Homeಕರ್ನಾಟಕಬೆಂಗಳೂರು: IIScನಲ್ಲಿ ನಾಗರಿಕ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಪ್ರವೇಶಕ್ಕೆ ಅಡ್ಡಿಪಡಿಸಿದ ಭದ್ರತಾ ಸಿಬ್ಬಂದಿ

ಬೆಂಗಳೂರು: IIScನಲ್ಲಿ ನಾಗರಿಕ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಪ್ರವೇಶಕ್ಕೆ ಅಡ್ಡಿಪಡಿಸಿದ ಭದ್ರತಾ ಸಿಬ್ಬಂದಿ

- Advertisement -
- Advertisement -

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (ಐಐಎಸ್‌ಸಿ) ನಾಗರಿಕ ಹಕ್ಕುಗಳ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಪ್ರವೇಶಕ್ಕೆ ಭದ್ರತಾ ಸಿಬ್ಬಂದಿ ಅಡ್ಡಿಪಡಿಸಿದ ಘಟನೆ ನಡೆದಿದೆ.

“ಕೋಮು ಸೌಹಾರ್ದತೆ ಮತ್ತು ನ್ಯಾಯ” ಎಂಬ ಶೀರ್ಷಿಕೆಯ ಕಾರ್ಯಕ್ರಮ ನಿಗದಿತ ಸಮಯ ಸಂಜೆ 5 ಗಂಟೆಗೆ ಪ್ರಾರಂಭವಾಗಬೇಕಿತ್ತು. ಇದಕ್ಕಾಗಿ ತೀಸ್ತಾ ಅವರು ಕ್ಯಾಂಪಸ್ ಗೆ ಆಗಮಿಸಿದ್ದು, ಅವರಿಗೆ  ಪ್ರವೇಶಾತಿಗೆ ಭದ್ರತಾ ಸಿಬ್ಬಂದಿಗಳು ನಿರಾಕರಿಸಿದ್ದರು ಎನ್ನಲಾಗಿದೆ.

ಮೊದಲು ಇನ್‌ಸ್ಟಿಟ್ಯೂಟ್‌ನ ಗೇಟ್‌ ನಲ್ಲಿದ್ದ ಭದ್ರತಾ ಸಿಬ್ಬಂದಿ ತೀಸ್ತಾ ಸೆಟಲ್ವಾಡ್‌ಗೆ ಪ್ರವೇಶವನ್ನು ನಿರಾಕರಿಸಿದ್ದಾರೆ. ಬಳಿಕ ಅಧ್ಯಾಪಕರು ಮಧ್ಯಪ್ರವೇಶಿಸಿ ಮಾತುಕತೆ ನಡೆಸಿದ್ದಾರೆ. ಅನುಮತಿಗೆ ನಿರಾಕರಣ ಬಳಿಕ ಅವರಿಗೆ ಆರಂಭದಲ್ಲಿ ನಿಯೋಜಿಸಲಾಗಿದ್ದ ಸಭಾಂಗಣದ ಬದಲಿಗೆ ಕ್ಯಾಂಪಸ್ ಕ್ಯಾಂಟೀನ್‌ನಲ್ಲಿ ಭಾಷಣಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಕಾರ್ಯಕ್ರಮದಲ್ಲಿ  ಸುಮಾರು 40 ವಿದ್ಯಾರ್ಥಿಗಳು ಮತ್ತು ನಾಲ್ವರು ಅಧ್ಯಾಪಕರು ಭಾಗವಹಿಸಿದ್ದರು, ಸುಮಾರು 5.45pm ಗೆ ಪ್ರಾರಂಭವಾಯಿತು ಮತ್ತು ಸುಮಾರು 8pmವರೆಗೆ ನಡೆದಿದೆ.

ಹೆಚ್ಚುತ್ತಿರುವ ಗಲಭೆ, ಸಾಮರಸ್ಯದ ಸವಾಲುಗಳು, ದ್ವೇಷವನ್ನು ಹರಡಲು ಸಾಮಾಜಿಕ ಮಾಧ್ಯಮಗಳ ಬಳಕೆ ಮುಂತಾದ ವಿಷಯಗಳ ಬಗ್ಗೆ ಚರ್ಚೆಗಳು ನಡೆದವು ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅಧ್ಯಾಪಕರೊಬ್ಬರು ತಿಳಿಸಿರುವುದಾಗ ಟೆಲಿಗ್ರಾಫ್‌ಗೆ  ವರದಿ ಮಾಡಿದೆ.

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪಾರ್ಥನಿಲ್ ರಾಯ್ ಎಂಬವರು, ಶೈಕ್ಷಣಿಕ ಸಂಸ್ಥೆಗಳಲ್ಲಿ ಮುಕ್ತ ಅಭಿವ್ಯಕ್ತಿಯ ಪ್ರಾಮುಖ್ಯತೆಯನ್ನು ಒತ್ತಿಹೇಳಿದರು. ನಮ್ಮ ಸಂವಿಧಾನವು ನಮಗೆ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ನೀಡುತ್ತದೆ. ಶೈಕ್ಷಣಿಕ ಸಂಸ್ಥೆಗಳು ಚರ್ಚೆಗಳನ್ನು ಹತ್ತಿಕ್ಕಲು ಪ್ರಯತ್ನಿಸಬಾರದು ಎಂದು ಹೇಳಿದ್ದಾರೆ.

“ಬ್ರೇಕ್ ದಿ ಸೈಲೆನ್ಸ್” ಎಂಬ ಹೆಸರಿನ ವಿದ್ಯಾರ್ಥಿಗಳ ಗುಂಪು ಈ ಹಿಂದೆ IISc ಆಡಳಿತ ವಿಭಾಗಕ್ಕೆ ತೆರಳಿ ಕಾರ್ಯಕ್ರಮಕ್ಕೆ  ಅನುಮತಿ ನೀಡುವಂತೆ ಕೇಳಿದ್ದರು. ಆದರೆ ಅವರ ಮನವಿಗೆ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಕಾರ್ಯಕ್ರಮದ ದಿನದಂದು ವಿದ್ಯಾರ್ಥಿಗಳು  ಕೋರಿದ ಸ್ಥಳದಲ್ಲಿ ಅವಕಾಶ ನೀಡಲಾಗುವುದಿಲ್ಲ ಎಂದು ತಿಳಿಸಲಾಗಿದೆ.

ಇದನ್ನು ಓದಿ: ಅಸ್ಸಾಂ: ಬಿಜೆಪಿ ಕಚೇರಿಯಲ್ಲಿ ತಲೆಕೆಳಗಾಗಿ ತ್ರಿವರ್ಣ ಧ್ವಜ ಹಾರಾಟ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...