Homeಮುಖಪುಟ77ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪು ಕೋಟೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮೋದಿ ಭಾಷಣ

77ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪು ಕೋಟೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮೋದಿ ಭಾಷಣ

- Advertisement -
- Advertisement -

ಹೊಸದಿಲ್ಲಿ: 77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ ನಂತರ ರಾಷ್ಟ್ರವನ್ನು ಉದ್ದೇಶಿಸಿ ಭಾಷಣವನ್ನು ಮಾಡಿದ್ದಾರೆ.

ದೆಹಲಿಯ ಕೆಂಪುಕೋಟೆಯಲ್ಲಿ 7.30 ಕ್ಕೆ ಧ್ವಜಾರೋಹಣವನ್ನು ಮಾಡಿದ ಪ್ರಧಾನಿ ಮೋದಿ,ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ.140 ಕೋಟಿ ಭಾರತೀಯ ನಾಗರಿಕರನ್ನು “ಪರಿವರ್ಜನ್” (ಕುಟುಂಬದ ಸದಸ್ಯರು) ಎಂದು ಮೋದಿ ಕರೆದಿದ್ದಾರೆ. ಸಂಪುಟ ಸಚಿವರು, ರಾಜಕೀಯ ಮುಖಂಡರು, ಎಲ್ಲಾ ಮೂರು ಸೇನಾ ಮುಖ್ಯಸ್ಥರು ಮತ್ತು ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಳೆದ ಕೆಲವು ವಾರಗಳಲ್ಲಿ ಮಣಿಪುರ ಹಿಂಸಾಚಾರದ ಬಗ್ಗೆ ಮಾತನಾಡುವಂತೆ ಪ್ರಧಾನಿ ಮೋದಿಗೆ ಒತ್ತಾಯಿಸಲಾಗಿತ್ತು.ಇಂದು ಮೋದಿ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮಣಿಪುರದ ಬಗ್ಗೆ ಉಲ್ಲೇಖಿಸಿದ್ದಾರೆ.

ಮಣಿಪುರ ಕಳೆದ ಕೆಲವಾರಗಳಲ್ಲಿ ಹಿಂಸಾಚಾರಕ್ಕೆ ಸಾಕ್ಷಿಯಾಗಿತ್ತು. ಹಲವಾರು ಜನರು ಪ್ರಾಣ ಕಳೆದುಕೊಂಡರು, ಮತ್ತು ನಮ್ಮ ತಾಯಿ ಮತ್ತು ಸಹೋದರಿಯರಿಗೆ ಅವಮಾನವಾಯಿತು. ನಿಧಾನವಾಗಿ ಈ ಪ್ರದೇಶದಲ್ಲಿ ಶಾಂತಿ ಸ್ಥಾಪನೆಯಾಗುತ್ತಿದೆ.ಭಾರತವು ಮಣಿಪುರದೊಂದಿಗೆ ನಿಂತಿದೆ ಎಂದು ಅವರು ಹೇಳಿದರು. ಶಾಂತಿ ಕಾಪಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಒಟ್ಟಾಗಿ ಕೆಲಸ ಮಾಡುತ್ತಿವೆ.

ಮಣಿಪುರದ ಜನರು ಶಾಂತಿ ಸ್ಥಾಪಿಸಬೇಕು.   ಕಳೆದ ಕೆಲವು ದಿನಗಳಿಂದ ಶಾಂತಿ ಸ್ಥಾಪನೆಯಾಗುತ್ತಿದೆ   ಮಣಿಪುರದಲ್ಲಿ ಶಾಂತಿಯ ಮೂಲಕ ಪರಿಹಾರದ ಮಾರ್ಗವನ್ನು ಕಂಡುಕೊಳ್ಳಲಾಗುವುದು ಎಂದು ಅವರು ಹೇಳಿದರು.

ಇದಲ್ಲದೆ ಪ್ರಾದೇಶಿಕ ಆಕಾಂಕ್ಷೆಗಳನ್ನು ಗೌರವಿಸುವ ಮತ್ತು ಒಟ್ಟಾರೆ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳುವ ಅಗತ್ಯತೆಯ ಬಗ್ಗೆ ಮಾತನಾಡುವಾಗ ಪ್ರಧಾನಿ ಮೋದಿ ನಂತರ ತಮ್ಮ ಭಾಷಣದಲ್ಲಿ ಮಣಿಪುರವನ್ನು ಪ್ರಸ್ತಾಪಿಸಿದರು.

