Homeಮುಖಪುಟಏಕನಾಥ್ ಶಿಂಧೆಯನ್ನು ಆಸ್ಪತ್ರೆಗೆ ದಾಖಲಿಸಿ ಅಜಿತ್ ಪವಾರನ್ನು ಸಿಎಂ ಮಾಡುವ ಹುನ್ನಾರ ನಡೆಯುತ್ತಿದೆ: ವಿಜಯ್ ವಾಡೆತ್ತಿವಾರ್

ಏಕನಾಥ್ ಶಿಂಧೆಯನ್ನು ಆಸ್ಪತ್ರೆಗೆ ದಾಖಲಿಸಿ ಅಜಿತ್ ಪವಾರನ್ನು ಸಿಎಂ ಮಾಡುವ ಹುನ್ನಾರ ನಡೆಯುತ್ತಿದೆ: ವಿಜಯ್ ವಾಡೆತ್ತಿವಾರ್

- Advertisement -
- Advertisement -

ಏಕನಾಥ್ ಶಿಂಧೆ ಅವರನ್ನು ಅಧಿಕಾರದಿಂದ ಕೆಳಗಿಳಿಸಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಬಂಡಾಯ ಎನ್‌ಸಿಪಿ) ನಾಯಕ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಸಾಧ್ಯತೆ ಇದೆ ಎಂದು ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕ ವಿಜಯ್ ವಾಡೆತ್ತಿವಾರ್ ಹೇಳಿದ್ದಾರೆ.

ಗಡ್ಚಿರೋಲಿ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ವಡೆತ್ತಿವಾರ್, ಶಿಂಧೆಯನ್ನು ಆಸ್ಪತ್ರೆಗೆ ದಾಖಲಿಸಿ  ನಂತರ ಅವರ ಆರೋಗ್ಯದ ಕಾರಣ ಹೇಳಿ ಶಿಂಧೆ ಅವರನ್ನು ಬದಲಿಸಿ ಬಂಡಾಯ ಎನ್‌ಸಿಪಿ ಎಂಎಲ್‌ನ ಗುಂಪಿನ ಮುಖ್ಯಸ್ಥ ಅಜಿತ್ ಪವಾರ್ ಅವರನ್ನು ಸಿಎಂ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಬಂಡಾಯ ಎನ್‌ಸಿಪಿ ಶಾಸಕರ ಗುಂಪಿನ ಮುಖ್ಯಸ್ಥರಾದ ಅಜಿತ್ ಪವಾರ್ ಅವರು ಇತ್ತೀಚೆಗೆ ಪುಣೆಯಲ್ಲಿ ಭೇಟಿಯಾದರು.ಅಜಿತ್‌ಗೆ ನಿಷ್ಠರಾಗಿರುವ ಶಾಸಕರ ನಡುವೆ ಮಾತುಕತೆ ನಡೆದಿದೆ ಎಂದು ಹೇಳಿದ್ದಾರೆ.

ಸಿಎಂ 24 ಗಂಟೆಗಳ ಕಾಲ ಕೆಲಸ ಮಾಡುತ್ತಿರುವುದರಿಂದ ಸಿಎಂ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ಅವರ ಬೆಂಬಲಿಗ ಮತ್ತು ಶಾಸಕ ಸಂಜಯ್ ಶಿರ್ಸತ್ ಇತ್ತೀಚೆಗೆ ಹೇಳಿಕೆ ನೀಡಿದ್ದರು.ಏಕನಾಥ್ ಶಿಂಧೆ ಅವರನ್ನು ಆಸ್ಪತ್ರೆಗೆ ದಾಖಲಿಸಲು ಮತ್ತು ಅವರ ಬದಲಿಗೆ ಹೊಸ ಮುಖ್ಯಮಂತ್ರಿಯನ್ನು ನೇಮಿಸಲು ನಡೆಯುತ್ತಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ಹೊರಬರುತ್ತಿದೆ ಎಂದು ವಡೆತ್ತಿವಾರ್ ಹೇಳಿದರು.

ಶಿಂಧೆ ಅವರು ಚೆನ್ನಾಗಿಲ್ಲ ಎಂದು ಮುಖ್ಯಮಂತ್ರಿ ಕಚೇರಿ ಕೂಡ ಹೇಳಿಕೆ ನೀಡಿದ್ದಾರೆ ಎಂದು  ವಾಡೆತ್ತಿವಾರ್ ಹೇಳಿದ್ದಾರೆ. ಅವರು ಶಿಂಧೆ ಅವರನ್ನು ಎರಡು ತಿಂಗಳ ಕಾಲ ಆಸ್ಪತ್ರೆಗೆ ದಾಖಲಿಸಬಹುದು ಮತ್ತು ವೈದ್ಯಕೀಯ ಕಾರಣ ನೀಡಿ ಅವರನ್ನು ಬದಲಾಯಿಸಬಹುದು ಎಂದು ನಾನು ಭಯಪಡುತ್ತೇನೆ ಎಂದು ಹೇಳಿದ್ದಾರೆ.

ಶಿವಸೇನಾ ಮುಖವಾಣಿ ಸಾಮ್ನಾ, ಸಿಎಂ ಶಿಂಧೆ ಅವರ ‘ಅನಾರೋಗ್ಯ’ದ ಬಗ್ಗೆ ಶಾಸಕ ಶಿರ್ಸತ್ ಅವರ ಹೇಳಿಕೆಯನ್ನು ಉಲ್ಲೇಖಿಸಿದೆ. ಶಿಂಧೆ ಅವರು 24 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ, ಆದರೆ ಇದು ರಾಜ್ಯದಲ್ಲಿ ಎಲ್ಲಿಯೂ ಪ್ರತಿಫಲಿಸಿರುವುದು ಕಂಡಿಲ್ಲ. ಅವರು ಹುದ್ದೆ ಕಳೆದುಕೊಳ್ಳುವ ಭಯದಿಂದ ನಿದ್ದೆ ಕಳೆದುಕೊಂಡಿರಬಹುದು ಎಂದು ಹೇಳಿದೆ.

ಶಿರ್ಸತ್ ಅವರ ಹೇಳಿಕೆಗಳು ನಿಜವಾಗಿದ್ದರೆ, ಶಿಂಧೆ ಅವರನ್ನು ಐಸಿಯುಗೆ ಸೇರಿಸಬೇಕು ಮತ್ತು ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಅವರನ್ನು ಭೇಟಿಯಾಗದಂತೆ ದೂರ ಇಡಬೇಕು. ಶಿಂಧೆ ಅವರನ್ನು ಮುಂಬೈ ಅಥವಾ ಥಾಣೆಯಲ್ಲಿರುವ ಒಳ್ಳೆಯ ಆಸ್ಪತ್ರೆಗೆ ದಾಖಲಿಸಬೇಕು ಎಂದು ಸಾಮ್ನಾ ಸಂಪಾದಕೀಯ ವ್ಯಂಗ್ಯವಾಗಿ ಹೇಳಿದೆ.

ಇದನ್ನು ಓದಿ: ಮೋದಿಯವರ ‘ಮನ್‌ ಕಿ ಬಾತ್‌ನಲ್ಲಿ ದೇಶದ ಜನ ಇರೋದಿಲ್ಲ’: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...