Homeಮುಖಪುಟಹರಿಯಾಣ: ಮುಸ್ಲಿಂ ವಲಸೆ ಕಾರ್ಮಿಕರ ಕಟ್ಟಡ ನೆಲಸಮ ಕಾರ್ಯಾಚರಣೆಗೆ ಹೈಕೋರ್ಟ್ ತಡೆ

ಹರಿಯಾಣ: ಮುಸ್ಲಿಂ ವಲಸೆ ಕಾರ್ಮಿಕರ ಕಟ್ಟಡ ನೆಲಸಮ ಕಾರ್ಯಾಚರಣೆಗೆ ಹೈಕೋರ್ಟ್ ತಡೆ

- Advertisement -
- Advertisement -

ಹರಿಯಾಣದ ಬಿಜೆಪಿ ಸರ್ಕಾರವು ನುಹ್ ಜಿಲ್ಲೆಯಲ್ಲಿನ ವಲಸೆ ಕಾರ್ಮಿಕರ ಕಟ್ಟಡ ಹಾಗೂ ಗುಡಿಸಲುಗಳನ್ನು ನೆಲಸಮ ಮಾಡುವ ಕಾರ್ಯಾಚರಣೆ ನಡೆಸುತ್ತಿದ್ದು, ಈ ಕಾರ್ಯಾಚರಣೆಗೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಸೋಮವಾರ ತಡೆ ನೀಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಗುರುವಾರದಿಂದ ನಾಲ್ಕು ದಿನಗಳ ಕಾಲ, ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಅಕ್ರಮ ಮನೆಗಳು ಮತ್ತು ಅಂಗಡಿಗಳನ್ನು ನೆಲಸಮಗೊಳಿಸುತ್ತಿದ್ದಾರೆ, ಅವುಗಳಲ್ಲಿ ಹೆಚ್ಚಿನವು ಮುಸ್ಲಿಂ ವಲಸೆ ಕಾರ್ಮಿಕರಿಗೆ ಸೇರಿದವುಗಳಾಗಿವೆ.

ಕಳೆದ ವಾರ ನುಹ್‌ನಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರದ ವಿರುದ್ಧದ ಕ್ರಮವಾಗಿ ಈ ಕಾರ್ಯಾಚರಣೆ ನಡೆಸಲಾಯಿತು. ನುಹ್ ಮತ್ತು ನೆರೆಯ ಗುರುಗ್ರಾಮ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರು ಹೋಮ್ ಗಾರ್ಡ್‌ಗಳು, ಮಸೀದಿಯ ಇಮಾಮ್ ಮತ್ತು ಬಜರಂಗದಳದ ಸದಸ್ಯ ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ.

ಸೋಮವಾರ, ನ್ಯಾಯಮೂರ್ತಿ ಜಿಎಸ್ ಸಂಧವಾಲಿಯಾ ಮತ್ತು ನ್ಯಾಯಮೂರ್ತಿ ಹರ್‌ಪ್ರೀತ್ ಕೌರ್ ಜೀವನ್ ಅವರ ವಿಭಾಗೀಯ ಪೀಠವು, ಈ ವಿಷಯವನ್ನು ಕೈಗೆತ್ತಿಕೊಂಡಿತು. ಈ ವಿಚಾರದಲ್ಲಿ ಪ್ರತಿಕ್ರಿಯೆ ನೀಡುವಂತೆ ಮನೋಹರ್ ಲಾಲ್ ಖಟ್ಟರ್ ಸರ್ಕಾರಕ್ಕೆ ನ್ಯಾಯಮೂರ್ತಿಗಳು ನೋಟಿಸ್ ಜಾರಿ ಮಾಡಿದ್ದಾರೆ. ವಿವರವಾದ ಆದೇಶವನ್ನು ಇನ್ನೂ ನೀಡಲಾಗಿಲ್ಲ, ಮತ್ತು ನ್ಯಾಯಾಲಯವು ಪ್ರಕರಣವನ್ನು ಒಂದು ದಿನದ ನಂತರ ಮತ್ತೆ ಕೈಗೆತ್ತಿಕೊಳ್ಳಲಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜುಲೈ 31 ರಂದು, ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಬ್ರಿಜ್ ಮಂಡಲ್ ಜಲಾಭಿಷೇಕ ಯಾತ್ರೆಯ ಮೆರವಣಿಗೆಯಲ್ಲಿ ಮೊದಲು ಕೋಮು ಘರ್ಷಣೆಗಳು ಭುಗಿಲೆದ್ದವು. ಆನಂತರ ಅದು ತ್ವರಿತವಾಗಿ ಜಿಲ್ಲೆಯಾದ್ಯಂತ ಹರಡಿತು.

