Homeಮುಖಪುಟರಾಜಸ್ಥಾನ; ಒಂದೇ ತಿಂಗಳಲ್ಲಿ ನಾಲ್ವರು ಜೆಇಇ ಆಕಾಂಕ್ಷಿ ವಿದ್ಯಾರ್ಥಿಗಳು ಆತ್ಮಹತ್ಯೆ

ರಾಜಸ್ಥಾನ; ಒಂದೇ ತಿಂಗಳಲ್ಲಿ ನಾಲ್ವರು ಜೆಇಇ ಆಕಾಂಕ್ಷಿ ವಿದ್ಯಾರ್ಥಿಗಳು ಆತ್ಮಹತ್ಯೆ

- Advertisement -
- Advertisement -

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)ಗೆ ಪ್ರವೇಶಾತಿಗೆ ಜೆಇಇ ಮೇನ್ಸ್‌ಗೆ ತಯಾರಿ ನಡೆಸಲು ರಾಜಸ್ಥಾನದ ಕೋಟಾಕ್ಕೆ ಆಗಮಿಸಿದ್ದ 18 ವರ್ಷದ ಬಾಲಕ ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಕೋಟಾದಲ್ಲಿ ಈ ಬಾರಿ 22 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇದು ಈ ತಿಂಗಳ ನಾಲ್ಕನೇ ಪ್ರಕರಣವಾಗಿದೆ ಎಂದು Business Today ವರದಿ ಮಾಡಿದೆ.

ಇಂಡಿಯಾ ಟುಡೇ ವರದಿಯ ಪ್ರಕಾರ, ಬಿಹಾರದ ಗಯಾದ ವಾಲ್ಮೀಕಿ ಜಂಗಿದ್ ಎಂದು ಗುರುತಿಸಲಾದ ಬಾಲಕ ಕಳೆದ ವರ್ಷದಿಂದ ಕೋಟಾದ ಮಹಾವೀರ್ ನಗರ ಪ್ರದೇಶದಲ್ಲಿ ವಾಸಿಸುತ್ತಿದ್ದನು. ಜೆಇಇ ಮೇನ್ಸ್ ಪರೀಕ್ಷೆಗೆ ತಯಾರಿ ನಡೆಸಲು ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ಓದುತ್ತಿದ್ದ. ನಿನ್ನೆ ಬಾಲಕ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮಹಾವೀರ್ ನಗರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಪರಂಜೀತ್ ಪಟೇಲ್ ತಿಳಿಸಿದ್ದಾರೆ.

ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿದ್ದು, ಬಳಿಕ ಕೊಠಡಿಯಿಂದ ಮೃತದೇಹವನ್ನು ಹೊರತೆಗೆದು ಪೋಷಕರು ಆಗಮಿಸಿದ ನಂತರ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕೊಠಡಿಯಲ್ಲಿ ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲ ಮತ್ತು ವಿದ್ಯಾರ್ಥಿಯ ಸಾವಿನ ಹಿಂದಿನ ಕಾರಣದ ಬಗ್ಗೆ ಇನ್ನು ತನಿಖೆ ಮಾಡಬೇಕಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ ಮತ್ತೊಬ್ಬ ವಿದ್ಯಾರ್ಥಿ ಮನೀಶ್ ಪ್ರಜಾಪತ್ ಆತ್ಮಹತ್ಯೆ ಮಾಡಿಕೊಂಡಿದ್ದರು.ಉತ್ತರ ಪ್ರದೇಶದ ಅಜಂಗಢ ಮೂಲದ ಈ ಬಾಲಕ ಕೋಟಾದ ಖಾಸಗಿ ಕೋಚಿಂಗ್ ಸಂಸ್ಥೆಯಲ್ಲಿ ಜೆಇಇಗೆ ತಯಾರಿ ನಡೆಸುತ್ತಿದ್ದ. ಘಟನಾ ಸ್ಥಳದಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಶಿಕ್ಷಣ ಕೇಂದ್ರದಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ದೇಶದ  ಗಮನ ಸೆಳೆದಿವೆ. ಜೈಪುರದಲ್ಲಿ ನಡೆದ ರಾಜ್ಯ ಮಟ್ಟದ ‘ಯುವ ಮಹಾಪಂಚಾಯತ್’ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್,  ಈ ಕುರಿತು ಮಾತನಾಡಿ ಕೋಟಾದಲ್ಲಿ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಕಳೆದ ಎಂಟು ತಿಂಗಳಲ್ಲಿ 22 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು ಆತಂಕಕಾರಿಯಾಗಿದೆ.ಪೋಷಕರು  ತಮ್ಮ ಮಕ್ಕಳ ಮೇಲೆ ಒತ್ತಡ ಹೇರಬೇಡಿ ಎಂದು ಪೋಷಕರನ್ನು ಅಶೋಕ್ ಗೆಹ್ಲೋಟ್ ಆಗ್ರಹಿಸಿದ್ದಾರೆ.

ಕೋಟಾದಲ್ಲಿ ಕಳೆದ ಎಂಟು ತಿಂಗಳಲ್ಲಿ 22 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ಕಳವಳಕಾರಿ ಸಂಗತಿಯಾಗಿದೆ.ನಾನೇ ಬಾಲ್ಯದಲ್ಲಿ ವೈದ್ಯನಾಗಬೇಕೆಂದು ಬಯಸಿದ್ದೆ, ರಾತ್ರಿ 2-3ರವರೆಗೆ ಓದುತ್ತಿದ್ದೆ, ಆದರೆ ಯಶಸ್ವಿಯಾಗಲಿಲ್ಲ. ಧೈರ್ಯ ಕಳೆದುಕೊಳ್ಳಲಿಲ್ಲ, ನನ್ನ ಹಾದಿ ಬದಲಿಸಿ ಸಮಾಜಸೇವಕನಾದೆ, ರಾಜಕೀಯ ಪ್ರವೇಶಿಸಿ ಇಂದು ನಿಮ್ಮ ಮುಂದೆ ಇದ್ದೇನೆ ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...