ತಾರೆ.

ನವೆಂಬರ್‌ನಲ್ಲಿ 1:2 ಮತ್ತು 1:1ರ ಆಧಾರದಲ್ಲಿ 13,353 ಶಿಕ್ಷಕರನ್ನು ಆಯ್ಕೆ ಮಾಡಿ ತಾತ್ಕಾಲಿಕ ಪಟ್ಟಿ ಪ್ರಕಟ ಮಾಡಿಲಾಯಿತು. ಆಯ್ಕೆಯಾದ ಭಾವೀ ಶಿಕ್ಷಕರು ಕೊನೆಗೂ ತಮ್ಮ ಆಸೆ ನೆರವೇರಿತು ಎಂಬ ಸಂಭ್ರಮದಲ್ಲಿದ್ದರು. ಆದರೆ ಪಟ್ಟಿ ಪ್ರಕಟವಾಗಿ 9 ತಿಂಗಳಾಗುತ್ತ ಬಂದರೂ ಅವರಿಗೆ ಇದುವರೆಗೂ ಸ್ಥಳ ನಿಯುಕ್ತಿ ಮತ್ತು ನೇಮಕಾತಿ ಆದೇಶ ಸಿಕ್ಕಿಲ್ಲ ಎಂದು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ಅಭ್ಯರ್ಥಿಗಳು ಕಿಡಿಕಾರುತ್ತಿದ್ದಾರೆ.

ಇಲಾಖೆಯೆ ಸೃಷ್ಠಿಸಿದ ಕೆಲವು ಗೊಂದಲದ ಅಸ್ಪಷ್ಟ ನಿಯಮಗಳ ಕಾರಣಕ್ಕಾಗಿ 300-400 ಅಭ್ಯರ್ಥಿಗಳು ನ್ಯಾಯಲಯದ ಮೊರೆ ಹೋಗಿದ್ದಾರೆ. W/P 23752/2022, W/A 305/2023 ಮತ್ತು W/P 5009/2023 ನಲ್ಲಿ ರಿಟ್ ಅರ್ಜಿಯ ಮತ್ತು ಮೇಲ್ಮನವಿಯ ವಿಚಾರಣೆ ರಾಜ್ಯ ಉಚ್ಚ ನ್ಯಾಯಲಯದಲ್ಲಿ ನಡೆಯುತ್ತಿದ್ದು, ಈ ವಿಚಾರಣೆಗಳ ಮಧ್ಯಂತರ ಆದೇಶವು ಸುಮಾರು 13,000 ಕ್ಕೂ ಹೆಚ್ಚು ಅಭ್ಯರ್ಥಿಗಳ ನೇಮಕಾತಿಯ ವಿಳಂಬಕ್ಕೆ ಕಾರಣವಾಗಿದೆ.

ಸರ್ಕಾರಿ ಹುದ್ದೆಗೆ ಆಯ್ಕೆಯಾದ ಕಾರಣಕ್ಕೆ ತಾವು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಮಾಡುತಿದ್ದ ಕೆಲಸಗಳನ್ನು ಕಳೆದುಕೊಂಡು ಜೀವನ ನಿರ್ವಾಹಣೆಗೆ ಅನಿವಾರ್ಯವಾಗಿ ಬಸ್ ಏಜೆಂಟ್ ರುಗಳಾಗಿ, ಉದ್ಯೋಗ ಖಾತ್ರಿ ಇತ್ಯಾದಿ ಕೆಲಸಗಳ ಮೊರೆ ಹೋಗುತ್ತಿದ್ದು, ಹಲವು ಕುಟುಂಬಗಳು ಬೀದಿಗೆ ಬೀಳುವ ಅತಂಕ ಎದುರಾಗಿದೆ. ಜೊತೆಗೆ ಈಗಾಗಲೇ ಶಾಲೆಗಳು ಆರಂಭವಾಗಿ ಎರಡು ತಿಂಗಳುಗಳಾಗಿದ್ದು, ಸುಮಾರು 56,000ಕ್ಕೂ ಹೆಚ್ಚು ಶಿಕ್ಷಕರ ಕೊರತೆ ಇದೆ ಎಂದು ಪ್ರತಿ ದಿನ ಪತ್ರಿಗಳಲ್ಲಿ ವರದಿಯಾಗುತ್ತಿದೆ. ಹಾಗಾಗಿಯೇ ಸಾಕಷ್ಟು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರೆತೆ ಇದೆ ಎಂದು ಮಕ್ಕಳ ದಾಖಲಾತಿ ಕೂಡ ಇಳಿಮುಖವಾಗಿ ಶಾಲೆಗಳನ್ನು ಮುಚ್ಚುವ ಹಂತಕ್ಕೆ ಬಂದಿವೆ. ಇದು ಗುಣಮಟ್ಟದ ಶಿಕ್ಷಣದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಪೋಷಕರು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿರುವುದಕ್ಕೆ ಮುಖ್ಯ ಕಾರಣವಾಗಿದೆ.

