ಕೇಂದ್ರ ಸರಕಾರ ಹೊಸ ಶಿಕ್ಷಣ ನೀತಿ (NEP) ಗೆ ಅನುಗುಣವಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಪ್ರಕಟಿಸಿದೆ. 2024ರ ಶೈಕ್ಷಣಿಕ ಅವಧಿಗೆ ಹೊಸ ಪಠ್ಯಪುಸ್ತಕಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಹೊಸ ಪಠ್ಯಕ್ರಮದ ಚೌಕಟ್ಟನ್ನು ಶಿಕ್ಷಣ ಸಚಿವಾಲಯ ಪ್ರಕಟಿಸಿದೆ.
ಈ ಕುರಿತು ಮಾಹಿತಿ ನೀಡಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020ರ ಪ್ರಕಾರ ಹೊಸ ಪಠ್ಯಕ್ರಮ ಚೌಕಟ್ಟು ಸಿದ್ಧವಾಗಿದೆ ಮತ್ತು 2024 ರ ಶೈಕ್ಷಣಿಕ ಅವಧಿಗೆ ಪಠ್ಯಪುಸ್ತಕಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದ್ದಾರೆ.
11 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳು ಎರಡು ಭಾಷೆಗಳನ್ನು ಅಧ್ಯಯನ ಮಾಡಬೇಕಾಗಿದೆ ಮತ್ತು ಅವುಗಳಲ್ಲಿ ಕನಿಷ್ಠ ಒಂದು ಭಾರತೀಯ ಭಾಷೆಯಾಗಿರಬೇಕು ಎಂದು ಹೇಳಿದ್ದಾರೆ.
ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲಾಗುವುದು, ವಿದ್ಯಾರ್ಥಿಗಳಿಗೆ ಉತ್ತಮ ಅಂಕಗಳನ್ನು ಪಡೆಯಲು ಸಹಕಾರಿಯಾಗಲಿದೆ ಎಂದು ಸಚಿವಾಲಯ ಹೇಳಿದೆ.
ಬೋರ್ಡ್ ಪರೀಕ್ಷೆಗಳ ಮಹತ್ವವು ವಿದ್ಯಾರ್ಥಿಗಳ ವಿಷಯಗಳ ಗ್ರಹಿಕೆಯನ್ನು ಮೌಲ್ಯಮಾಪನ ಮಾಡುವುದರ ಮೇಲೆ ಇರುತ್ತದೆ. ಇದು ವ್ಯಾಪಕವಾದ ತರಬೇತಿ ಮತ್ತು ಕಂಠಪಾಠದ ಅಗತ್ಯವನ್ನು ಕಡಿಮೆ ಮಾಡುತ್ತದೆ.
ಇದಲ್ಲದೆ 11ನೇ ಮತ್ತು 12ನೇ ತರಗತಿಗಳಲ್ಲಿ ವಿಷಯಗಳ ಆಯ್ಕೆಯು ಇನ್ನು ಮುಂದೆ ಸೀಮಿತವಾಗಿರುವುದಿಲ್ಲ, ವಿದ್ಯಾರ್ಥಿಗಳಿಗೆ ತಮ್ಮದೇ ಆದ ಆಯ್ಕೆಗಳನ್ನು ಮಾಡಲು ಅವಕಾಶ ನೀಡುತ್ತದೆ ಎಂದು ಸಚಿವಾಲಯ ಹೇಳಿದೆ.
ಇದನ್ನು ಓದಿ: ಸವರ್ಣಿಯ ಶಾಸಕನಿಂದ ಹಲ್ಲೆಗೊಳಗಾಗಿ 17 ತಿಂಗಳು ಆಸ್ಪತ್ರೆ ಪಾಲಾದ ದಲಿತ ಎಂಜಿನಿಯರ್