ಗುರುಗ್ರಾಮ್‌ನಲ್ಲಿ ಹಿಂದೂ ಗುಂಪುಗಳು ಅತಿರೇಕಕ್ಕೆ ಹೋದವು. ಸೆಕ್ಟರ್ 57 ರಲ್ಲಿ ಮಸೀದಿಯನ್ನು ಸುಟ್ಟುಹಾಕಿದರು. ಅದರ ಉಪ ಇಮಾನನ್ನು ಕೊಂದರು ಮತ್ತು ಮರುದಿನ ಸೆಕ್ಟರ್ 70ರಲ್ಲಿ ಮುಸ್ಲಿಂ ವಲಸೆ ಕಾರ್ಮಿಕರ ಅಂಗಡಿಗಳು ಮತ್ತು ಗುಡಿಸಲುಗಳಿಗೆ ಬೆಂಕಿ ಹಚ್ಚಿದರು.

ಗುರುವಾರ, ಹರಿಯಾಣ ಸರ್ಕಾರವು ಸರ್ಕಾರಿ ಭೂಮಿಯನ್ನು ಅತಿಕ್ರಮಣ ಮಾಡಿದ ಆರೋಪದ ಮೇಲೆ ಜಿಲ್ಲೆಯ ಟೌರು ಪಟ್ಟಣದಲ್ಲಿ 250ಕ್ಕೂ ಹೆಚ್ಚು ಮುಸ್ಲಿಂ ವಲಸೆ ಕಾರ್ಮಿಕರ ಗುಡಿಸಲುಗಳನ್ನು ನೆಲಸಮಗೊಳಿಸಿದೆ. ಶುಕ್ರವಾರ ಇದೇ ಆಧಾರದ ಮೇಲೆ ಹಲವಾರು ಮನೆಗಳು ಮತ್ತು ಅಂಗಡಿಗಳನ್ನು ನೆಲಸಮಗೊಳಿಸಲಾಗಿದೆ.

ಶನಿವಾರ, ನಲ್ಹಾರ್‌ನ ಶಹೀದ್ ಹಸನ್ ಖಾನ್ ಮೇವಾಟಿ ಸರ್ಕಾರಿ ವೈದ್ಯಕೀಯ ಕಾಲೇಜು ಬಳಿ ಸುಮಾರು ಒಂದು ಡಜನ್ ಅಂಗಡಿಗಳನ್ನು, ಹೆಚ್ಚಾಗಿ ಔಷಧಾಲಯಗಳನ್ನು ಧ್ವಂಸಗೊಳಿಸಲಾಯಿತು. ಭಾನುವಾರ, ನುಹ್‌ನಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದೆ ಎಂಬ ಆರೋಪದ ಮೇಲೆ ಹೋಟೆಲ್‌ನ್ನು ಬುಲ್ಡೋಜರ್‌ನಿಂದ ನೆಲಸಮಗೊಳಿಸಲಾಯಿತು.

ಇದನ್ನೂ ಓದಿ: ಹರಿಯಾಣ: ಪ್ರಚೋದನಕಾರಿ ವಿಡಿಯೋ ಶೇರ್ ಮಾಡುತ್ತಿರುವ ಬಲಪಂಥೀಯ ಮಾಧ್ಯಮಗಳಿಗೆ ಡಿಜಿಪಿ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...