ಸದರಿ ಶಿಕ್ಷಕರ ನೇಮಕಾತಿಯು ಅತಿ ದೊಡ್ಡ ಮಟ್ಟದ ಶಿಕ್ಷಕರ ನೇಮಕಾತಿಯಾಗಿದ್ದು, ನೇಮಕಾತಿ ತ್ವರಿತವಾಗಿ ಪೂರ್ಣಗೊಂಡಲ್ಲಿ ಶಾಲೆಗಳಲ್ಲಿರುವ ಶಿಕ್ಷಕರ ಕೊರತೆಯ ಹೊರೆಯನ್ನು ಕಡಿಮೆ ಮಾಡುವ ಜೊತೆಗೆ ಗುಣಮಟ್ಟದ ಶಿಕ್ಷಣವನ್ನ ಕಾಯ್ದುಕೊಳ್ಳಲು ಅನುಕೂಲವಾಗುತ್ತದೆ. ಈಗಾಗಲೆ ಶಿಕ್ಷಕರ ಕೊರತೆಯಿಂದ ಸಾಕಷ್ಟು ಶಾಲೆಗಳು ಮುಚ್ಚಿದ್ದರು. ಇಲಾಖೆ ಮತ್ತು ಸರ್ಕಾರ ನ್ಯಾಯಾಲಯದಲ್ಲಿರುವ ನೇಮಕಾತಿಯನ್ನು ಬೇಗ ಬಗೆಹರಿಸಿ ಶಿಕ್ಷಕರ ನೇಮಕಾತಿಯನ್ನು ಪೂರ್ಣಗೊಳಿಸುವ ಬದಲಿಗೆ ಮತ್ತೆ ಹೊಸ ಸಮಸ್ಯೆಯನ್ನು ಸೃಷ್ಟಿಸಿ ಅಭ್ಯರ್ಥಿಗಳನ್ನು ಮತ್ತೆ ನ್ಯಾಯಾಲಯದ ಮೆಟ್ಟಿಲೇರುವಂತೆ ಮಾಡುತ್ತಿವೆ.

ಇದನ್ನೂ ಓದಿ: ಕೂಡಲೇ ಸ್ಥಳನಿಯುಕ್ತಿ ಮಾಡಿ ಆದೇಶ ಪ್ರತಿ ನೀಡಿ: ಬೆಂಗಳೂರಿನಲ್ಲಿ ಭಾವೀ ಶಿಕ್ಷಕರ ಹೋರಾಟ

ಸಮಸ್ಯೆ ಸೃಷ್ಟಿಸಿರುವ ಇಲಾಖೆ

ಮೇ, 2023 ರಿಂದ ಆಯ್ಕೆಯಾದ ಅಭ್ಯರ್ಥಿಗಳ ದಾಖಲೆಗಳ ನೈಜತೆ ಪರಿಶೀಲನೆ ಕಾರ್ಯ ಪ್ರಗತಿಯಲ್ಲಿದ್ದರು ಈ ಪ್ರಕ್ರಿಯೆ ತುಂಬಾ ವಿಳಂಬವಾಗುತ್ತಿದೆ. ಜಾತಿ ಮೀಸಲಾತಿ ಕೋರಿ ಅರ್ಜಿ ಸಲ್ಲಿಸಿ ಸಾಮಾನ್ಯ ಅರ್ಹತೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಜಾತಿ ಮತ್ತು ಆದಾಯ ಸಿಂಧುತ್ವ ಮಾಡಿಸಲು ಸೂಚಿಸುತ್ತಿರುವುದು ಸಾಮಾನ್ಯ ಅರ್ಹತೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹೊಸ ಸಮಸ್ಯೆಯನ್ನು ಸೃಷ್ಟಿಸುತ್ತಿದೆ.

