ದಕ್ಷಿನ ಕನ್ನಡ ಜಿಲ್ಲೆಯ ಮೂಲ್ಕಿಯಲ್ಲಿ ನೆರೆಮನೆಯ ಮಹಿಳೆಯೊಬ್ಬರು ಸ್ನಾನ ಮಾಡುತ್ತಿದ್ದ ವೇಳೆ ವಿಡಿಯೋ ಚಿತ್ರೀಕರಿಸಿದ್ದ ಸಂಘಪರಿವಾರದ ಕಾರ್ಯಕರ್ತ ಸುಮಂತ್ ಪೂಜಾರಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ಕಳೆದ ಬುಧವಾರ ಮಂಗಳೂರು ಕಮಿಷನರೇಟ್‌ನ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದಾಗಿ ವರದಿಯಾಗಿದ್ದು, ಆರೋಪಿ ಯುವಕನನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು ಎಂದು ವರದಿಯಾಗಿದೆ.
ಘಟನೆಯು ಮಂಗಳೂರು ಸಮೀಪದ ಮುಲ್ಕಿಯ ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಕ್ಷಿಕೆರೆ ಹೊಸಕಾಡು ಎಂಬಲ್ಲಿ ಬುಧವಾರ ರಾತ್ರಿ 11 ಗಂಟೆಗೆ ನಡೆದಿದ್ದು, ಶುಕ್ರವಾರ ತಡವಾಗಿ ಬೆಳಕಿಗೆ ಬಂದಿದೆ.
ಬಂಧಿತ ಯುವಕನನ್ನು ಮುಲ್ಕಿ ಸಮೀಪದ ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಎಂದು ಗುರುತಿಸಲಾಗಿದ್ದು, ಈತ ಹಿಂದೂ ಜಾಗರಣ ವೇದಿಕೆಯ ಸ್ಥಳೀಯ ಘಟಕದ ಸಕ್ರಿಯ ಕಾರ್ಯಕರ್ತ ಎಂದು ತಿಳಿದು ಬಂದಿದೆ.
ಆರೋಪಿ ಸುಮಂತ್ ತನ್ನ ನೆರೆಮನೆಯ ಮಹಿಳೆಯೊಬ್ಬರು ಸ್ನಾನ ಮಾಡುವುದನ್ನು ವೀಡಿಯೊ ಮಾಡುತ್ತಿದ್ದ ಎನ್ನಲಾಗಿದೆ. ಈ ವೇಳೆ ಮೊಬೈಲ್ ಕ್ಯಾಮರಾ ಗಮನಿಸಿದ ಮಹಿಳೆ ಕಿರುಚಾಡಿದ್ದು, ಈ ವೇಳೆ ನೆರೆಮನೆಯವರು ಸುಮಂತ್‌ನನ್ನು ಹಿಡಿದು ಧಳಿಸಿದ್ದಾರೆ ಎನ್ನಲಾಗಿದೆ.
ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 354(ಸಿ) ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66 (ಸಿ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆರೋಪಿಯನ್ನಉ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ‘ಜನತಾ ನ್ಯಾಯಾಲಯದ ಮುಂದೆ ಬಯಲಾದ ಹೆಗ್ಗಡೆ ಕರ್ಮಕಾಂಡ’: ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಗಸ್ಟ್ 10ಕ್ಕೆ



Avanu sangataneya karyakartha alla, avanannu sangataneyaru hididdu police kottadu, police report nodi ra