Homeಕರ್ನಾಟಕಬಳ್ಳಾರಿ:ಗ್ರಾ.ಪಂ.ಅಧ್ಯಕ್ಷರಾಗಿ ಆಯ್ಕೆಯಾದ ಟ್ರಾನ್ಸ್ ಜಂಡರ್

ಬಳ್ಳಾರಿ:ಗ್ರಾ.ಪಂ.ಅಧ್ಯಕ್ಷರಾಗಿ ಆಯ್ಕೆಯಾದ ಟ್ರಾನ್ಸ್ ಜಂಡರ್

- Advertisement -
- Advertisement -

ಬಳ್ಳಾರಿಯ ಸಂಡೂರು ತಾಲೂಕಿನ ಚೋರನೂರು ಗ್ರಾಮ ಪಂಚಾಯತ್ ಗೆ ಟ್ರಾನ್ಸ್ ಜಂಡರ್  ಸಿ.ಆಂಜಿನಮ್ಮ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಟ್ರಾನ್ಸ್ ಜಂಡರ್ ಓರ್ವರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದು.

ಪಂಚಾಯತ್ ಅಧ್ಯಕ್ಷ ಸ್ಥಾನ ಈ ಭಾರಿ ಪರಿಶಿಷ್ಟ ವರ್ಗಕ್ಕೆ ಮೀಸಲಾಗಿತ್ತು.ಈ ಸ್ಥಾನಕ್ಕೆ ಎರಡು ಬಾರಿ ಸದಸ್ಯರಾದ ಆಂಜಿನಮ್ಮ ಅವರನ್ನು ಕಣಕ್ಕಿಳಿಸಲಾಗಿತ್ತು. ಗ್ರಾಮ ಪಂಚಾಯತ್ ನ 19 ಸದಸ್ಯರು ಸರ್ವಾನುಮತದಿಂದ ಅವರನ್ನು ಆಯ್ಕೆ ಮಾಡಿದ್ದಾರೆ.

ಮೂವರು ಅಭ್ಯರ್ಥಿಗಳು ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದರು.ಆಂಜಿನಮ್ಮ ಎರಡು ದಶಕಗಳಿಂದ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಹೀಗಾಗಿ ಅವರು ಗ್ರಾಮದ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂದು ಸಿ.ಆಂಜಿನಮ್ಮ ಅವರಿಗೆ ಅವಕಾಶ ಕೊಡಲಾಗಿದೆ.

ಈ ಬಗ್ಗೆ ಮಾತನಾಡಿದ ಆಂಜಿನಮ್ಮ, ಚುನಾವಣೆಗೆ ಸ್ಪರ್ಧಿಸಲು ಇಷ್ಟವಿಲ್ಲದಿದ್ದರೂ, ಗ್ರಾಮದ ಹಿರಿಯರ ಮಾತಿಗೆ ಬೆಲೆ ಕೊಟ್ಟು ಚುನಾವಣೆಗೆ ಸ್ಪರ್ಧಿಸಿದೆ. ಅವರ ವಿಶ್ವಾಸಕ್ಕೆ ಚ್ಯುತಿ ಬರದಂತೆ ಕೆಲಸ ನಿರ್ವಹಿಸುತ್ತೇನೆ  ಮತ್ತು ಮೂಲ ಸೌಕರ್ಯಗಳನ್ನು ಒದಗಿಸಲು ಶ್ರಮಿಸುವುದಾಗಿ ಹೇಳಿದ್ದಾರೆ.

ಇದನ್ನು ಓದಿ:ಪ್ರಧಾನಿಯನ್ನು ಲೋಕಸಭೆಗೆ ಎಳೆದು ತರಲು ಅವಿಶ್ವಾಸ ನಿರ್ಣಯ ಮಂಡಿಸಬೇಕಾಯಿತು: ಟಿಎಂಸಿ ನಾಯಕ ಒ’ಬ್ರಿಯಾನ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...