Homeಮುಖಪುಟಬಿಜೆಪಿ ಮಹಿಳೆಯರ ಘನತೆ, ದೇಶದ ಆತ್ಮಗೌರವದೊಂದಿಗೆ ಆಟವಾಡುತ್ತಿದೆ: ರಾಹುಲ್ ಗಾಂಧಿ

ಬಿಜೆಪಿ ಮಹಿಳೆಯರ ಘನತೆ, ದೇಶದ ಆತ್ಮಗೌರವದೊಂದಿಗೆ ಆಟವಾಡುತ್ತಿದೆ: ರಾಹುಲ್ ಗಾಂಧಿ

- Advertisement -
- Advertisement -

ಬಿಜೆಪಿಯು ಅಧಿಕಾರದ ದುರಾಸೆಯಲ್ಲಿ ಮಹಿಳೆಯರ ಘನತೆ ಹಾಗೂ ದೇಶದ ಆತ್ಮಗೌರವದೊಂದಿಗೆ ಆಟವಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ಈ ಕುರಿತು ರಾಹುಲ್ ಗಾಂಧಿ ಅವರು ಫೇಸ್‌ಬುಕ್ ಪುಟದಲ್ಲಿ ವಿಡಿಯೊ ಸಂದೇಶ ಶೇರ್ ಮಾಡಿದ್ದಾರೆ. ”ಮಹಿಳೆಯರನ್ನು ಗೌರವಿಸದ ದೇಶ ಎಂದಿಗೂ ಪ್ರಗತಿ ಹೊಂದಲು ಸಾಧ್ಯವಿಲ್ಲ. ಅಧಿಕಾರದ ದುರಾಸೆಯಲ್ಲಿ ಬಿಜೆಪಿ ಮಹಿಳೆಯರ ಗೌರವ ಮತ್ತು ದೇಶದ ಸ್ವಾಭಿಮಾನ ಎರಡರಲ್ಲೂ ಆಟವಾಡುತ್ತಿದೆ” ಎಂದು ಬರೆದು ವಿಡಿಯೋ ಹಂಚಿಕೊಂಡಿದ್ದಾರೆ.

ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲುಗೊಳಿಸಿ, ಮೆರವಣಿಗೆ ನಡೆಸಿ ಲೈಂಗಿಕ ದೌರ್ಜನ್ಯ ಎಸಗಿರುವುದು, ಭಾರತ ಕುಸ್ತಿ ಫೆಡರೇಷನ್‌ (ಡಬ್ಲ್ಯುಎಫ್‌ಐ) ನಿರ್ಗಮಿತ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳ ಆರೋಪ ಇತ್ಯಾದಿ.. ಘಟನೆಗಳನ್ನು ವಿಡಿಯೊದಲ್ಲಿ ಉಲ್ಲೇಖಿಸಲಾಗಿದೆ.

”ಮಹಿಳೆಯರನ್ನು ಗೌರವಿಸದ ದೇಶ ಎಂದಿಗೂ ಪ್ರಗತಿ ಹೊಂದಲು ಸಾಧ್ಯವಿಲ್ಲ. ಅಧಿಕಾರದ ದುರಾಸೆಯಲ್ಲಿ ಬಿಜೆಪಿ ಮಹಿಳೆಯರ ಘನತೆ ಮತ್ತು ದೇಶದ ಆತ್ಮಗೌರವದೊಂದಿಗೆ ಆಟವಾಡುತ್ತಿದೆ” ಎಂದು ರಾಹುಲ್ ಟೀಕಿಸಿದ್ದಾರೆ.

”ಅಧಿಕಾರಕ್ಕಾಗಿ ಬಿಜೆಪಿ ಏನು ಬೇಕಾದರೂ ಮಾಡಲು ಸಿದ್ಧವಿದೆ. ಮಹಿಳೆಯರನ್ನು ಕೆಟ್ಟ ರೀತಿಯಲ್ಲಿ ನಡೆಸುವುದಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂಬ ಸ್ಪಷ್ಟ ಸಂದೇಶನವನ್ನು ಬಿಜೆಪಿಗೆ ರವಾನಿಸುವ ಅಗತ್ಯವಿದೆ” ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಅಧಿಕಾರಕ್ಕಾಗಿ BJP-RSSನವರು ಮಣಿಪುರವನ್ನು ಸುಡುತ್ತಾರೆ, ಇಡೀ ದೇಶವನ್ನೂ ಸುಡುತ್ತಾರೆ: ರಾಹುಲ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ : ದುರ್ಗಾ ಪೂಜೆಗಳಲ್ಲಿ ಎಡಪಕ್ಷಗಳ ಪುಸ್ತಕ ಮಳಿಗೆಗಳ ಮೇಲೆ ದಾಳಿ

ಶನಿವಾರ (ಅಕ್ಟೋಬರ್ 17) ಸಂಜೆ ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್‌ನ (ಕೆಎಂಸಿ) ತಂಡವೊಂದು ನಾಲ್ಕು ದಿನಗಳ ಹಿಂದೆ ಜಾದವ್‌ಪುರದಲ್ಲಿ ಸ್ಥಾಪಿಸಲಾಗಿದ್ದ ಪುಸ್ತಕ ಮಳಿಗೆಯನ್ನು ಧ್ವಂಸಗೊಳಿಸಲು ಆಗಮಿಸಿದಾಗ, ಕೇಂದ್ರ ಸಶಸ್ತ್ರ ಪಡೆಗಳು ಮತ್ತು ಪೊಲೀಸರು ಆ...

