Homeಕರ್ನಾಟಕಸೌಜನ್ಯ ಪ್ರಕರಣದ ನೈಜ ಅಪರಾಧಿಗಳು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ: ಮಹೇಶ್‌ ಶೆಟ್ಟಿ ತಿಮರೋಡಿ ಆಕ್ರೋಶ

ಸೌಜನ್ಯ ಪ್ರಕರಣದ ನೈಜ ಅಪರಾಧಿಗಳು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ: ಮಹೇಶ್‌ ಶೆಟ್ಟಿ ತಿಮರೋಡಿ ಆಕ್ರೋಶ

- Advertisement -
- Advertisement -

ಸೌಜನ್ಯ ಪ್ರಕರಣದ ನೈಜ ಅಪರಾಧಿಗಳು ಮತ್ತು ಅವರ ರಕ್ಷಕರು ಧರ್ಮಸ್ಥಳದಲ್ಲಿ ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ. ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿ, ಶಿಕ್ಷೆ ವಿಧಿಸಬೇಕು ಎಂದು ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಆಗ್ರಹಿಸಿದರು.

ಸೌಜನ್ಯ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ದಿಂದ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಮ್ಮ ತೆರಿಗೆ ಹಣದಲ್ಲಿ ಸಂಬಳ ಪಡೆದು, ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿರುವ ಸರ್ಕಾರ ಮತ್ತು ಪೊಲೀಸ್‌ ಅಧಿಕಾರಿಗಳಿಗೆ ಧಿಕ್ಕಾರ. ಸೌಜನ್ಯ ಪ್ರಕರಣವನ್ನು ಮುಚ್ಚಿಹಾಕಿ, ಅಪರಾಧಿಗಳನ್ನು ರಕ್ಷಿಸುತ್ತಿರುವವರಿಗೆ ನಮ್ಮ ಶಾಪ ತಟ್ಟುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಕರಣದ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯವು ತನಿಖಾಧಿಕಾರಿಗಳು ಆರೋಪಿಯೆಂದು ಬಂಧಿಸಿದ್ದ ಅಮಾಯಕನನ್ನು ನಿರಪರಾಧಿಯೆಂದು ಘೋಷಿಸಿ, ಖುಲಾಸೆಗೊಳಿಸಿದೆ. ಅಲ್ಲದೆ, ‘ಪ್ರಕರಣದ ತನಿಖೆಯು ಲೋಪಗಳಿಂದ ಕೂಡಿದ್ದು, ಮರು ತನಿಖೆಗೆ ಅರ್ಹವಾಗಿದೆ’ ಎಂದೂ ಹೇಳಿದೆ. ನ್ಯಾಯಾಲಯವೇ ಹೇಳುವಂತೆ ಪ್ರಕರಣವನ್ನು ಸಿಬಿಐ ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸಿಲ್ಲ. ಹೀಗಾಗಿ, ಪ್ರಕರಣವನ್ನು ನ್ಯಾಯಾಂಗದ ನೇರ ತಪಾಸಣೆಯ ಅಡಿಯಲ್ಲಿ ಎಸ್‌ಐಟಿ ಮೂಲಕ ಮರುತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ನಮ್ಮ ಮಕ್ಕಳು, ಮೊಮ್ಮಕ್ಕಳಿಗೆ ಎಂತಹ ಸಮಾಜವನ್ನು ಬಿಟ್ಟು ಹೋಗುತ್ತಿದ್ದೇವೆ ಎಂದು ಯೋಚಿಸದರೆ ದುಗುಡವಾಗುತ್ತದೆ. ಜನತೆ ಈ ರಾಜ್ಯ ಸರ್ಕಾರದ ಬಗ್ಗೆ ಅಪಾರವಾದ ಭರವಸೆ ಇಟ್ಟುಕೊಂಡಿದ್ದಾರೆ. ಅದನ್ನು ಉಳಿಸಿಕೊಳ್ಳುವಂತೆ ಸೌಜನ್ಯ ಪ್ರಕರಣದ ಅಪರಾಧಿಗಳನ್ನು ಹಿಡಿದು ಶಿಕ್ಷಿಸಬೇಕು. ಮನುಷ್ಯತ್ವದ ನೆಲೆಯಲ್ಲಿ ಸರ್ಕಾರ ಆಲೋಚಿಸಬೇಕು ಎಂದು ಹಿರಿಯ ಚಿಂತಕರಾದ ಎಸ್.ಜಿ ಸಿದ್ಧರಾಮಯ್ಯ ಒತ್ತಾಯಿಸಿದರು.

ಮಹಿಳೆಯರ ಮೇಲೆ ನಡೆಯುತ್ತಿರುವ ನಿರಂತರವಾದ, ಅಮಾನುಷವಾದ ಹಿಂಸೆ, ದೌರ್ಜನ್ಯ ಗಳ ಈ ಕಾಲದಲ್ಲಿ ಸರ್ಕಾರಗಳು ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳುವ ಮೂಲಕ ಮಹಿಳೆಯರಲ್ಲಿ ಬದುಕಿನ ಬಗ್ಗೆ, ಈ ರಾಜ್ಯದ ಸರ್ಕಾರದ ಬಗ್ಗೆ ಭರವಸೆ ಮೂಡಿಸಬೇಕು. ಇಲ್ಲವಾದರೆ ಇಡೀ ಮಹಿಳಾ ಸಮೂಹ ಭರವಸೆಯೇ ಇಲ್ಲದೆ ತತ್ತರಿಸಿಹೋಗುತ್ತದೆ ಎಂದು ಎನ್.ಎಫ್.ಐ.ಡಬ್ಲ್ಯು ಸಂಘಟನೆಯ ಎ. ಜ್ಯೋತಿ ಅಭಿಪ್ರಾಯಪಟ್ಟರು.

ಪ್ರತಿಭಟನೆಯಲ್ಲಿ ಮಾತನಾಡಿದ ಸಿಎಐಟಿಯು ಮುಖಂಡ ಪ್ರಕಾಶ್, “ನಮ್ಮ ಅಳತೆಗೂ ಮೀರಿದ ಸಮಸ್ಯೆಗಳು ಸೌಜನ್ಯ ಪ್ರಕರಣವನ್ನು ಸುತ್ತುವರಿದಿವೆ. ಸರ್ಕಾರದ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯಿಂದ ಧರ್ಮಸ್ಥಳದ ಆದಾಯ ಹೆಚ್ಚಿದೆ. ಅದನ್ನು ಸಂಭ್ರಮಿಸಿ ಧರ್ಮಸ್ಥಳದ ಹೆಗ್ಗಡೆ ಮುಖ್ಯ ಮಂತ್ರಿಗಳಿಗೆ ದೀರ್ಘ ಪತ್ರ ಬರೆದಿದ್ದಾರೆ. ಬಿಜೆಪಿಯು ಅವರನ್ನು ರಾಜ್ಯ ಸಭೆ ಸದಸ್ಯ ಮಾಡಿದೆ.  ಇದರ ಜೊತೆಗೆ ಧರ್ಮಸ್ಥಳದ ಮೈಕ್ರೊ ಫೈನಾನ್ಸ್ ಯೋಜನೆ ರಾಜ್ಯಾದ್ಯಂತ ಮಹಿಳೆಯರನ್ನು ಸಾಲದ ಬಲೆಯೊಳಗೆ ಸಿಲುಕಿಸಿದೆ. ಇಂತಹ ರಾಜಕೀಯ ಪರಿಸ್ಥಿತಿಯಲ್ಲಿ ನಾವು ಸೌಜನ್ಯಳ ದಾರುಣ ಸಾವಿಗೆ ಹೊಣೆಗಾರರನ್ನು ಹುಡುಕುತ್ತಿದ್ದೇವೆ” ಎಂದರು.

ಪ್ರತಿಭಟನಾಕಾರರ ಹಕ್ಕೊತ್ತಾಯಗಳು

  • ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕು. ಎಸ್‌ಐಟಿ ರಚಿಸಿ, ನಿಷ್ಪಕ್ಷಪಾತ ತನಿಖೆ ನಡೆಸಬೇಕು.
  • ಶಂಕಿತ ಆರೋಪಿಗಳಾದ ಉದಯ್ ಜೈನ್, ಮಲಿಕ್ ಜೈನ್ ಹಾಗೂ ಧೀರಜ್‌ ಜೈನ್‌ನನ್ನು ಬಂಧಿಸಿ, ವಿಚಾರಣೆ ನಡೆಸಬೇಕು.
  • ಸೌಜನ್ಯಳ ಮೃತದೇಹವನ್ನು ಪರೀಕ್ಷಿಸಿ, ಸರಿಯಾದ ಮರಣೋತ್ತರ ಪರೀಕ್ಷಾ ವರದಿ ನೀಡದ ಬೆಳ್ತಂಗಡಿ ವೈದ್ಯಕೀಯ ಆಸ್ಪತ್ರೆಯ ಸ್ತ್ರೀರೋಗತಜ್ಞ ಡಾ ರಶ್ಮಿ ಎನ್, ಡಾ. ಆಡಂ ವಿರುದ್ಧ ಕ್ರಮ ಕೈಗೊಳ್ಳಬೇಕು.
    ಮೊದಲಿಗೆ ಪ್ರಕರಣದ ತನಿಖೆ ನಡೆಸಿದ್ದ ತನಿಖಾಧಿಕಾರಿ ಯೋಗೀಶ್ ಕುಮಾರ್, ಅಂದಿನ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಗೋಯಲ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು.
  • ಸಂತೋಷ್ ರಾವ್ ಅವರನ್ನು ಪರೀಕ್ಷಿಸಿದ ಫೋರೆನ್ಸಿಕ್ ಮೆಡಿಸಿನ್ ಪ್ರಾಧ್ಯಾಪಕ ಡಾ. ಮಹಾಬಲ ಶೆಟ್ಟಿ ಅವರನ್ನೂ ತನಿಖೆಗೆ ಒಳಪಡಿಸಿ, ಕ್ರಮ ಕೈಗೊಳ್ಳಬೇಕು.
  • ನಿರಪರಾಧಿಯಾಗಿದ್ದರೂ ಪೊಲೀಸ್ ದೌರ್ಜನ್ಯಕ್ಕೆ ತುತ್ತಾದ ಸಂತೋಷ್ ರಾವ್‌ ಮತ್ತು ಕುಟುಂಬಕ್ಕೆ ಪರಿಹಾರ ನೀಡಬೇಕು.
  • ಕಲಬುರಗಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಕಾಮುಕರನ್ನು ಬಂಧಿಸಿಬೇಕು.
  • ರಾಜಸ್ಥಾನದಲ್ಲಿ ಹೆಣ್ಣು ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಕಾಮುಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿ ನಾಯಕಿ ಶಕುಂತಲಾ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...