Homeಕರ್ನಾಟಕಮಾನಿಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ: ಗ್ಯಾರೆಂಟಿ ಯೋಜನೆಗಳ ಬಗ್ಗೆ ಉಲ್ಲೇಖ

ಮಾನಿಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ: ಗ್ಯಾರೆಂಟಿ ಯೋಜನೆಗಳ ಬಗ್ಗೆ ಉಲ್ಲೇಖ

- Advertisement -
- Advertisement -

77ನೇ ಸ್ವಾತಂತ್ರೋತ್ಸವದ ಹಿನ್ನೆಲೆ ಬೆಂಗಳೂರಿನ ಮಾನಿಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ನೆರವೇರಿಸಿದ ಬಳಿಕ ಮುಖ್ಯಮಂತ್ರಿಗಳು ತೆರೆದ ಜೀಪ್ ನಲ್ಲಿ ಪರೇಡ್ ವೀಕ್ಷಣೆ ಮಾಡಿದರು. ಇದಕ್ಕೂ ಮೊದಲು ಕೆಪಿಸಿಸಿ ಕಚೇರಿಯಲ್ಲಿ ನಡೆದ ಧ್ವಜಾರೋಹಣದಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು.

ಧ್ವಜಾರೋಹಣ ಬಳಿಕ ನಾಡಿನ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,ಗ್ಯಾರಂಟಿ ಯೋಜನೆಗಳ ಬಗ್ಗೆ ಭಾಷಣದಲ್ಲಿ ಪ್ರಸ್ತಾಪಸಿದ್ದಾರೆ.ಸಂಪತ್ತಿನ ಸಂಗ್ರಹ ಮತ್ತು ಹಂಚಿಕೆ ಹಾಗೂ ಮರುಹಂಚಿಕೆಗಳಲ್ಲಿ ಸಾಮಾಜಿಕ ನ್ಯಾಯವನ್ನು ಪಾಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಶಾಂತಿಯುತ ಸಮಾಜವಿದ್ದರೆ ಮಾತ್ರ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ನಮ್ಮ ಜನರಿಗೆ ಅರ್ಥವಾಗಿರುವುದರಿಂದ ದುಷ್ಟರ ಆಟಗಳು ಬಹಳ ಕಾಲ ನಡೆಯುವುದಿಲ್ಲ ಎಂಬುದನ್ನು ಕರ್ನಾಟಕದ ಜನರೇ ಸಾಬೀತು ಮಾಡಿದ್ದಾರೆ.

ಪ್ರಾಣದ ಹಂಗು ತೊರೆದು ಸ್ವಾತಂತ್ರ್ಯಕ್ಕೆ ಹೋರಾಡಿದವರಿಗೆ ನೆನಪಿಸಿಕೊಂಡಿದ್ದಾರೆ.ಸ್ವಾತಂತ್ರ್ಯ ಮನುಷ್ಯನ ಜೀವನಕ್ಕೂ ಮಿಗಿಲು, ಸ್ವಾತಂತ್ರ್ಯಕ್ಕೆ ಪ್ರಾಣ ಕೊಟ್ಟವರ ತ್ಯಾಗ, ಬಲಿದಾನ ನೆನೆಯಬೇಕು. ದೇಶದ ಸಂಪತ್ತು ಬಂಡವಾಳ ಶಾಹಿಗಳ ಬಳಿ ಕ್ರೋಡೀಕರಣವಾಗುತ್ತಿದೆ. ನಾವು ಸಂಪತ್ತಿನ ಮರು ಹಂಚಿಕೆ ಮೂಲಕ ಸಾಮಾಜಿಕ ನ್ಯಾಯ ನೀಡುತ್ತೇವೆ ಎಂದು ಹೇಳಿದ್ದಾರೆ. ಬೆಲೆಯೇರಿಕೆ, ನಿರುದ್ಯೋಗ ಜಾತಿ, ಧರ್ಮದ ಕಾರಣಕ್ಕೆ ತಾರತಮ್ಯ ದಿಂದ ಜನರು ಸಂಕಷ್ಟದಲ್ಲಿದ್ದರು. ಇದನ್ನು ಸರಕಾರ ಗಂಭೀರವಾಗಿ ಪರಿಗಣಸಿದೆ ಎಂದು ಸಿಎಂ ಭಾಷಣದಲ್ಲಿ ಹೇಳಿದ್ದಾರೆ.