ಭಾರತ 1000 ವರ್ಷಗಳ ಗುಲಾಮಗಿರಿಯಿಂದ ಹೊರಬಂದಿದೆ. ಇದು ಅಮೃತಕಾಲದ ಮೊದಲ ವರ್ಷ, ಎಲ್ಲರ ಕಲ್ಯಾಣ ಮತ್ತು ಎಲ್ಲರ ಸಂತೋಷಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಪ್ರಪಂಚದಾದ್ಯಂತ ಭಾರತದ ವಿಚಾರದಲ್ಲಿ ಹೊಸ ಭರವಸೆ ಹುಟ್ಟಿಕೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಇಂದು ನಮ್ಮಲ್ಲಿ ಜನಸಂಖ್ಯೆ ಇದೆ.ನಮ್ಮಲ್ಲಿ ಪ್ರಜಾಪ್ರಭುತ್ವವಿದೆ. ನಮ್ಮಲ್ಲಿ ವೈವಿಧ್ಯತೆ ಇದೆ ಎಂದು ಹೇಳಿದ್ದಾರೆ.

ನನ್ನ ದೇಶದ ಜನರ ಮೇಲಿನ ಹಣದುಬ್ಬರದ ಹೊರೆಯನ್ನು ಕಡಿಮೆ ಮಾಡಲು ನಾನು ಈ ದಿಕ್ಕಿನಲ್ಲಿ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ನನ್ನ ಪ್ರಯತ್ನ ಮುಂದುವರಿಯುತ್ತದೆ. ಗ್ರಾಮದಿಂದ ಗ್ರಾಮಕ್ಕೆ ಕಾಂಕ್ರೀಟ್ ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ, ಸರ್ಕಾರ ಯಾವ ಯೋಜನೆಗಳಿಗೆ ಅಡಿಗಲ್ಲು ಹಾಕುತ್ತದೋ ಅದು ನಮ್ಮ ಅವಧಿಯಲ್ಲಿಯೇ ಪೂರ್ಣಗೊಳ್ಳುತ್ತದೆ.

ದೇಶವು ಜಿ-20 ಶೃಂಗಸಭೆಯನ್ನು ಆಯೋಜಿಸುವ ಅವಕಾಶವನ್ನು ಪಡೆದುಕೊಂಡಿದೆ. ಕಳೆದ ಒಂದು ವರ್ಷದಿಂದ, ಜಿ 20ಯಂತಹ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ, ಇದು ದೇಶದ ಸಾಮರ್ಥ್ಯದ ಬಗ್ಗೆ ಜಗತ್ತಿಗೆ ಅರಿವು ಮೂಡಿಸಿದೆ.ನಮ್ಮ ಗಡಿಗಳು ಹಿಂದೆಂದಿಗಿಂತಲೂ ಹೆಚ್ಚು ಸುರಕ್ಷಿತವಾಗಿವೆ. ಸೇನೆಯ ಆಧುನೀಕರಣ. ನಮ್ಮ ಸೇನೆಯು ಯುದ್ಧಕ್ಕೆ ಸಿದ್ಧವಾಗಿರಬೇಕು. ಅದಕ್ಕಾಗಿಯೇ ನಮ್ಮ ಸೇನೆಯಲ್ಲಿ ವೆಚ್ಚದ ಸುಧಾರಣೆಯ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಮುಂಬರುವ 5 ವರ್ಷಗಳಲ್ಲಿ ದೇಶವು ಮೊದಲ ಮೂರು ಜಾಗತಿಕ ಆರ್ಥಿಕತೆಗಳಲ್ಲಿ ಸ್ಥಾನ ಪಡೆಯುವುದು ಗ್ಯಾರಂಟಿ.ನನ್ನ 5 ವರ್ಷಗಳಲ್ಲಿ 13.5 ಕೋಟಿ ಬಡ ಸಹೋದರ ಸಹೋದರಿಯರು ಬಡತನದ ಸರಪಳಿಗಳನ್ನು ಮುರಿದು ನವ ಮಧ್ಯಮ ವರ್ಗದ ರೂಪದಲ್ಲಿ ಹೊರಬಂದಿದ್ದಾರೆ, ಜೀವನದಲ್ಲಿ ಇದಕ್ಕಿಂತ ದೊಡ್ಡ ತೃಪ್ತಿ ಇನ್ನೊಂದಿಲ್ಲ ಎಂದು ಮೋದಿ ಭಾಷಣದಲ್ಲಿ ಉಲ್ಲೇಖಿಸಿದ್ದರು.

ಇದನ್ನು ಓದಿ: ಭಾರತ ಮಾತೆ ಪ್ರತಿಯೊಬ್ಬ ಭಾರತೀಯನ ಧ್ವನಿ; ರಾಹುಲ್ ಗಾಂಧಿ ಸ್ವಾತಂತ್ರ್ಯ ದಿನದ ಸಂದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...