Homeಮುಖಪುಟಲೋಕಸಭೆ ದಾಖಲೆಯಿಂದ 'ಭಾರತ ಮಾತೆ' ಗೆ ಸಂಬಂಧಿಸಿದ ರಾಹುಲ್ ಗಾಂಧಿ ಟೀಕೆ ಕಡಿತ

ಲೋಕಸಭೆ ದಾಖಲೆಯಿಂದ ‘ಭಾರತ ಮಾತೆ’ ಗೆ ಸಂಬಂಧಿಸಿದ ರಾಹುಲ್ ಗಾಂಧಿ ಟೀಕೆ ಕಡಿತ

- Advertisement -
- Advertisement -

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ನರೇಂದ್ರ ಮೋದಿ ಸರ್ಕಾರದ ಕ್ರಮಗಳನ್ನು ಟೀಕಿಸುವ ಭಾಷಣದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರು ”ಭಾರತ ಮಾತೆ” ಗೆ ಸಂಬಂಧಿಸಿದ ಟೀಕೆಗಳನ್ನು ಲೋಕಸಭೆಯ ದಾಖಲೆಗಳಿಂದ ಬುಧವಾರ ತೆಗೆದುಹಾಕಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ವಯನಾಡ್ ಸಂಸದರಾಗಿ ಮರುಸೇರ್ಪಡೆಯಾದ ನಂತರ ಕೆಳಮನೆಯಲ್ಲಿ ಮಾಡಿದ ಮೊದಲ ಭಾಷಣದಲ್ಲಿ ಕಾಂಗ್ರೆಸ್ ನಾಯಕರು ಕೇಂದ್ರವನ್ನು ಕಟು ಶಬ್ಧಗಳಿಂದ ಟೀಕಿಸಿದ್ದಾರೆ. ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಅವರ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ ಮೂರು ದಿನಗಳ ನಂತರ ಅವರನ್ನು ಮರುಸೇರ್ಪಡೆ ಮಾಡಲಾಗಿದೆ.

ಮಣಿಪುರ ವಿಚಾರವಾಗಿ ಲೋಕಸಭೆಯಲ್ಲಿ ರಾಹುಲ್ ಮಾತನಾಡಿದ್ದು, ”ಕೆಲವು ದಿನಗಳ ಹಿಂದೆಯಷ್ಟೇ ನಾನು ಮಣಿಪುರಕ್ಕೆ ಭೇಟಿ ನೀಡಿದ್ದೇನೆ ಆದರೆ, ಪುಧಾನಿ ಮೋದಿ ಇದುವರೆಗೆ ಅಲ್ಲಿಗೆ ಹೋಗಿಲ್ಲ. ಅವರು ಮಣಿಪುರವನ್ನು ದೇಶದ ಭಾಗವೆಂದು ಪರಿಗಣಿಸಿಲ್ಲ. ನಾನು ಮಣಿಪುರ ಎಂಬ ಪದವನ್ನು ಬಳಕೆ ಮಾಡಿದ್ದೇನೆ. ಅದರೆ ನಿಜಾಂಶವೆಂದರೆ ಮಣಿಪುರ ಅಸ್ತಿತ್ವದಲ್ಲಿಲ್ಲ. ಬಿಜೆಪಿ ಸರ್ಕಾರ ಮಣಿಪುರವನ್ನು ಇಬ್ಬಾಗ ಮಾಡಿದೆ. ಮಣಿಪುರವನ್ನು ಒಡೆಯಲಾಗಿದೆ” ಎಂದು ಅವರು ಆರೋಪಿಸಿದ್ದಾರೆ.

”ಮಣಿಪುರದಲ್ಲಿ ಭಾರತಮಾತೆಯ ಕೊಲೆಯಾಗಿದೆ. ಬಿಜೆಪಿಯವರ ರಾಜಕೀಯ ಮಣಿಪುರವನ್ನು ಮಾತ್ರವಲ್ಲ ಹಿಂದೂಸ್ತಾನವನ್ನು ಕೊಲೆ ಮಾಡಿದೆ. ಮಣಿಪುರದಲ್ಲಿ ಜನರನ್ನು ಹೊಂದಿರುವ ನೀವು ಭಾರತ ಮಾತೆಯನ್ನೂ ಕೊಂದಿದಿರಿ, ನೀವು ದೇಶಭಕ್ತರಲ್ಲ, ದೇಶದ್ರೋಹಿಗಳು” ಎಂದು ಬಿಜೆಪಿಗರ ವಿರುದ್ಧ ರಾಹುಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿಯವರ ಭಾಷಣದ ಈ ಭಾಗಗಳನ್ನು ದಾಖಲೆಯಿಂದ ಕಡಿತ ಮಾಡಿದ ನಂತರ, ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಈ ನಿರ್ಧಾರವನ್ನು “ಘೋರ ಅನ್ಯಾಯ” ಎಂದು ಬಣ್ಣಿಸಿದರು ಮತ್ತು ಸರ್ಕಾರವು ಸಂಸತ್ತನ್ನು ಅವಮಾನಿಸುತ್ತಿದೆ ಎಂದು ಆರೋಪಿಸಿದರು.

ಚೌಧರಿ ಅವರು ಗುರುವಾರ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಲಿದ್ದು, ತೆಗೆದುಹಾಕಲಾದ ಟೀಕೆಗಳನ್ನು ಕಡತಕ್ಕೆ ಮತ್ತೆ ಸೇರಿಸಬೇಕು ಎಂದು ಕೇಳಿಕೊಳ್ಳಲಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮೇ 3 ರಂದು ಹಿಂಸಾಚಾರ ಭುಗಿಲೆದ್ದ ನಂತರ ಈಶಾನ್ಯ ರಾಜ್ಯದಲ್ಲಿ ಕನಿಷ್ಠ 187 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 60,000 ಜನರು ತಮ್ಮ ಮನೆಗಳನ್ನು ತೊರೆದಿದ್ದಾರೆ.

ಇದನ್ನೂ ಓದಿ: ಬಿಜೆಪಿಯವರು ಭಾರತ ಮಾತೆಯ ರಕ್ಷಕರಲ್ಲ, ಹಂತಕರು: ರಾಹುಲ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...