Homeಮುಖಪುಟಮಹಾತ್ಮ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿ ಬಂಧನ

ಮಹಾತ್ಮ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿ ಬಂಧನ

- Advertisement -
- Advertisement -

ಮಹಾತ್ಮ ಗಾಂಧಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ ಅವರು ಕ್ವಿಟ್ ಇಂಡಿಯಾ ದಿನದ ಸ್ಮರಣಾರ್ಥವಾಗಿ ಕ್ರಾಂತಿ ಮೈದಾನಕ್ಕೆ ತೆರಳುತ್ತಿದ್ದಾಗ ಮುಂಬೈನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ತುಷಾರ್ ಗಾಂಧಿ ಅವರು ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದು,​​ ”ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ, ನಾನು ಆಗಸ್ಟ್ 9ರಂದು ನಡೆದ ಕ್ವಿಟ್ ಇಂಡಿಯಾ ದಿನದ ನೆನಪಿಗಾಗಿ ಕ್ರಾಂತಿ ಮೈದಾನ ಮನೆಯಿಂದ ಹೊರಟಾಗ ಸಾಂತಾಕ್ರೂಜ್ ಪೊಲೀಸ್ ಬಂಧಿಸಿದ್ದಾರೆ. ಈ ದಿನದಂದೇ ನನ್ನನ್ನೂ ಬಂಧಿಸಿರುವುದು ನನಗೆ ಹೆಮ್ಮೆ ಇದೆ” ಎಂದು ಹೇಳಿದ್ದಾರೆ.

ಪೊಲೀಸ ವರದಿ ಪ್ರಕಾರ ಕ್ರಾಂತಿ ಮೈದಾನದಲ್ಲಿ ಮೌನ ಮೆರವಣಿಗೆ ಮಾಡಲು ಅವಕಾಶ ಇಲ್ಲ, ಆದರೆ ಈ ಯೋಜನೆಯನ್ನು ಅವರು ಹಾಕಿಕೊಂಡಿದ್ದಾರೆ. ಇದು ‘ಕಾನೂನು ಮತ್ತು ಸುವ್ಯವಸ್ಥೆ ಉಲ್ಲಂಘನೆ ಎಂದು ಹೇಳಿದ್ದಾರೆ. ಇನ್ನು ತುಷಾರ್ ಗಾಂಧಿ, ಒಂದು ವೇಳೆ ನನಗೆ ಠಾಣೆಯಿಂದ ಬಿಡುಗಡೆ ನೀಡಿದರೆ ನಾನು ಖಂಡಿತ ಕ್ರಾಂತಿ ಮೈದಾನಕ್ಕೆ ಹೋಗುತ್ತೇನೆ. ಈ ದಿನವನ್ನು ಸ್ಮರಿಸುವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಮಹಾತ್ಮಾ ಗಾಂಧಿಯವರ ಮತ್ತೊಬ್ಬ ಮರಿ ಮೊಮ್ಮಗ ಅರುಣ್ ಮಣಿಲಾಲ್ ಅವರು, ”ಕ್ವಿಟ್ ಇಂಡಿಯಾ ಚಳುವಳಿಯ ಆರಂಭದ ನೆನಪಿಗಾಗಿ ಪ್ರತಿ ವರ್ಷ ಆಗಸ್ಟ್ 9 ರಂದು ಕ್ವಿಟ್ ಇಂಡಿಯಾ ದಿನವನ್ನು ಆಚರಿಸಲಾಗುತ್ತದೆ. ಬ್ರಿಟಿಷರು ಭಾರತವನ್ನು ತೊರೆಯುವಂತೆ ಒತ್ತಾಯಿಸುವ ನಿರ್ಣಯವನ್ನು ಕಾಂಗ್ರೆಸ್ ಈ ದಿನ ಅಂಗೀಕರಿಸಿತು. ಇದರಲ್ಲಿ ಭಾಗವಹಿಸುವುದು ಅಥವಾ ಸ್ಮರಿಸುವುದು ಯಾವ ತಪ್ಪು ಇಲ್ಲ” ಎಂದು ಹೇಳಿದ್ದಾರೆ.

