Homeಮುಖಪುಟಜ್ಞಾನವಾಪಿ ಮಸೀದಿಯ ಪುರಾತತ್ವ ಸರ್ವೇಗೆ ತಾತ್ಕಾಲಿಕ ತಡೆ: ಅಲಹಾಬಾದ್ ಹೈಕೋರ್ಟ್

ಜ್ಞಾನವಾಪಿ ಮಸೀದಿಯ ಪುರಾತತ್ವ ಸರ್ವೇಗೆ ತಾತ್ಕಾಲಿಕ ತಡೆ: ಅಲಹಾಬಾದ್ ಹೈಕೋರ್ಟ್

- Advertisement -
- Advertisement -

ವಾರಣಾಸಿಯ ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ತಾತ್ಕಾಲಿಕವಾಗಿ ತಡೆ ನೀಡಿದೆ ಮತ್ತು ಗುರುವಾರ ಮಧ್ಯಾಹ್ನ 3.30 ಕ್ಕೆ ವಿಚಾರಣೆಗೆ ಪಟ್ಟಿ ಮಾಡಿದೆ.

ಕಳೆದ ವಾರ ವಾರಣಾಸಿ ಜಿಲ್ಲಾ ನ್ಯಾಯಾಲಯವು ಮಸೀದಿಯ ವೈಜ್ಞಾನಿಕ ಸಮೀಕ್ಷೆಯನ್ನು ನಡೆಸುವಂತೆ ಭಾರತೀಯ ಪುರಾತತ್ವ ಇಲಾಖೆಗೆ ನಿರ್ದೇಶಿಸಿ ಆದೇಶ ಹೊರಡಿಸಿತ್ತು. ವಾರಣಾಸಿಯ ಜ್ಞಾನವಾಪಿ ಮಸೀದಿಯ ಉಸ್ತುವಾರಿಯಾಗಿರುವ ಅಂಜುಮನ್ ಇಂತೇಜಾಮಿಯಾ ಮಸಾಜಿದ್ ಸಮಿತಿಯು ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮಂಗಳವಾರ ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತು.

ವಿಚಾರಣೆ ಮುಗಿದ ನಂತರ ಬುಧವಾರ ಸಂಜೆ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಜ್ಞಾನವಾಪಿ ಮಸೀದಿ ಸಮಿತಿಯ ಪರವಾಗಿ ಹಾಜರಾದ ಹಿರಿಯ ವಕೀಲ ಎಸ್‌ಎಫ್‌ಎ ನಖ್ವಿ ಅವರು, ”ಜಿಲ್ಲಾ ನ್ಯಾಯಾಲಯದ ಆದೇಶದ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಸದ್ಯಕ್ಕೆ ತಡೆ ನೀಡಿದೆ” ಎಂದು ಹೇಳಿದರು.

”ಮಸೀದಿ ರಚನೆಗೆ ಯಾವುದೇ ಹಾನಿಯಾಗದಂತೆ ಕಾನೂನು ಪ್ರಕಾರ ಸಮೀಕ್ಷೆ ನಡೆಸಲಾಗುವುದು ಎಂದು ಎಎಸ್‌ಐ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದ್ದಾರೆ. ಗುರುವಾರ ಮಧ್ಯಾಹ್ನ 3.30ಕ್ಕೆ ನ್ಯಾಯಾಲಯವು ಮತ್ತೆ ವಿಚಾರಣೆ ನಡೆಸಿದಾಗ ನಾವು ಇದಕ್ಕೆ ಉತ್ತರವನ್ನು ಸಲ್ಲಿಸುತ್ತೇವೆ. ಸದ್ಯಕ್ಕೆ ಜಿಲ್ಲಾ ನ್ಯಾಯಾಲಯದ ಆದೇಶದ ಸಮೀಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ” ಎಂದು ನಖ್ವಿ ಹೇಳಿದರು.

ಗುರುವಾರ ಈ ಪ್ರಕರಣದ ವಿಚಾರಣೆ ನಡೆಯಲಿದ್ದು, ಅಲ್ಲಿಯವರೆಗೆ ಸರ್ವೆ ಕಾರ್ಯ ಸ್ಥಗಿತಗೊಳ್ಳಲಿದೆ.

ವಾರಣಾಸಿ ನ್ಯಾಯಾಲಯವು ಶುಕ್ರವಾರ ನೀಡಿದ ತನ್ನ ಆದೇಶದಲ್ಲಿ, ಎಎಸ್‌ಐಗೆ ಜ್ಞಾನವಾಪಿ ಮಸೀದಿ ಆವರಣದ “ವೈಜ್ಞಾನಿಕ ತನಿಖೆ / ಸಮೀಕ್ಷೆ / ಉತ್ಖನನ” ಮಾಡಲು ಮತ್ತು “ಪ್ರಸ್ತುತ ರಚನೆಯನ್ನು” “ಹಿಂದೂ ದೇವಾಲಯದ ಪೂರ್ವ ಅಸ್ತಿತ್ವದಲ್ಲಿರುವ ರಚನೆಯ ಮೇಲೆ ನಿರ್ಮಿಸಲಾಗಿದೆಯೇ” ಎಂದು “ಶೋಧಿಸಲು” ನಿರ್ದೇಶಿಸಿದೆ.

ಈ ಆದೇಶವನ್ನು ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು ವಾರಣಾಸಿ ನ್ಯಾಯಾಲಯದ ಆದೇಶವನ್ನು ಜುಲೈ 26ರವರೆಗೆ ತಡೆಹಿಡಿಯಿತು, ಜಿಲ್ಲಾ ನ್ಯಾಯಾಲಯದ ಆದೇಶದ ವಿರುದ್ಧ ಮಸೀದಿ ಸಮಿತಿಯು ಹೈಕೋರ್ಟ್‌ಗೆ ತೆರಳಲು ಅವಕಾಶ ನೀಡಿತು.

ನಾಲ್ವರು ಹಿಂದೂ ಮಹಿಳಾ ಅರ್ಜಿದಾರರ ಅರ್ಜಿಯನ್ನು ಪುರಸ್ಕರಿಸಿದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಡಾ.ಅಜಯ ಕೃಷ್ಣ ವಿಶ್ವೇಶ ಅವರು ಶುಕ್ರವಾರ ತಮ್ಮ ಆದೇಶದಲ್ಲಿ, “ಪ್ರಶ್ನೆಯಲ್ಲಿರುವ ಕಟ್ಟಡದ 3 ಗುಮ್ಮಟಗಳ ಕೆಳಗೆ ನೆಲಕ್ಕೆ ನುಗ್ಗುವ ರಾಡಾರ್ (ಜಿಪಿಆರ್) ಸಮೀಕ್ಷೆಯನ್ನು ನಡೆಸುವಂತೆ ಮತ್ತು ಅಗತ್ಯವಿದ್ದರೆ ಉತ್ಖನನ ನಡೆಸುವಂತೆ” ಎಎಸ್‌ಐಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿಯ ಪುರಾತತ್ವ ಸರ್ವೇಗೆ ಸುಪ್ರೀಂ ಬ್ರೇಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...