Homeಮುಖಪುಟಆದಿವಾಸಿ ಬಾಲಕನ ಕೊಲೆ ಶಂಕೆ: ವ್ಯಕ್ತಿಯನ್ನು ಮರಕ್ಕೆ ಕಟ್ಟಿಹಾಕಿ ಥಳಿತ

ಆದಿವಾಸಿ ಬಾಲಕನ ಕೊಲೆ ಶಂಕೆ: ವ್ಯಕ್ತಿಯನ್ನು ಮರಕ್ಕೆ ಕಟ್ಟಿಹಾಕಿ ಥಳಿತ

- Advertisement -
- Advertisement -

17 ವರ್ಷದ ಅಪ್ರಾಪ್ತ ಬಾಲಕನ ಕೊಲೆ ಶಂಕೆಯ ಮೇಲೆ ವ್ಯಕ್ತಿಯೊಬ್ಬನನ್ನು ಮಹಿಳೆ ಸೇರಿದಂತೆ ಗ್ರಾಮಸ್ಥರು  ಮರಕ್ಕೆ ಕಟ್ಟಿಹಾಕಿ ಥಳಿಸಿದ ಘಟನೆ ರಾಂಚಿಯ ಬೊಕಾರೊದಲ್ಲಿ ನಡೆದಿದೆ.

ಅನೇಶ್ವರ್ ಓರಾನ್ ಎಂಬ ಬಾಲಕ 13 ದಿನಗಳಿಂದ ನಾಪತ್ತೆಯಾಗಿದ್ದ.ಬಳಿಕ ಬೊಕಾರೊ ಕೈಗಾರಿಕಾ ಪ್ರದೇಶದ ಕೊಳದ ಬಳಿ ಆತನ ಮೃತದೇಹ ಸಿಕ್ಕಿದೆ.ಅನೇಶ್ವರ್ ಓರಾನ್ ಶ್ರವಣ್ ಕುಮಾರ್‌ ಎಂಬಾತನ ಜೊತೆ ಕೊನೆಯ ಬಾರಿಗೆ ಇರುವುದನ್ನು ಜನರು ನೋಡಿದ್ದರು.

ಇದರಿಂದ ಶ್ರವಣ್ ಮೇಲೆ ಶಂಕೆ ವ್ಯಕ್ತಪಡಿಸಿ ಕೋಪಗೊಂಡ ಗ್ರಾಮಸ್ಥರು ಶ್ರವಣ್ ಕುಮಾರ್‌ನನ್ನು ಹಿಡಿದು ಮರಕ್ಕೆ ಕಟ್ಟಿ ಹಾಕಿ ಬಿದಿರಿನ ಕೋಲುಗಳಿಂದ ಗಂಭೀರವಾಗಿ ಹಲವು ಗಂಟೆಗಳ ಕಾಲ ಥಳಿಸಿದ್ದಾರೆ.

ಇಡೀ ಘಟನೆಯ ವೀಡಿಯೊ ತುಣುಕನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಲಾಗಿದೆ, ಇದರಲ್ಲಿ ಯುವಕನ ಹತ್ಯೆಗೆ ಕಾರಣ ಎಂದು ಆರೋಪಿಸಿ ಮಹಿಳೆಯರು ಸೇರಿದಂತೆ ಗ್ರಾಮಸ್ಥರು ವ್ಯಕ್ತಿಯನ್ನು ಥಳಿಸುತ್ತಿರುವುದನ್ನು ಕಾಣಬಹುದು.

ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಗ್ರಾಮಸ್ಥರ ಕೈಯಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಆತನ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.

ಅಪ್ರಾಪ್ತ ಮಕ್ಕಳನ್ನು ಕೊಂದು ಅವರ ದೇಹದ ಅಂಗಾಂಗಗಳನ್ನು ಮಾರಾಟ ಮಾಡುವ ಅಭ್ಯಾಸ ಶ್ರವಣ್ ಗೆ ಇದೆ ಎಂದು ಮೃತ ಬಾಲಕನ ಕುಟುಂಬಸ್ಥರು ಆರೋಪಿಸಿದ್ದಾರೆ. ಆಗಸ್ಟ್ 5 ರಂದು ರಾತ್ರಿ 10 ಗಂಟೆ ಸುಮಾರಿಗೆ ಶ್ರಾವಣ ಮದ್ಯಪಾನ ಮಾಡಿ ಮನೆಗೆ ಬಂದು ನನ್ನ ಸಹೋದರ ಅನೇಶ್ವರ್ ನನ್ನು ಕೇಳಿದ.ನಾನು ಅವನನ್ನು ಬೆಳಿಗ್ಗೆ ಬರುವಂತೆ ಹೇಳಿದೆ. ಆದರೆ ಅವನು ಮತ್ತೆ ಮತ್ತೆ ಒತ್ತಾಯಿಸಿದ, ನಿದ್ರೆಯಲ್ಲಿದ್ದ ಸಹೋದರನಿಗೆ ಎಬ್ಬಿಸಿದೆ. ಬಳಿಕ ರಾತ್ರಿ ಆತ ಅನೇಶ್ವರ್ ಗೆ ಕರೆದುಕೊಂಡು ಹೋಗಿದ್ದಾನೆ. ಆದರೆ ಆ ಬಳಿಕ ಆತ ಮನೆಗೆ ಬಂದಿಲ್ಲ.ಆತನ ಮೊಬೈಲ್  ಸ್ವಿಚ್ ಆಫ್ ಆಗಿತ್ತು ಎಂದು ಮೃತನ ಸಹೋದರಿ ಸಂಗೀತಾ ಹೇಳಿದ್ದಾರೆ.

ಸಂಗೀತಾ ಪ್ರಕಾರ, ಬೆಳಿಗ್ಗೆ ಶ್ರಾವಣ ಬಳಿ ತಾಯಿ ವಿಚಾರಿಸಿದಾಗ, ಆತ ಕೆಲಸಕ್ಕೆ ಹೋಗಿದ್ದಾನೆ ಎಂದು ಹೇಳಿದ್ದಾನೆ. ಅನೇಶ್ವರನನ್ನು ಪತ್ತೆ ಹಚ್ಚಿಲು ಬಳಿಕ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಶ್ರಾವಣಗೆ ಅನೇಶ್ವರ್ ಎಲ್ಲಿದ್ದಾರೆ ಎಂದು ಕೇಳಿದಾಗ ಎಲ್ಲೋ ಹೋಗಿದ್ದಾನೆ ಮತ್ತೆ ಬರುತ್ತೇನೆ ಎಂದು ದಾರಿ ತಪ್ಪಿಸುತ್ತಿದ್ದ ಎಂದು ಆರೋಪಿಸಿದ್ದಾರೆ.

ಇದನ್ನು ಓದಿ: ನೂಹ್ ಹಿಂಸಾಚಾರದ ಐದು ಅರ್ಧಸತ್ಯಗಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...