ಕ್ವಿಟ್ ಇಂಡಿಯಾ ಚಳುವಳಿಯು ಆಗಸ್ಟ್ ಚಳುವಳಿ ಎಂದು ಪ್ರಸಿದ್ಧವಾಗಿದೆ, ಇದು ಸ್ವಾತಂತ್ರ್ಯಕ್ಕಾಗಿ ಭಾರತದ ಹೋರಾಟದಲ್ಲಿ ಒಂದು ಪ್ರಮುಖ ಅಧ್ಯಾಯವಾಗಿದೆ. ಕ್ವಿಟ್ ಇಂಡಿಯಾ ಚಳುವಳಿಯ 81ನೇ ವಾರ್ಷಿಕೋತ್ಸವ ಇದಾಗಿದೆ. ಕ್ವಿಟ್ ಇಂಡಿಯಾ ಚಳುವಳಿ ದಿನವನ್ನು ಪ್ರತಿ ವರ್ಷ ಆಗಸ್ಟ್ 9 ರಂದು ಸ್ಮರಿಸಲಾಗುತ್ತದೆ. ಈ ದಿನವು ಭಾರತೀಯ ಜನತೆಯ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಮಾಡಿದ ತ್ಯಾಗಕ್ಕೆ ಗೌರವವಾಗಿದೆ.

‘ಭಾರತ್ ಚೋಡೋ ಆಂದೋಲನ್’, ‘ಆಗಸ್ಟ್ ಚಳುವಳಿ’ ಅಥವಾ ‘ಆಗಸ್ಟ್ ಕ್ರಾಂತಿ’ ಎಂದೂ ಕರೆಯಲ್ಪಡುವ ಕ್ವಿಟ್ ಇಂಡಿಯಾ ಚಳುವಳಿಯು ಎರಡನೇ ಮಹಾಯುದ್ಧದ ಸಮಯದಲ್ಲಿ ಆಗಸ್ಟ್ 9, 1942 ರಂದು ಪ್ರಾರಂಭವಾಯಿತು. ಮಹಾತ್ಮಾ ಗಾಂಧಿ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ನೇತೃತ್ವದಲ್ಲಿ, ಇದು ಭಾರತದಲ್ಲಿ ಬ್ರಿಟಿಷ್ ಆಳ್ವಿಕೆಯನ್ನು ಕೊನೆಗೊಳಿಸುವ ಗುರಿಯನ್ನು ಹೊಂದಿತ್ತು. ಆಂದೋಲನವು ಬಾಂಬೆಯ (ಈಗ ಮುಂಬೈ) ಗೋವಾಲಿಯಾ ಟ್ಯಾಂಕ್ ಮೈದಾನದಲ್ಲಿ ಪ್ರಾರಂಭವಾಯಿತು. ಬ್ರಿಟಿಷರು ಭಾರತವನ್ನು ತೊರೆಯುವಂತೆ ಗಾಂಧಿಯವರು ಕರೆ ನೀಡಿದರು ಮತ್ತು “ಮಾಡು ಇಲ್ಲವೇ ಮಡಿ” ಎಂಬ ಘೋಷಣೆಯನ್ನು ಮಾಡಿದರು. ಅನೇಕ ಜನರು ಈ ಕರೆಯನ್ನು ಬೆಂಬಲಿಸಿದರು. ಆದಾಗ್ಯೂ, ಬ್ರಿಟಿಷ್ ಸರ್ಕಾರವು ತ್ವರಿತವಾಗಿ ಪ್ರತಿಕ್ರಿಯಿಸಿತು, ನಾಯಕರು ಮತ್ತು ಕಾರ್ಯಕರ್ತರನ್ನು ಬಂಧಿಸಿತು. ದೇಶಾದ್ಯಂತ ಕಾಂಗ್ರೆಸ್ ಕಚೇರಿಗಳ ಮೇಲೆ ದಾಳಿ ನಡೆಸಿದರು.

ಚಳುವಳಿಯ ಸಮಯದಲ್ಲಿ ಸುಮಾರು 1,00,000 ಜನರನ್ನು ಬಂಧಿಸಲಾಯಿತು. ಸುಮಾರು 1,000 ಜನರು ಸಾಯಿಸಲಾಯಿತು ಮತ್ತು 2,500 ಕ್ಕೂ ಹೆಚ್ಚು ಜನರು ಗಾಯಗೊಂಡರು. ಬ್ರಿಟಿಷರು ಗಾಂಧಿ ಮತ್ತು ನೆಹರೂ ಅವರಂತಹ ಪ್ರಮುಖ ನಾಯಕರನ್ನು ಜೈಲಿಗೆ ಹಾಕುವ ಮೂಲಕ ಚಳವಳಿಯನ್ನು ಹತ್ತಿಕ್ಕುವಲ್ಲಿ ಯಶಸ್ವಿಯಾದರು. ಇದು ಸಾವುಗಳು ಮತ್ತು ಬಂಧನಗಳಿಗೆ ಕಾರಣವಾಯಿತು. ಇದರ ಹೊರತಾಗಿಯೂ, ಕ್ವಿಟ್ ಇಂಡಿಯಾ ಚಳುವಳಿಯು ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯದ ಭಾರತದ ಪ್ರಯಾಣದಲ್ಲಿ ಪ್ರಮುಖ ಪಾತ್ರವನ್ನು ವಹಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...