Homeಮುಖಪುಟಸಂವಿಧಾನ, ಪ್ರಜಾಪ್ರಭುತ್ವ ಅಪಾಯದಲ್ಲಿದ್ದು ಅವುಗಳ ರಕ್ಷಣೆಗೆ ಕಟಿಬದ್ಧರಾಗಿದ್ದೇವೆ: ಮಲ್ಲಿಕಾರ್ಜುನ್ ಖರ್ಗೆ

ಸಂವಿಧಾನ, ಪ್ರಜಾಪ್ರಭುತ್ವ ಅಪಾಯದಲ್ಲಿದ್ದು ಅವುಗಳ ರಕ್ಷಣೆಗೆ ಕಟಿಬದ್ಧರಾಗಿದ್ದೇವೆ: ಮಲ್ಲಿಕಾರ್ಜುನ್ ಖರ್ಗೆ

- Advertisement -
- Advertisement -

ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಅಪಾಯದಲ್ಲಿದ್ದು, ನಾವು ಅವುಗಳ ರಕ್ಷಣೆಗೆ ಕಟಿಬದ್ಧರಾಗಿದ್ದೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ಪ್ರಮಾಣವಚನ ಸ್ವೀಕರಿಸಿರುವುದಾಗಿ ಹೇಳಿದ್ದಾರೆ.

ಇಂದು ಸ್ವಾತಂತ್ರ್ಯ ದಿನದ ಅಂಗವಾಗಿ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸ್ವಾತಂತ್ರ್ಯದ ಹೋರಾಟದ ವೇಳೆ ಮಡಿದವರ ತ್ಯಾಗವನ್ನು ನೆನಪಿಸಿಕೊಂಡರು. ಅವರು ರಾಷ್ಟ್ರೀಯ ಚಳವಳಿಗೆ ಕೊಡುಗೆ ಕೊಟ್ಟರಲ್ಲದೆ, ದೇಶಕ್ಕೆ ಗಟ್ಟಿಯಾದ ಅಡಿಪಾಯ ಹಾಕಿಕೊಟ್ಟರು ಎಂದು ಹೇಳಿದರು.

”ಪ್ರಜಾಪ್ರಭುತ್ವ, ಹಾಗೂ ಸಂವಿಧಾನ ಈ ದೇಶದ ಆತ್ಮ, ಆದರೆ ಪ್ರಸ್ತುತ ಸಂದರ್ಭದಲ್ಲಿ ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಸ್ವಾಯತ್ತ ಸಂಸ್ಥೆಗಳು ಅಪಾಯದಲ್ಲಿವೆ ಎಂದು ಹೇಳಲು ನೋವಾಗುತ್ತಿದೆ. ಸ್ವಾತಂತ್ರ್ಯ ದಿನದ ಈ ಸ್ವಾತಂತ್ರ್ಯ ದಿನದಂದು, ನಾವು ಸಂವಿಧಾನ, ಪುಜಾಪುಭುತ್ಯ ಐಕ್ಯತೆ ಹಾಗೂ ಸಮಗ್ರತೆಯನ್ನು ಎತ್ತಿ ಹಿಡಿಯುವ ಪ್ರತಿಜ್ಞೆ ಮಾಡುತ್ತೇವೆ” ಎಂದರು.

ಈ ನಿರ್ಣಯದೊಂದಿಗೆ ಮತ್ತೊಮ್ಮೆ ಸ್ವಾತಂತ್ರ ದಿನಾಚರಣೆಯ ಶುಭಾಶಯ ಕೋರುತ್ತೇನೆ ಎಂದು ಹೇಳಿದ ಅವರು, ವಿಪಕ್ಷ ಒಕ್ಕೂಟದ ಘೋಷವಾಕ್ಯ ಭಾರತ್ ಜುಡೇಗಾ, ಇಂಡಿಯಾ ಜೀತೆಗಾ’ (ಭಾರತ ಒಂದಾಗಲಿದೆ, ಇಂಡಿಯಾ ಗೆಲ್ಲಲಿದೆ) ಎಂದು ಹೇಳಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಹಾರ: ಪೊಲೀಸ್‌ ಕಸ್ಟಡಿಯಲ್ಲಿದ್ದ ಇಬ್ಬರು ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ; ಠಾಣೆಗೆ ಬೆಂಕಿ ಹಚ್ಚಿದ ಗುಂಪು

0
ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಬಾಲ್ಯ ವಿವಾಹದ ಆರೋಪದಲ್ಲಿ ಬಂಧಿತ ಯುವಕ ಮತ್ತು ಆತನ ಅಪ್ರಾಪ್ತ 'ಪತ್ನಿ' ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲಿ ಕೋಪಗೊಂಡ ಗ್ರಾಮಸ್ಥರು ಪೊಲೀಸ್‌ ಠಾಣೆಯನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ. ಉದ್ರಿಕ್ತರು...