ಎಸ್‌ಐಆರ್ ಗೊಂದಲ: ರದ್ದಾಗಿರುವ ಮತದಾರರನ್ನು ಮರಳಿ ಸೇರಿಸಲು ‘ಫಾರ್ಮ್ 6’ ತಿದ್ದುಪಡಿಗೆ ಮಹಾರಾಷ್ಟ್ರ ಪ್ರಸ್ತಾಪ; ಜೈಲು ಶಿಕ್ಷೆಯ ಭೀತಿಯಲ್ಲಿ ಜನರು!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ ಹೆಸರು ರದ್ದಾಗಿರುವ ಹಳೆಯ ಮತದಾರರನ್ನು ಮರಳಿ ಪಟ್ಟಿಗೆ ಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿ ಭಾರಿ ಆಡಳಿತಾತ್ಮಕ ಮತ್ತು ಕಾನೂನು ತೊಡಕು ಎದುರಾಗಿದೆ. ಎಸ್‌ಐಆರ್ ಪರಿಷ್ಕರಣೆಯಲ್ಲಿ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ : ಬೆಂಗಳೂರಿನ ಟೌನ್‌ಹಾಲ್ ಬಳಿ ಪ್ರತಿಭಟಿಸಿದವರ ಬಂಧನ, ಬಿಡುಗಡೆ

ಶನಿವಾರ (ಅಕ್ಟೋಬರ್ 17) ಬೆಂಗಳೂರಿನ ಟೌನ್ ಹಾಲ್ ಬಳಿ ಮತದಾರರ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ಪ್ರಕ್ರಿಯೆಯ ವಿರುದ್ಧ ಪ್ರತಿಭಟನೆ ನಡೆಸಿದ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಆಂಧ್ರದಲ್ಲಿ ಮುಂದುವರಿದ ಟಿಡಿಪಿ-ವೈಎಸ್‌ಆರ್‌ಸಿಪಿ ಸಂಘರ್ಷ : ಪರಿಸ್ಥಿತಿ ಹತೋಟಿಗೆ ತರಲು ಗಾಳಿಯಲ್ಲಿ ಗುಂಡು ಹಾರಿಸಿದ ಕಡಪಾ ಪೊಲೀಸರು

ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಶನಿವಾರ (ಅಕ್ಟೋಬರ್ 17) ಆಂಧ್ರ ಪ್ರದೇಶದಲ್ಲಿ ರಾಜಕೀಯ ಸಂಘರ್ಷಗಳು ಮುಂದುವರಿದಿವೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್‌ಸಿಪಿ) ಭದ್ರಕೋಟೆಯಾಗಿರುವ ವೈಎಸ್ಆರ್ ಕಡಪ ಜಿಲ್ಲೆಯ ಪುಲಿವೆಂದುಲದಲ್ಲಿ...

ಮಧ್ಯಪ್ರದೇಶ: ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಲಾರಿ; 14 ಸಾವು, ಹಲವರಿಗೆ ಗಂಭೀರ ಗಾಯ

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಶೀತಲಾ ಮಾತಾ ದೇವಸ್ಥಾನದ ಬಳಿ ನವರಾತ್ರಿ ಉತ್ಸವದ ಸಂಭ್ರಮದಲ್ಲಿದ್ದ ಭಕ್ತಾದಿಗಳ ಮೇಲೆ ಅತಿವೇಗವಾಗಿ ಬಂದ ಲಾರಿಯೊಂದು ನುಗ್ಗಿದ ಪರಿಣಾಮ ಕನಿಷ್ಠ 14 ಜನರು ದಾರುಣವಾಗಿ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ...

ಕೋಲ್ಕತ್ತಾ ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 19ಕ್ಕೆ ಏರಿಕೆ; ಏಳು ಮಂದಿಯ ಬಂಧನ

ಕೋಲ್ಕತ್ತಾದ ಸಮುದಾಯ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಶನಿವಾರ (ಅ.17) ಸಂಜೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಸುಮಾರು 25 ಮಂದಿ ಗಾಯಗೊಂಡಿದ್ದು, ಕೋಲ್ಕತ್ತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ...

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...