ಗ್ಯಾರೆಂಟಿ ಯೋಜನೆ ಬಗ್ಗೆ ಉಲ್ಲೇಖಿಸಿದ ಸಿಎಂ,  ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಶಕ್ತಿಯೋಜನೆ ಜಾರಿ ಮಾಡಲಾಗಿದೆ. ಈ ಯೋಜನೆ ಬಗ್ಗೆ ರಾಷ್ಟ್ರಿಯ, ಅಂತರಾಷ್ಟ್ರೀಯ ಮಾದ್ಯಮಗಳು ಪ್ರಶಂಸೆ ವ್ಯಕ್ತಪಡಿಸಿದೆ. ಗೃಹಜ್ಯೋತಿ ಯೋಜನೆ ಮೂಲಕ 2 ಕೋಟಿ ಗ್ರಾಹಕರಿಗೆ ಯೋಜನೆಯ ಸಹಾಯ ಸಿಗಲಿದೆ. ಇದಕ್ಕೆ ವಾರ್ಷಿಕ 13,900,10ಕೋಟಿ ಮೀಸಲಿಟ್ಟಿದ್ದೇವೆ. ಅನ್ನ ಭಾಗ್ಯದ ಮೂಲಕ ಪ್ರತಿ ಫಲಾನುಭವಿಗೆ 5 ಕೆಜಿ ಹೆಚ್ಚುವರಿ ಆಹಾರ ಧಾನ್ಯ ನೀಡಲು ಕ್ರಮ ಕೈಗೊಳ್ಳುತ್ತಿದ್ದೇವೆ. ಗೃಹ ಲಕ್ಷ್ಮಿ ಮೂಲಕ ಜನರಿಗೆ 2000ರೂ. ಹಣ ಜಮೆ ಮಾಡಲಾಗುವುದು ಎಂದು ಹೇಳಿದ್ದಾರೆ. ಯುವ ನಿಧಿ ಮೂಲಕ ಯುವ ಸಮುದಾಯಕ್ಕೆ ಆಸರೆಯಾಗಲಿರುವುದು ಎಂದು ಸಿದ್ದಾರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ ಕಾನುನು ಸುವ್ಯವಸ್ಥೆ ಕಾಪಾಡಲು ಕ್ರಮ ವಹಿಸಲಾಗುವುದು, ಸಾಮಾಜಿಕ ಮಾದ್ಯಮಗಳಲ್ಲಿ ಸುಳ್ಳು ಸುದ್ದಿ ಹರಡುವವರು, ಅನೈತಿಕ ಪೊಲೀಸ್ ಗಿರಿಯನ್ನು ಸರಕಾರ ಕ್ಷಮಿಸುವುದಿಲ್ಲ. ನಿರೋಧ್ಯೋಗ ನಿವಾರಣೆಗೆ ಸ್ಪಷ್ಟ ಯೋಜನೆ ರೂಪಿಸುತ್ತೇವೆ. ಡ್ರಗ್ಸ್ ವಿರುದ್ಧ ಯುವಜನರಿಗೆ ಸಮಾಲೋಚನೆ ಮಾಡುತ್ತೇವೆ.ವರ್ಷಕ್ಕೆ 50,000 ಕೋಟಿಯನ್ನು ನೇರವಾಗಿ ಜನರಿಗೆ ಗ್ಯಾರೆಂಟಿ  ಯೋಜನೆ ಮೂಲಕ ತಲುಪಿಸಲು ಕ್ರಮ ಮಾಡುತ್ತೇವೆ ಎಂದು ಹೇಳಿದ್ದಾರೆ.

ಸ್ವಾತಂತ್ರ್ಯದ ಹಿನ್ನೆಲೆ ಮಾನಿಕ್ ಷಾ ಪೆರೇಡ್ ಗ್ರೌಂಡ್ ನಲ್ಲಿ  ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಹೆಚ್ಚಿನ ಜನ ಆಗಮಿಸುವ ಹಿನ್ನಲೆ ಪೊಲೀಸರು ಮೈದಾನದ ಸುತ್ತ ಹದ್ದಿನ ಕಣ್ಣಿಟ್ಟಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾ ವಹಿಸಿದ್ದು, ಕಾನೂನು ಸುವ್ಯವಸ್ಥೆ ಹಾಗೂ ಸಂಚಾರಿ ಪೊಲೀಸರು ಎರಡು ರೀತಿಯಲ್ಲಿ ಅಗತ್ಯ ತಯಾರಿ ಮಾಡಿಕೊಂಡಿದ್ದಾರೆ.

ಇದನ್ನು ಓದಿ: 77ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪು ಕೋಟೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮೋದಿ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...