Homeಮುಖಪುಟಮೋದಿ ಸರ್‌ನೇಮ್ ಪ್ರಕರಣ: ರಾಹುಲ್ ಗಾಂಧಿ ಮೇಲಿನ ಶಿಕ್ಷೆಗೆ ತಡೆ ನೀಡಿದ ಸುಪ್ರೀಂ ಕೋರ್ಟ್

ಮೋದಿ ಸರ್‌ನೇಮ್ ಪ್ರಕರಣ: ರಾಹುಲ್ ಗಾಂಧಿ ಮೇಲಿನ ಶಿಕ್ಷೆಗೆ ತಡೆ ನೀಡಿದ ಸುಪ್ರೀಂ ಕೋರ್ಟ್

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೋದಿ ಸರ್‌ನೇಮ್ ಬಗ್ಗೆ ನೀಡಿದ ಹೇಳಿಕೆಗೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆ ನೀಡಲಾಗಿತ್ತು. ಶುಕ್ರವಾರ ರಾಹುಲ್ ವಿರುದ್ದದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ ಎಂದು ಲೈವ್ ಲಾ ವರದಿ ಮಾಡಿದೆ.

2019 ರ ಲೋಕಸಭೆ ಚುನಾವಣೆಯಲ್ಲಿ ಮಾಡಿದ ಭಾಷಣದಲ್ಲಿ ನೀಡಲಾದ ಹೇಳಿಕೆಗಳಿಗಾಗಿ ಸೂರತ್ ನ್ಯಾಯಾಲಯವು ಮಾರ್ಚ್ 23ರಂದು ಮಾಜಿ ಕಾಂಗ್ರೆಸ್ ಮುಖ್ಯಸ್ಥರನ್ನು ದೋಷಿ ಎಂದು ಘೋಷಿಸಿತ್ತು. ಈ ಪ್ರಕರಣದಲ್ಲಿ ನ್ಯಾಯಾಲಯವು ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಗರಿಷ್ಠ ಶಿಕ್ಷೆಯನ್ನು ನೀಡಿತು, ಇದು ಅವರನ್ನು ಲೋಕಸಭಾ ಸಂಸದರಾಗಿ ತಕ್ಷಣವೇ ಅನರ್ಹಗೊಳಿಸಲು ಕಾರಣವಾಯಿತು.

ಪ್ರಜಾಪ್ರತಿನಿಧಿ ಕಾಯಿದೆ, 1951 ರ ಸೆಕ್ಷನ್ 8(3) ರ ಅಡಿಯಲ್ಲಿ, ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಗೆ ಜೈಲು ಶಿಕ್ಷೆಗೆ ಗುರಿಯಾದ ಶಾಸಕನನ್ನು ಅಪರಾಧ ಸಾಬೀತಾದ ದಿನಾಂಕದಿಂದ ಆರು ವರ್ಷಗಳ ಅವಧಿಯ ನಂತರ ಅನರ್ಹಗೊಳಿಸಲಾಗುತ್ತದೆ.

ಶಿಕ್ಷೆಗೆ ತಡೆ ಕೋರಿ ಗಾಂಧಿ ಈ ಹಿಂದೆ ಗುಜರಾತ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದಾಗ್ಯೂ, ಜುಲೈ 7 ರಂದು, ವೀರ್ ಸಾವರ್ಕರ್ ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಅವರು ಸಲ್ಲಿಸಿದ ಪ್ರಕರಣ ಸೇರಿದಂತೆ ಕನಿಷ್ಠ 10 ಕ್ರಿಮಿನಲ್ ಪ್ರಕರಣಗಳು ರಾಹುಲ್ ವಿರುದ್ಧ ಬಾಕಿ ಉಳಿದಿವೆ ಎಂದು ಗಮನಿಸಿದ ಹೈಕೋರ್ಟ್ ಸೂರತ್ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿತ್ತು. ಲಂಡನ್‌ನಲ್ಲಿ ಹಿಂದುತ್ವ ಸಿದ್ಧಾಂತದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಸತ್ಯಕಿ ಸಾವರ್ಕರ್ ಅವರು ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಬುಧವಾರ, ರಾಹುಲ್ ಗಾಂಧಿ ಅವರು ”ತಾವು ಯಾವುದೇ ಅಪರಾಧದಲ್ಲಿ ತಪ್ಪಿತಸ್ಥನಲ್ಲ ಮತ್ತು ಅವರ ಹೇಳಿಕೆಗೆ ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿದ್ದರು. ಕ್ಷಮೆ ಯಾಚಿಸಬೇಕೆಂದಿದ್ದರೆ ಈ ಮೊದಲೇ ಮಾಡುತ್ತಿದ್ದೆ ಎಂದೂ ಅವರು ಹೇಳಿದ್ದಾರೆ.

ಸಂಸದರಾಗಿ ಮತ್ತು ವಿರೋಧ ಪಕ್ಷದ ನಾಯಕರಾಗಿ ಆಡಳಿತ ಮಂಡಳಿಯ ನಡವಳಿಕೆ ಮತ್ತು ಕಾರ್ಯಕ್ಷಮತೆಯನ್ನು ವಿಮರ್ಶಾತ್ಮಕವಾಗಿ ಮೌಲ್ಯಮಾಪನ ಮಾಡುವುದು ಅಗತ್ಯ ಎಂದುವ ರಾಹುಲ್ ಗಾಂಧಿ ಹೇಳಿದ್ದರು.

ಅವರು ತಮ್ಮ ಮೇಲಿನ ಶಿಕ್ಷೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ, ಪಿಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಸದ್ಯ ಅವರ ಮೇಲಿನ ಶಿಕ್ಷೆಗೆ ತಡೆಯಾಜ್ಞೆ ನೀಡಿದೆ.

ರಾಹುಲ್ ಗಾಂಧಿಯನ್ನು ಪ್ರತಿನಿಧಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ವಿಚಾರಣೆ ಪೂರ್ಣಗೊಂಡಿದೆ ಮತ್ತು ರಾಹುಲ್‌ ಗಾಂಧಿಗೆ ಶಿಕ್ಷೆ ವಿಧಿಸಲಾಗಿದೆ, ಆದರೂ ಇದುವರೆಗೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದರು.

ಇದನ್ನೂ ಓದಿ; ಶಿವಾಜಿನಗರದಲ್ಲಿ ವಾಟರ್ ಟ್ಯಾಂಕ್ ಕುಸಿದು ಬಿದ್ದ ಪರಿಣಾಮ ಮೂವರ ಸಾವು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ...

0
ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ ಇಲಾಖೆಯಲ್ಲಿನ ವಸತಿ ಯೋಜನೆಯಲ್ಲಿನ ಲೋಪದೋಷವನ್ನು ಕ್ಯಾಬಿನೆಟ್ ಸಚಿವರೋರ್ವರು ಬಹಿರಂಗಪಡಿಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವಾಗಿದೆ...