ಮಹಾರಾಷ್ಟ್ರದ ಥಾಣೆಯ ಶಹಾಪುರ ಬಳಿ ಹೆದ್ದಾರಿ ಕಾಮಗಾರಿ ನಡೆಯುವಾಗ ಕ್ರೇನ್ ಅವಘಡ ಸಂಭವಿಸಿ ಕನಿಷ್ಠ 18 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಸಮೃದ್ಧಿ ಎಕ್ಸ್‌ಪ್ರೆಸ್ ಹೆದ್ದಾರಿಯ ಮೂರನೇ ಹಂತದ ನಿರ್ಮಾಣದಲ್ಲಿ ಗರ್ಡರ್ ಲಾಂಚಿಂಗ್ ಯಂತ್ರವನ್ನು ಬಳಸಲಾಗುತ್ತಿತ್ತು. ಸೋಮವಾರ ರಾತ್ರಿ 11 ಗಂಟೆಯ ಸುಮಾರಿಗೆ ಅದು ಕುಸಿದು ಕೆಲಸದಲ್ಲಿ ನಿರತರಾಗಿದ್ದ ಕಾರ್ಮಿಕರ ಮೇಲೆ ಬಿದ್ದು ಭಾರೀ ಅವಘಡ ಸಂಭವಿಸಿದೆ.
ಶಹಾಪುರ ತಾಲೂಕಿನ ಮುಂಬೈ ನಾಸಿಕ್ ಹೆದ್ದಾರಿಯಿಂದ 5ರಿಂದ 6 ಕಿ.ಮೀ ದೂರದಲ್ಲಿರುವ ಸರ್ಲಂಬೆ ಗ್ರಾಮದ ವ್ಯಾಪ್ತಿಯಲ್ಲಿ ಸಮೃದ್ಧಿ ಎಕ್ಸ್ ಪ್ರೆಸ್ ಹೆದ್ದಾರಿಯ ಕಾಮಗಾರಿ ನಡೆಯುತ್ತಿತ್ತು. 17 ಕಾರ್ಮಿಕರು ಮತ್ತು 9 ಎಂಜಿನಿಯರ್‌ಗಳ ಸಮ್ಮುಖದಲ್ಲಿ ಕೆಲಸ ಪ್ರಾರಂಭವಾಗಿತ್ತು. ಆಗ ಇದ್ದಕ್ಕಿದ್ದಂತೆ ಲಾಂಚರ್ ಯಂತ್ರ ಗರ್ಡರ್ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಿದ್ದಿದೆ. ಘಟನೆ ತಿಳಿದ ತಕ್ಷಣ ಸ್ಥಳೀಯ ಗ್ರಾಮಸ್ಥರು ನೆರವಿಗೆ ಧಾವಿಸಿದ್ದರು ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ ಮಹಾರಾಷ್ಟ್ರ ಸರ್ಕಾರ ತಲಾ 5 ಲಕ್ಷ ಪರಿಹಾರ ಘೋಷಿಸಿದರೆ, ಪ್ರಧಾನಿ ಮೋದಿಯವರು ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.
ಮಹಾರಾಷ್ಟ್ರದ ಶಹಾಪುರದಲ್ಲಿ ನಡೆದ ಭೀಕರ ದುರ್ಘಟನೆಯಿಂದ ನೋವಾಗಿದೆ. ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತೀವ್ರ ಸಂತಾಪ ಸಲ್ಲಿಸುತ್ತೇನೆ. ಎನ್‌ಡಿಆರ್‌ಎಫ್ ಮತ್ತು ಸ್ಥಳೀಯ ಆಡಳಿತವು ಅಪಘಾತದ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದೆ ಮತ್ತು ಸಂತ್ರಸ್ತರಿಗೆ ಸರಿಯಾದ ಸಹಾಯವನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ.ಗಳನ್ನು ಮೃತರ ಸಂಬಂಧಿಕರಿಗೆ ನೀಡಲಾಗುತ್ತದೆ. ಗಾಯಾಳುಗಳಿಗೆ ರೂ. 50,000 ನೀಡಲಾಗುತ್ತದೆ ಎಂದು ಪ್ರಧಾನಿ ತಿಳಿಸಿದ್ದಾರೆ.
Pained by the tragic mishap in Shahapur, Maharashtra. My deepest condolences to the families of those who lost their lives. Our thoughts and prayers are with those who are injured. NDRF and local administration are working at the site of the mishap and all possible measures are…
— PMO India (@PMOIndia) August 1, 2023
ಮಹಾರಾಷ್ಟ್ರ ಸರ್ಕಾರವು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡಲಿದ್ದು, ಗಾಯಾಳುಗಳ ಸಂಪೂರ್ಣ ಚಿಕಿತ್ಸೆಯನ್ನು ಭರಿಸುತ್ತದೆ ಎಂದು ಸಿಎಂ ಏಕನಾಥ್ ಶಿಂಧೆ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಸಮಾಜ ಕಲ್ಯಾಣ ಹಾಸ್ಟೆಲ್‌ಗಳ ದುರವಸ್ಥೆಗೆ ವಿದ್ಯಾರ್ಥಿಗಳ ಕಣ್ಣೀರು; ಗಮನ ಹರಿಸುವುದೇ ಸರ್ಕಾರ?