2016, 2017 ಮತ್ತು 2019 ರ ನೇಮಕಾತಿಗಳಲ್ಲಿ ಸಾಮಾನ್ಯ ಅರ್ಹತೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲ್ಲದ ನಿಯಮ ಈಗೇಕೆ? ಎಂಬ ಪ್ರೆಶ್ನೆ ಅಭ್ಯರ್ಥಿಗಳಲ್ಲಿ ಮೂಡಿದೆ. ಅಲ್ಲದೆ ಸಾಮಾನ್ಯ ಅರ್ಹತೆಯಲ್ಲಿ ಆಯ್ಕೆಯಾದ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು ಯಾವುದೇ ಅಂಕ ಮತ್ತು ಅರ್ಜಿ ಸಲ್ಲಿಕೆಯ ಫೀ ಗಳ ವಿನಾಯ್ತಿಯನ್ನು ಪಡೆದಿರುವುದಿಲ್ಲ. ಹಿಂದಿನ ಶಿಕ್ಷಣ ಆಯುಕ್ತರಾದ ಡಾ. ವಿಶಾಲ್ ರವರು ಕೂಡ ಸಾಮಾನ್ಯ ಅರ್ಹತೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನಡತೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು ಹೊರತುಪಡಿಸಿ ಯಾವುದೇ ಸಿಂಧುತ್ವ ಇರುವುದಿಲ್ಲವೆಂದು ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ಮೀಸಲಾತಿ ಅನುಸೂಚಿ/ಕಾಯ್ದೆ 1990, 1992 ಮತ್ತು 1994 ರಲ್ಲಿ ಕೂಡ ಸಾಮಾನ್ಯ ಅರ್ಹತೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಜಾತಿ ಮತ್ತು ಆದಾಯ ಸಿಂಧುತ್ವ ಅಗತ್ಯವಿಲ್ಲವೆಂದು ಮತ್ತು ಹೆಚ್ಚು ಅಂಕಗಳೊಂದಿಗೆ ರ್ಯಾಂಕ್ ಬಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳನ್ನು ಸಾಮಾನ್ಯ ಅರ್ಹತೆಯಲ್ಲಿಯೇ ಆಯ್ಕೆ ಮಾಡಿಕೊಳ್ಳಬೇಕೆಂಬ ನಿಯಮವಿದೆ. ಕರ್ನಾಟಕ ಆಡಳಿತ ನ್ಯಾಯಮಂಡಳಿಯು ಕೂಡ ಈ ಹಿಂದಿನ ಪ್ರಕರಣಗಳಲ್ಲಿ (1814/2020 ಮತ್ತು 4602/2017) ಸಾಮಾನ್ಯ ಅರ್ಹತೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಜಾತಿ ಮತ್ತು ಆದಾಯ ಸಿಂಧುತ್ವ ಅಗತ್ಯವಿಲ್ಲವೆಂದು ತೀರ್ಪನ್ನು ನೀಡಿದ್ದರು ಇಲಾಖೆಯು ಹಿಂದುಳಿದ ವರ್ಗಗಳ ಇಲಾಖೆಯ 2021ರಲ್ಲಿನ ಅನಧಿಕೃತ ಟಿಪ್ಪಣಿಯೊಂದನ್ನು ಮುಂದಿಟ್ಟು ಸಾಮಾನ್ಯ ಅರ್ಹತೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಜಾತಿ ಮತ್ತು ಆದಾಯ ಸಿಂಧುತ್ವ ಮಾಡಿಸ ಬೇಕೆಂದು ಹೇಳುತ್ತಿದೆ.

ಅಭ್ಯರ್ಥಿಗಳು ಹಲವು ದಾಖಲೆಗಳನ್ನು ನೀಡಿ ಈ ಯೋಚನೆಯನ್ನು ಕೈ ಬಿಡುವಂತೆ ಮನವಿ ಮಾಡಿಕೊಂಡರು ಇಲಾಖೆಯ ಅಧಿಕಾರಿಗಳು ಇದುವರೆಗೂ ಯಾವುದೆ ನಿರ್ಧಾರಕ್ಕೆ ಬರದಿರುವುದು ಅಭ್ಯರ್ಥಿಗಳಲ್ಲಿ ಬೇಸರವನ್ನು ಮೂಡಿಸಿದೆ ಮತ್ತು ಕೆಲವು ಅಭ್ಯರ್ಥಿಗಳು ನ್ಯಾಯಾಂಗದ ಮೊರೆ ಹೋಗಲು ಸಿದ್ಧರಾಗಿದ್ದಾರೆ. ಇದರಿಂದ ಈಗಾಗಲೇ ಆಮೆಗತಿಯಲ್ಲಿರುವ ನೇಮಕಾತಿಗೆ ಮತ್ತೆ ಬ್ರೇಕ್ ಬೀಳುವ ಸಾಧ್ಯತೆಗಳಿವೆ. ಇಲಾಖೆಯು ಆದಷ್ಟು ಬೇಗ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು ಒಂದು ಸ್ಪಷ್ಟ ನಿರ್ಧಾರಕ್ಕೆ ಬರದದಿದ್ದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗಷ್ಟೆ ಅಲ್ಲದೆ ಈಗಾಗಲೆ ಶಿಕ್ಷಕರ ಕೊರತೆಯಿಂದ ಬಳಲುತ್ತಿರುವ ಸರ್ಕಾರಿ ಶಾಲೆಗಳಿಗೂ ನಷ್ಟವಾಗಲಿದೆ.

ಸರ್ಕಾರಿ ವಕೀಲರೊಂದಿಗೆ ಚರ್ಚಿಸಿ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಿ ನೇಮಕಾತಿಯನ್ನು ಪೂರ್ಣಗೊಳಿಸ ಬೇಕು. ಇದು ಹೀಗೆ ವಿಳಂಬವಾದಲ್ಲಿ ಮತ್ತೊಮ್ಮೆ ದೊಡ್ಡಮಟ್ಟದ ಸಂಘಟಿತ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ಇಲಾಖೆಯನ್ನು ಭಾವೀ ಶಿಕ್ಷಕರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...